ಕೊಪ್ಪಳ | ಟಿಕೆಟ್‌ ಕೊಡುವುದಾಗಿ ನಂಬಿಸಿ ಜೆಡಿಎಸ್‌ ನಾಯಕರು ಮೋಸ ಮಾಡಿದ್ದಾರೆ; ಸಾಧಿಕ್‌ ಅತ್ತಾರ್‌ ಆರೋಪ

Date:

ಜೆಡಿಎಸ್‌ ನಾಯಕ ಎಚ್‌.ಡಿ ಕುಮಾರಸ್ವಾಮಿ ನನಗೆ ಟಿಕೆಟ್ ಕೊಡುವುದಾಗಿ ನಂಬಿಸಿ ಮೋಸ ಮಾಡಿದ್ದಾರೆ. ಅವರ ಮಾತು ಕೇಳಿಕೊಂಡು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಮಾಡಿದ್ದೇನೆ. ಆದರೂ, ಇನ್ನೊಂದು ಪಕ್ಷದಿಂದ ಬಂದ ಸಿ.ವಿ ಚಂದ್ರಶೇಖರ್‌ಗೆ ಟಿಕೆಟ್ ನೀಡಲಾಗಿದೆ ಎಂದು ಕೊಪ್ಪಳ ಕ್ಷೇತ್ರದ ಜೆಡಿಎಸ್‌ ಟಿಕೆಟ್‌ ಆಕಾಂಕ್ಷಿಯಾಗಿದ್ದ ಸಾಧಿಕ್‌ ಅತ್ತಾರ್‌ ಅಸಮಾಧಾನ ವ್ಯಕ್ತಪಡಿಸಿದರು.

ಕೊಪ್ಪಳದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು “ನಾನು ಜೆಡಿಎಸ್ ಟಿಕೆಟ್‌ ಆಕಾಂಕ್ಷಿಯಾಗಿದ್ದೆ ಎನ್ನುವುದು ಕುಮಾರಸ್ವಾಮಿ ಅವರಿಗೆ ಗೊತ್ತಿತ್ತು. ಅದಕ್ಕಾಗಿ 1 ಲಕ್ಷ ರೂ. ಹಣ ಕಟ್ಟಿಸಿಕೊಂಡಿದ್ದಾರೆ. ಇದೀಗ ಯಾರಿಗೂ ವಿಷಯ ತಿಳಿಸದೇ ಹೊಸಬರನ್ನು ಪಕ್ಷಕ್ಕೆ ಸೇರಿಸಿಕೊಂಡು ಮಣೆ ಹಾಕಿದ್ದಾರೆ” ಎಂದು ಆರೋಪಿಸಿದರು.

“ಕೊಪ್ಪಳ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ 50 ಸಾವಿರ ಮಂದಿ ಇದ್ದರೂ ಅವರಿಗೆ ಅವಕಾಶ ಕೊಟ್ಟಿಲ್ಲ. ಆದ್ದರಿಂದ ನಿಮಗೇ ಟಿಕೆಟ್‌ ಕೊಡುತ್ತೇನೆ ಎಂದು ಕುಮಾರಸ್ವಾಮಿ ಹೇಳಿದ್ದರು. ಅವರ ಮಾತಿನ ಭರವಸೆ ಮೇರೆಗೆ ಗ್ರಾಮೀಣ ಭಾಗದಲ್ಲಿ ಈಗಾಗಲೇ ಒಂದು ಸುತ್ತು ಪ್ರಚಾರ ಮುಗಿಸಿದ್ದೇನೆ. ಬೇರೊಬ್ಬರಿಗೆ ಟಿಕೆಟ್‌ ಕೊಡುವಾಗ ಆಕಾಂಕ್ಷಿಗಳನ್ನು ಕರೆದು ಮಾತನಾಡಿ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಿತ್ತು” ಎಂದು ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಜೆಡಿಎಸ್‌ನ ಜಿಲ್ಲಾ ಘಟಕದ ಅಧ್ಯಕ್ಷ ವೀರೇಶ ಮಹಾಂತಯ್ಯನಮಠ ರಬ್ಬರ್‌ ಸ್ಟಾಂಪ್‌ ಆಗಿದ್ದಾರೆ. ಅವರಿಗೆ ಸಂಘಟನೆ, ಪಕ್ಷ ಏನೂ ಬೇಕಿಲ್ಲ. ಆದ್ದರಿಂದ ನಮ್ಮ ಸಮುದಾಯದ ಜನರ ಜೊತೆ ಸಭೆ ನಡೆಸಿ ಶೀಘ್ರದಲ್ಲಿಯೇ ಮುಂದಿನ ನಡೆ ತೀರ್ಮಾನಿಸಲಾಗುವುದು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಚುನಾವಣೆ 2023 | ಯಾದಗಿರಿ: ಒಂದು ರೂ. ನಾಣ್ಯ ಸಂಗ್ರಹದಿಂದ ಠೇವಣಿ ಭರಿಸಿದ ಪಕ್ಷೇತರ ಅಭ್ಯರ್ಥಿ

ಅತ್ತಾರ್‌ ತಂದೆ ಅಪ್ಸರಸಾಬ್ ಮಗನಿಗೆ ಟಿಕೆಟ್‌ ನೀಡದ್ದಕ್ಕೆ ಕಣ್ಣೀರು ಹಾಕಿದ್ದು, “ಕುಮಾರಸ್ವಾಮಿ ಹಾಗೂ ಸಿ.ಎಂ.ಇಬ್ರಾಹಿಂ ಸುಳ್ಳು ಭರವಸೆ ನೀಡಿ ಮೋಸ ಮಾಡಿದ್ದಾರೆ. ಸ್ವಾಭಿಮಾನ, ಒಳ್ಳೆಯತನವಿದ್ದವರು ರಾಜಕಾರಣಕ್ಕೆ ಬರಬಾರದು” ಎಂದು ಅವಲತ್ತುಕೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ‘ದಿಂಗಾಲೇಶ್ವರ ಸ್ವಾಮೀಜಿ ನೀಡಿದ ಹೇಳಿಕೆಗೂ, ಮುರುಘಾಮಠಕ್ಕೂ ಯಾವುದೇ ಸಂಬಂಧವಿಲ್ಲ’

ಮಾರ್ಚ್ 27ರಂದು ಹುಬ್ಬಳ್ಳಿ ಮೂರುಸಾವಿರ ಮಠದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ...

ಬೆಂಗಳೂರು | ಐಟಿ, ಬಿಟಿ ಕಂಪನಿಗಳಿಗೆ ಸಮರ್ಪಕ ನೀರು ಪೂರೈಕೆಗೆ ಬದ್ಧ: ಜಲಮಂಡಳಿ ಅಧ್ಯಕ್ಷ

“ಬೆಂಗಳೂರಿನ ಇತರೆ ಪ್ರದೇಶಗಳಂತೆಯೇ, ನಗರದ ಹೊರವಲಯದಲ್ಲಿರುವ ಐಟಿ-ಬಿಟಿ ಕಂಪನಿಗಳಿಗೂ ನೀರಿನ ಕೊರತೆಯಾಗದಂತೆ...

ಗದಗ | ಮನರೇಗಾ ಯೋಜನೆಯ ಲಾಭ ಬಡವರಿಗೆ ದೊರಕಲಿ: ಬಸವರಾಜ ಗಿರಿತಿಮ್ಮಣ್ಣವರ 

ಮನರೇಗಾ ಯೋಜನೆಯಡಿ ಈ ಬಾರಿ ಸಮುದಾಯ ಕಾಮಗಾರಿಗಳನ್ನು ಸಮರ್ಪಕವಾಗಿ ಕಾರ್ಯ ರೂಪಕ್ಕೆ...