ರಾಷ್ಟ್ರೀಯ ಪಕ್ಷಗಳು ಲಿಂಗಾಯತ ನಾಯಕನನ್ನು ಸಿಎಂ ಮಾಡುತ್ತೇವೆ ಎಂದು ಘೋಷಿಸಲಿ: ಮೃತ್ಯುಂಜಯ ಸ್ವಾಮೀಜಿ

Date:

ಎಲ್ಲ ರಾಷ್ಟ್ರೀಯ ಪಕ್ಷಗಳು ಲಿಂಗಾಯತ ಸಮಾಜದ ವ್ಯಕ್ತಿಯನ್ನು ಮುಖ್ಯಮಂತ್ರಿಯನ್ನಾಗಿ ಮಾಡುವ ಬದ್ಧತೆ ಪ್ರಕಟಿಸುವ ಮೂಲಕ ತಮ್ಮ ಸ್ಪಷ್ಟ ನಿಲುವು ತಿಳಿಸಬೇಕು ಎಂದು ಕೂಡಲಸಂಗಮದ ಪಂಚಮಸಾಲಿ ಸಮಾಜ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.

ಬೆಳಗಾವಿ ಜೆಲ್ಲೆಯ ಮೂಡಲಗಿಯಲ್ಲಿ ಬಸವ ಸೇವಾ ಯುವಕ ಸಂಘ ಸೋಮವಾರ ಆಯೋಜಿಸಿದ್ದ ಮೂಡಲಗಿ ತಾಲ್ಲೂಕು ಮಟ್ಟದ ಬಸವ ಉತ್ಸವದ ಬೃಹತ್ ಮೆರವಣಿಗೆಗೆ ಚಾಲನೆ ನೀಡಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು.

“ರಾಜಕಾರಣಿಗಳು ಲಿಂಗಾಯತ ಸಮಾಜವನ್ನು ರಾಜಕೀಯ ದಾಳವನ್ನಾಗಿ ಮಾಡಿಕೊಂಡು ಟೀಕೆ, ಟಿಪ್ಪಣಿ ಮಾಡುವುದನ್ನು ಬಿಡಬೇಕು” ಎಂದು ಸ್ವಾಮೀಜಿ ಎಚ್ಚರಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ರಾಜಕಾರಣಿಗಳು ಮಾಡುವ ಟೀಕೆಗಳು ವೈಯಕ್ತಿಕವಾಗಿರಲಿ. ಅದನ್ನು ಬಿಟ್ಟು ಒಂದು ಸಮಾಜ, ಜನಾಂಗ, ಧರ್ಮವನ್ನು ನೋಯಿಸುವ ಮಟ್ಟಕ್ಕೆ ಇರಬಾರದು. ಇದು ಯಾವ ರಾಜಕಾರಣಿಗಳಿಗೂ ಶೋಭೆ ತರಲ್ಲ” ಎಂದರು.

“ಲಿಂಗಾಯತ ಹೇಳಿಕೆ ವಿಚಾರವಾಗಿ ಸಿದ್ದರಾಮಯ್ಯನವರು ಈಗಾಗಲೇ ತಮ್ಮ ಸ್ಪಷ್ಟಿಕರಣ ನೀಡಿದ್ದಾರೆ. ಅವರ ಹೇಳಿಕೆಯನ್ನು ಮತ್ತೆ ಮುಂದುವರಿಸುವುದು ಬೇಡ” ಎಂದು ಸ್ವಾಮೀಜಿ ನುಡಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಬರ ಪರಿಹಾರ ಸಾಕು’ ಎಂದಿರುವ ಕುಮಾರಸ್ವಾಮಿ ನಾಡದ್ರೋಹಿ: ಡಿಸಿಎಂ ಡಿಕೆಶಿ ವಾಗ್ದಾಳಿ

"ಕೇಂದ್ರ ಸರ್ಕಾರ ಕರ್ನಾಟಕದ ಬರಕ್ಕೆ ಅಲ್ಪ ಪರಿಹಾರ ಮೊತ್ತ ಘೋಷಿಸಿದ್ದು, ನಾವು...

ಹಿಂದುಳಿದ ಸಮುದಾಯಗಳೇ ಎಚ್ಚರ, ಮೋದಿ ನಿಮ್ಮ ಹಾದಿ ತಪ್ಪಿಸುತ್ತಿದ್ದಾರೆ: ಘರ್ಜಿಸಿದ ಸಿದ್ದರಾಮಯ್ಯ

ರಾಜ್ಯದ ಹಿಂದುಳಿದ ಸಮುದಾಯಗಳೇ ಎಚ್ಚರ. ಮೋದಿ ನಿಮ್ಮ ಹಾದಿ ತಪ್ಪಿಸಿ ಮುಸ್ಲಿಮರ...

ಪಿಎಂ ಮೋದಿ ಸೂಪರ್‌ ಮ್ಯಾನ್ ಅಲ್ಲ ದುಬಾರಿ ಮ್ಯಾನ್: ಪ್ರಿಯಾಂಕಾ ಗಾಂಧಿ ವ್ಯಂಗ್ಯ

ಪ್ರಧಾನಿ ನರೇಂದ್ರ ಮೋದಿ ಸೂಪರ್ ಮ್ಯಾನ್ ಅಲ್ಲ ಬದಲಾಗಿ ಅವರು ದುಬಾರಿ...