ನೆಹರು ಓಲೇಕಾರ್ ದಾಖಲೆ ಸಹಿತ 1,500 ಕೋಟಿ ಆರೋಪ ಸಾಬೀತು ಮಾಡಲಿ: ಸಿಎಂ ಬೊಮ್ಮಾಯಿ

Date:

  • ನೆಹರೂ ಓಲೇಕಾರ್ ಆರೋಪ ಅಲ್ಲಗಳೆದ ಮುಖ್ಯಮಂತ್ರಿ
  • ಬಹುತೇಕ ಕಡೆ ಪಕ್ಷದ ಭಿನ್ನಮತ ಶಮನ ಆಗಲಿದೆ: ಬೊಮ್ಮಾಯಿ

ನೆಹರು ಓಲೇಕಾರ್ ಯಾವ ಆರೋಪ ಬೇಕಾದರೂ ಮಾಡಲಿ. ದಾಖಲೆ ಸಹಿತ 1,500 ಕೋಟಿ ಆರೋಪ ಸಾಬೀತು ಮಾಡಲಿ. ಕೇವಲ ಹೇಳಿಕೆ ಬೇಡ, ದಾಖಲೆ ನೀಡಲಿ ಎಂದು ಸಿಎಂ ಬೊಮ್ಮಾಯಿ ಹೇಳಿದರು.

ಮಂಗಳೂರಲ್ಲಿ ಗುರುವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, “ನೆಹರೂ ಓಲೇಕಾರ್ ಆರೋಪಗಳಲ್ಲಿ ಹುರುಳಿಲ್ಲ” ಎಂದರು.

“ಅಸಮಾಧಾನಗೊಂಡ ನಾಯಕರ ಜೊತೆ ಪಕ್ಷದ ಹಿರಿಯರು ಮಾತನಾಡುತ್ತಿದ್ದು, ಭಿನ್ನಮತ ಶಮನವಾಗುತ್ತದೆ. ಲಕ್ಷ್ಮಣ ಸವದಿ ಜನರ ವಿಶ್ವಾಸ ಉಳಿಸಿಕೊಳ್ಳಬೇಕು. ಅವರು ಹಿರಿಯರು. ಅವರಿಗೂ ಭಾವನೆಗಳಿವೆ. ಸುದೀರ್ಘ ಕಾಲ ಸಾರ್ವಜನಿಕ ಜೀವನದಲ್ಲಿದ್ದಾರೆ. ಆದ್ದರಿಂದ ಕ್ಷೇತ್ರದ ಜನರ ವಿಶ್ವಾಸವನ್ನು ಅವರು ಉಳಿಸಬೇಕಾಗಿದ್ದು, ಆ ಕಡೆಯಿಂದಲೂ ಒತ್ತಡವಿದೆ. ಎಲ್ಲ ಸರಿಯಾಗುತ್ತದೆ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಬಿಜೆಪಿ ಎರಡನೇ ಪಟ್ಟಿ ಬಿಡುಗಡೆಯಾಗಿದೆ. ಇನ್ನೂ 12 ಕ್ಷೇತ್ರ ಉಳಿದಿದೆ. ಕೆಲವೆಡೆ ಆಕಾಂಕ್ಷಿಗಳು, ವಿಧಾನ ಪರಿಷತ್ ಸದಸ್ಯರು ರಾಜೀನಾಮೆ ಕೊಟ್ಟಿದ್ದಾರೆ. ಬದಲಿಸೋದು ಸಾಮಾನ್ಯ, ಆಗ್ತಾ ಇರುತ್ತೆ. ಅಸಮಾಧಾನಗೊಂಡವರ ಮನವೊಲಿಕೆ ಮಾಡುತ್ತೇವೆ.  ಪಕ್ಷದಲ್ಲಿ ಎದ್ದಿರುವ ಅಸಮಾಧಾನ ಸರಿಪಡಿಸಲಾಗುತ್ತಿದೆ. ಕಾರ್ಯಕರ್ತರು ಗಟ್ಟಿ ಇದ್ದಾರೆ, ಇದರಿಂದ ಯಾವುದೇ ಹಾನಿಯಾಗುವುದಿಲ್ಲ ಬಹುತೇಕ ಕಡೆ ಪಕ್ಷದ ಭಿನ್ನಮತ ಶಮನ ಆಗಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

“ಕಾಂಗ್ರೆಸ್ ನವರಿಗೆ 60ರಿಂದ 65 ಕ್ಷೇತ್ರಗಳಿಗೆ ಅಭ್ಯರ್ಥಿಗಳೇ ಇಲ್ಲ. ಈಗ ಆಮದು ಮಾಡಿಕೊಳ್ಳುವ ಲೆಕ್ಕಾಚಾರದಲ್ಲಿ ಇದ್ದಾರೆ. ಅವರು ಅಧಿಕಾರಕ್ಕೆ ಬರುವುದಿಲ್ಲ” ಎಂದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಾಮರಾಜನಗರ | ಮತದಾನ ಬಹಿಷ್ಕಾರ; ಮನವೊಲಿಸಲು ಹೋದ ಅಧಿಕಾರಿಗಳ ಮೇಲೆ ಹಲ್ಲೆ

ರಾಜ್ಯ 14 ಕ್ಷೇತ್ರಗಳಲ್ಲಿ ಶಾಂತಿಯುತವಾಗಿ ಮತದಾನ ನಡೆಯುತ್ತಿದ್ದು, ಕೆಲವೆಡೆ ಮತದಾನ ಬಹಿಷ್ಕಾರ...

ಮೋದಿಯವರ ‘ಚಾರ್‌ ಸವ್ ಪಾರ್’ ಘೋಷಣೆ ಹಿಂದಿನ ಉದ್ದೇಶವೇನು? ಅರಿತಿದ್ದಾರೆಯೇ ‘ಒಬಿಸಿ’ಗಳು!

ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನದ ಮೂಲ ರಚನೆಯನ್ನು ಬದಲಾಯಿಸುವುದಿಲ್ಲ. ಮೀಸಲಾತಿಯನ್ನು...

ಭಯಗೊಂಡಿರುವ ಪ್ರಧಾನಿ ವೇದಿಕೆಯಲ್ಲೇ ಕಣ್ಣೀರು ಹಾಕಬಹುದು: ರಾಹುಲ್ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ನಡೆಸಿರುವ ವಾಗ್ದಾಳಿಗೆ ತಿರುಗೇಟು ನೀಡಿರುವ...

ಉಡುಪಿ | ನಾನು ಮತ ಹಾಕಿರುವ ಅಭ್ಯರ್ಥಿ ನೂರಕ್ಕೆ ನೂರರಷ್ಟು ಗೆಲ್ಲುತ್ತಾರೆ: ನಟ ರಕ್ಷಿತ್ ಶೆಟ್ಟಿ

ಲೋಕಸಭಾ ಚುನಾವಣೆ ಹಿನ್ನೆಲೆ, ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ರಾಜಕಾರಣಿಗಳು,...