ಕೊಪ್ಪಳ | ʼಬಂದ್‌ʼ ಯಶಸ್ವಿ: ಕೇಂದ್ರ ಸಚಿವ ಅಮಿತ್‌ ಶಾ ಗಡಿಪಾರಿಗೆ ಆಗ್ರಹ

Date:

ಸಂಸತ್ತಿನಲ್ಲಿ ಡಾ. ಬಿ ಆರ್‌ ಅಂಬೇಡ್ಕರ್ ಕುರಿತು‌ ಕೇಂದ್ರ ಸಚಿವ ಅಮಿತ್‌ ಶಾ ಅಗೌರವದ ಹೇಳಿಕೆ ನೀಡಿದ್ದನ್ನು ವಿರೋಧಿಸಿ ಕೊಪ್ಪಳದಲ್ಲಿ ನಡೆಸಿದ ‘ಬಂದ್’ ಸಂಪೂರ್ಣ ಯಶಸ್ವಿಯಾಗಿದೆ.

- Advertisement -

‘ಬಂದ್’ ಪರಿಣಾಮ ನಗರದ ಬೀದಿ ವ್ಯಾಪಾರಿಗಳು, ಹೋಟೆಲ್, ಕಿರಾಣಿ ಅಂಗಡಿ ಸೇರಿದಂತೆ ಹಲವು ವ್ಯಾಪಾರಸ್ಥರು ವ್ಯಾಪಾರ-ವಹಿವಾಟುಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿ, ಸ್ವಯಂಪ್ರೇರಿತರಾಗಿ ‘ಬಂದ್’ಗೆ ಬೆಂಬಲ ಸೂಚಿಸಿದರು. ಪ್ರತಿಭಟನಾಕಾರರು ನಗರದ ಅಶೋಕ ಸರ್ಕಲ್ ಮೂಲಕ ಹಾದು ಪಟ್ಟಣದ ಮುಖ್ಯ ಬೀದಿಗಳಲ್ಲಿ ‘ಅಂಬೇಡ್ಕರ್ ನಮ್ಮ ಉಸಿರು, ಅಂಬೇಡ್ಕರ್, ಅಂಬೇಡ್ಕರ್’, ‘ಕೊಲೆಗಡುಕ ಅಮಿತ್ ಶಾ ಅವರನ್ನ ಗಡಿಪಾರು ಮಾಡಿ’ ಎಂದು ಆಗ್ರಹಿಸಿ ಕೇಂದ್ರ‌ ಸಚಿವರ ವಿರುದ್ಧ ಘೋಷಣೆ ಕೂಗಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...
WhatsApp Image 2025 01 06 at 10.43.17 PM

ಅಶೋಕ ಸರ್ಕಲ್‌ನಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಕವಿ, ಲಡಾಯಿ ಪ್ರಕಾಶಕ, ಬಂಡಾಯ ಹೋರಾಟಗಾರ ಬಸವಾರಾಜ್ ಸೂಳಿಬಾವಿ ಮಾತನಾಡಿ “ಅಂಬೇಡ್ಕರ್ ಕುರಿತು ಅಮಿತ್ ಶಾ ನಿಂತು ಮಾತನಾಡಿದ ಭವನ ಕೂಡಾ ಅಂಬೇಡ್ಕರ್ ಅವರಿಂದ ಅಸ್ತಿತ್ವಕ್ಕೆ ಬಂದಿದ್ದು ಎಂಬುದನ್ನು ಸಚಿವರು ತಿಳಿದುಕೊಳ್ಳಬೇಕು. ಅವರು ಗೃಹ ಮಂತ್ರಿ ಆಗಲಿಕ್ಕೆ ಮೂಲ ಕಾರಣ ಸಂವಿಧಾನವೇ ಹೊರತು ದೇವರಲ್ಲ” ಎಂದು ವಾಗ್ದಾಳಿ ನಡೆಸಿದರು.

“ಧರ್ಮ- ದೇವರ ಹೆಸರಿನಲ್ಲಿ ಸಮಾಜವನ್ನು ಒಡೆಯುತ್ತಿದ್ದೀರಿ. ಚಹಾ ಮಾರುವವರನ್ನು ಈ ದೇಶದ ಸಂವಿಧಾನ ಪ್ರಧಾನಿಯನ್ನಾಗಿ ಮಾಡಿದೆ. ಸ್ವರ್ಗ ನರಕ ನಿಮ್ಮ ಕಲ್ಪನೆಯ ಕಥೆಯೇ ಹೊರತು ವಾಸ್ತವ ಅಲ್ಲ. ಅದರಿಂದ ಶೋಷಣೆಗೆ ಒಳಗಾದ ಮಹಿಳೆಯರು, ದಲಿತರು ಹಿಂದುಳಿದವರು ಎಚ್ಚೆತ್ತುಕೊಳ್ಳಬೇಕಿದೆ” ಎಂದು ಕರೆಕೊಟ್ಟರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಚಿಂಚೋಳಿ ಬಂದ್‌ಗೆ ಉತ್ತಮ ಸ್ಪಂದನೆ : ಅಮಿತ್ ಶಾ ಅವರ ಅಣಕು ಶವಯಾತ್ರೆ

ನಗರ ಸಭೆ ಅಧ್ಯಕ್ಷ ಅಮ್ಜದ್ ಪಟೇಲ್ ಮಾತನಾಡಿ, “ನಾವು ಬಂದಿದ್ದೇ ಸಂವಿಧಾನ ಬದಲಾಯಿಸಲು ಎಂದು ಸಚಿವರು ಬಹಿರಂಗವಾಗಿ ಹೇಳಿದ್ದರು. ಇವರಿಗೆ ದಮ್ಮಿದ್ರೆ ಸಂವಿಧಾನ ಬದಲಾಯಿಸಲಿ.. ಇಡೀ ದೇಶದಲ್ಲಿ ರಕ್ತ ಹರಿಯುತ್ತದೆ. ನಮ್ಮ ದೇಶದ ಸಂವಿಧಾನವನ್ನು ಮೆಚ್ಚಿ ಅನೇಕ ದೇಶಗಳು ಬಾಬಾ ಸಾಹೇಬರ ಸಲಹೆ ಪಡೆದಿವೆ. ಅದನ್ನೇ ಬದಲಾಯಿಸುತ್ತೀವಿ ಎಂದು ಗಡಿಪಾರು ಆದಂತಹವರು ಮಾತನಾಡುತ್ತೀರಾ? ಇನ್ನೊಮ್ಮೆ ಸಂವಿಧಾನ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ತಂಟೆಗೆ ಬಂದರೆ ಇಡೀ ದೇಶ ಹೊತ್ತಿ ಉರಿಯುತ್ತದೆ” ಎಂದು ಎಚ್ಚರಿಕೆ ನೀಡಿದರು.

WhatsApp Image 2025 01 06 at 10.43.16 PM

ಜ್ಯೋತಿ ಗೊಂಡಬಾಳ ಮಾತನಾಡಿ “ಹೋರಾಟ ಮಾಡಿ ಸ್ವಾತಂತ್ರ್ಯ ಪಡೆದವರು ನಾವು, ಇವತ್ತು ಮತ್ತೆ ನಮ್ಮ ಹಕ್ಕಿಗಾಗಿ, ಸಮಾನತೆ, ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಬೇಕಾದ ಸಂದರ್ಭ ಬರುತ್ತಿರುವುದು ದುರದೃಷ್ಟಕರ. ಈ ಹೋರಾಟಕ್ಕೆ ಸಜ್ಜಾಗಲು ಧೈರ್ಯ, ಸ್ಥೈರ್ಯ ಕೊಟ್ಟಿದ್ದು ಸಂವಿಧಾನ. ಸಂವಿಧಾನವನ್ನು ತಲೆ ಮೇಲೆ ಹೊತ್ತುಕೊಂಡು ನಾಟಕೀಯವಾಗಿ ನಡೆದುಕೊಳ್ಳುವ ಪ್ರಧಾನಿಗಳು ಉದ್ಧಟತನದಿಂದ ನಡೆದುಕೊಳ್ಳುವವರ ವಿರುದ್ಧ ಮೌನವಾಗಿರುತ್ತಾರೆ.  ಮನುವಾದಿಗಳ ಕುತಂತ್ರ ಏನು ಎಂಬುದನ್ನ ಅರ್ಥ ಮಾಡಿಕೊಳ್ಳಬೇಕು” ಎಂದು ಹೇಳಿದರು.

ಸಾವಿತ್ರಿ ಮುಜುಮ್‌ದಾರ ಮಾತಾನಾಡಿ, “ಮಹಿಳೆಯರು ಎಲ್ಲ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದ್ದಾರೆ ಅಂದರೆ, ಅದಕ್ಕೆ ಅಂಬೇಡ್ಕರ್ ರಚಿಸಿದ ಸಂವಿಧಾನವೇ ಕಾರಣ. ಅಂಬೇಡ್ಕರ್ ನಿಮಗೆ ಒಪ್ಪಿಗೆ ಇಲ್ಲದಿದ್ದರೆ ನಿಮ್ಮ ದೇವರನ್ನು ಸ್ಮರಿಸಿ ಸ್ವರ್ಗಕ್ಕೆ ಹೋಗಬಹುದು. ಮಣಿಪುರದಲ್ಲಿ ಮಹಿಳೆಯರ ಮೇಲೆ ಅತ್ಯಾಚಾರ ಆದರೂ ತುಟಿ ಬಿಚ್ಚದ ನಿಮಗೆ ಅಂಬೇಡ್ಕರ್ ಬಗ್ಗೆ ಮಾತನಾಡುವ ಹಕ್ಕುಇಲ್ಲ. ಸ್ವರ್ಗ ನರಕ ನಮಗೆ ಗೊತ್ತಿಲ್ಲ ನಮಗೆ ದುಡಿದು ತಿನ್ನುವುದು ಮಾತ್ರ ಗೊತ್ತು” ಎಂದು ಆಕ್ರೋಶ ವ್ಯಕ್ತಪಡಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...