ಕಡೇ ಕ್ಷಣದ ಹೈಡ್ರಾಮ: ಕೊತ್ತೂರು ಮಂಜು ಒತ್ತಡಕ್ಕೆ ಮುಳುಬಾಗಿಲು ಅಭ್ಯರ್ಥಿಯನ್ನೇ ಬದಲಿಸಿದ ಕಾಂಗ್ರೆಸ್

Date:

  • ಮುಳುಬಾಗಿಲು ಕ್ಷೇತ್ರದ ಅಭ್ಯರ್ಥಿ ಬದಲಾಯಿಸಿದ ಕಾಂಗ್ರೆಸ್
  • ಡಾ. ಮುದ್ದುಗಂಗಾಧರ್ ಬದಲಿಗೆ ಆದಿನಾರಾಯಣಗೆ ಟಿಕೆಟ್

ನಾಮಪತ್ರ ಸಲ್ಲಿಸಲು ಇಂದು(ಏಪ್ರಿಲ್ 20) ಕೊನೆ ದಿನವಾಗಿರುವ ಇಂದೇ ಕಾಂಗ್ರೆಸ್‌ ಟಿಕೆಟ್ ಹಂಚಿಕೆ ವಿಚಾರದಲ್ಲೊಂದು ಹೈಡ್ರಾಮಾ ನಡೆದಿದೆ.

ಕೋಲಾರ ಕಾಂಗ್ರೆಸ್ ಅಭ್ಯರ್ಥಿ ಕೊತ್ತೂರು ಮಂಜು ಒತ್ತಡಕ್ಕೆ ಮಣಿದು ಮುಳುಬಾಗಿಲು ಕ್ಷೇತ್ರದ ಅಭ್ಯರ್ಥಿಯನ್ನೇ ಪಕ್ಷ ಬದಲಾಯಿಸಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಅಭ್ಯರ್ಥಿಯಾಗಿ ಘೋಷಿಸಿದ್ದ ಡಾ. ಬಿ ಸಿ ಮುದ್ದು ಗಂಗಾಧರ್ ಬದಲಿಗೆ ಆದಿನಾರಾಯಣಗೆ ಪಕ್ಷ ಟಿಕೆಟ್ ನೀಡಿದೆ.

ತೀವ್ರ ಕಗ್ಗಂಟಾಗಿ ಉಳಿದಿದ್ದ ಮುಳುಬಾಗಿಲು ಕ್ಷೇತ್ರಕ್ಕೆ ಅಳೆದು ತೂಗಿ ನಾಮಪತ್ರ ಸಲ್ಲಿಕೆಗೆ ಒಂದು ದಿನ ಬಾಕಿ ಇರುವಂತೆ (ಬುಧವಾರ ರಾತ್ರಿ) 5ನೇ ಪಟ್ಟಿಯಲ್ಲಿ ಅಭ್ಯರ್ಥಿಯನ್ನು ಘೋಷಣೆ ಮಾಡಿತ್ತು.

ಈ ಸುದ್ದಿ ಓದಿದ್ದೀರಾ?:ಮೈತ್ರಿ ಬಗ್ಗೆ ಮಾತನಾಡುವ ಸಿದ್ದರಾಮಯ್ಯಗೆ ಭಯ ಹುಟ್ಟಿಕೊಂಡಿದೆ : ಸಿಎಂ ಬೊಮ್ಮಾಯಿ

ಆದರೆ ಮುದ್ದುಗಂಗಾಧರ್ ವಿಚಾರದಲ್ಲಿ ಅಪಸ್ವರ ಪ್ರಕಟಿಸಿದ ಕೊತ್ತೂರು ಮಂಜು ತಮ್ಮ ಬೆಂಬಲಿಗ ಆದಿನಾರಾಯಣ್‌ಗೆ ಟಿಕೆಟ್ ನೀಡಲು ಪಕ್ಷದ ವರಿಷ್ಠರ ಮೇಲೆ ಒತ್ತಡ ತಂದರು. ಇದಾಗದಿದ್ದಲ್ಲಿ ಮುಳುಬಾಗಿಲಿನ ಪಕ್ಷ ಸಂಘಟನೆಯಿಂದ ಹಿಂದೆ ಸರಿಯುವುದಾಗಿ ಹೇಳಿದ್ದರಂತೆ.

ಕೊನೆಯ ಕ್ಷಣದಲ್ಲಿ ಬಂದ ಬದಲಾವಣೆ ವಿಚಾರಕ್ಕೆ ಒಪ್ಪಿಗೆ ನೀಡಿದ ಕಾಂಗ್ರೆಸ್ ವರಿಷ್ಠರು ಮುದ್ದು ಗಂಗಾಧರ್ ಮನವೊಲಿಸಿ, ಆದಿನಾರಾಯಣ್‌ಗೆ ಟಿಕೆಟ್ ಅಂತಿಮಗೊಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಿತೀಶ್ ಪ್ರಯಾಣಕ್ಕೆ ಸಂಚಾರ ತಡೆ; ಟ್ರಾಫಿಕ್‌ನಲ್ಲಿ ಸಿಲುಕಿದ ಜೀವನ್ಮರಣ ಹೋರಾಟ ನಡೆಸುತ್ತಿದ್ದ ಮಗು

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಪ್ರಯಾಣಕ್ಕಾಗಿ ಪೊಲೀಸರು ರಸ್ತೆಯಲ್ಲಿ ಇತರ ವಾಹನ...

ಕಾವೇರಿ ನೀರು ನಿರ್ವಹಣಾ ಮಂಡಳಿಗೆ ಮರುಪರಿಶೀಲನಾ ಅರ್ಜಿ ಸಲ್ಲಿಕೆ: ಸಿದ್ದರಾಮಯ್ಯ

ಕಾವೇರಿ ನೀರು ಬಿಡುವ ಆದೇಶಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿರ್ವಹಣಾ ಮಂಡಳಿ...

‘ಒದೆ ತಿಂದ ಕಳ್ಳನಿಗೆ ಕೊನೆಗೆ ಬುದ್ಧಿ ಬಂತಂತೆ’ ಇದು ರಾಜ್ಯ ಸರ್ಕಾರದ ಪರಿಸ್ಥಿತಿ: ಈಶ್ವರಪ್ಪ ಲೇವಡಿ

ಡಿಕೆ ಶಿವಕುಮಾರ್‌ ಅವರ ಕುತಂತ್ರದಿಂದ ರಾಜ್ಯದ ಜನರಿಗೆ ಸಮಸ್ಯೆ ನೀರು ಬಿಡುವುದಕ್ಕಿಂತ ಮೊದಲೇ...

ದಾವಣಗೆರೆ | ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್ : ದೂರು ದಾಖಲು

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್‌ ಹಾಕಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು...