ಬಿಜೆಪಿ ನಡೆ ಬೇಸರ ತರಿಸಿದೆ ಎಂದು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ ಆರ್ ಶಂಕರ್

Date:

  • ರಾಣೇಬೆನ್ನೂರು ಕ್ಷೇತ್ರಕ್ಕೆ ಅರುಣ್ ಕುಮಾರ್​ಗೆ ಬಿಜೆಪಿ ಟಿಕೆಟ್ ಘೋಷಣೆ
  • ಟಿಕೆಟ್‌ ಸಿಗದ ಬಿಜೆಪಿ ವಿರುದ್ಧ ಅಸಮಾಧಾನ ಹೊರಹಾಕಿದ ಆರ್ ಶಂಕರ್

ರಾಣೇಬೆನ್ನೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ತಪ್ಪಿದ ಹಿನ್ನೆಲೆ ಮಾಜಿ ಸಚಿವ ಆರ್ ಶಂಕರ್ ಅವರು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಬುಧವಾರ (ಏ.12) ರಾಜೀನಾಮೆ ನೀಡಿದ್ದಾರೆ.

ರಾಣೇಬೆನ್ನೂರು ಕ್ಷೇತ್ರದಿಂದ ಶಾಸಕ ಅರುಣ್ ಕುಮಾರ್​ ಅವರಿಗೆ ಬಿಜೆಪಿ ಟಿಕೆಟ್ ಘೋಷಣೆ ಮಾಡಿದೆ. ಇದರಿಂದ ಅಸಮಾಧಾನಗೊಂಡಿರುವ ಆರ್‌ ಶಂಕರ್‌, ಬುಧವಾರ ಮಧ್ಯಾಹ್ನದ ವೇಳೆಗೆ ಸಭಾಪತಿ ಬಸವರಾಜ ಹೊರಟ್ಟಿ ಅವರ ಕಚೇರಿಗೆ ತೆರಳಿ ರಾಜೀನಾಮೆ ನೀಡಿದ್ದಾರೆ.

2018ರಲ್ಲಿ ಕೆಪಿಜೆಪಿಯಿಂದ ಗೆದ್ದು ಶಾಸಕರಾಗಿದ್ದ ಆರ್‌ ಶಂಕರ್‌ ಅವರು ನಂತರ ಕಾಂಗ್ರೆಸ್ ಸೇರಿ ಸಮ್ಮಿಶ್ರ ಸರ್ಕಾರದಲ್ಲಿ ಅರಣ್ಯ ಸಚಿವರಾದರು. ನಂತರ ನಡೆದ ರಾಜಕೀಯ ಬೆಳವಣಿಗೆಯಲ್ಲಿ ಕಾಂಗ್ರೆಸ್‌ ತೊರೆದು ಬಿಜೆಪಿಗೆ ಬೆಂಬಲ ಸೂಚಿಸಿ, ಬಿಜೆಪಿ ಸರ್ಕಾರ ರಚನೆಗೂ ಕಾರಣರಾದರು. ಈಗ ಬಿಜೆಪಿ ಟಿಕೆಟ್ ಸಿಗದೇ ಅತಂತ್ರ ಸ್ಥಿತಿಯಲ್ಲಿ ಸಿಲುಕಿರುವ ಅವರು ಪಕ್ಷೇತರರಾಗಿ ಸ್ಪರ್ಧೆ ಮಾಡುವ ಇಂಗಿತ ವ್ಯಕ್ತಪಡಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಮಗಳು ಬಿಜೆಪಿ ಸೇರಿದ್ದು ಎದೆಗೆ ಚೂರಿ ಹಾಕಿದಂಗಾಗಿದೆ: ಕಾಗೋಡು ತಿಮ್ಮಪ್ಪ ಬೇಸರ

2019ರ ಉಪಚುನಾವಣೆಯಲ್ಲಿ ಆರ್‌ ಶಂಕರ್‌ ಬದಲಾಗಿ ಸ್ಥಳೀಯ ಅಭ್ಯರ್ಥಿ ಅರುಣಕುಮಾರ ಪೂಜಾರ ಅವರಿಗೆ ಬಿಜೆಪಿ ಟಿಕೆಟ್‌ ನೀಡಿ, ಶಂಕರ್‌ ಅವರನ್ನು ವಿಧಾನ ಪರಿಷತ್‌ ಸದಸ್ಯರನ್ನಾಗಿ ಮಾಡಲಾಗಿತ್ತು. ಈ ಬಾರಿ ಅವರು ಬಿಜೆಪಿ ಟಿಕೆಟ್‌ನ ಪ್ರಬಲ ಆಕಾಂಕ್ಷಿಯಾಗಿದ್ದರು. ಬಿಜೆಪಿ ಟಿಕೆಟ್‌ ಸಿಗದ ಕಾರಣ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಜೀನಾಮೆ ಬಳಿಕ ಬಿಜೆಪಿ ವಿರುದ್ಧ ಕಿಡಿಕಾರಿದ ಅವರು, “ನನ್ನನ್ನು ಪಕ್ಷಕ್ಕೆ ಕರೆದುಕೊಂಡ ಹೋದವರು ಯಾರು ಈಗ ಮಾತನಾಡುತ್ತಿಲ್ಲ. ಕಮಿಷನ್, ಜೂಜು ಆರೋಪ ಹೊಂದಿರುವವರಿಗೆ ಟಿಕೆಟ್ ಕೊಟ್ಟಿದ್ದಾರೆ. ಸರ್ಕಾರ ಬರೋಕೆ ಕಾರಣವಾದವನು ನಾನು. ಬೆಕ್ಕಿಗೆ ಗಂಟೆ ಕಟ್ಟುವವರು ಯಾರು ಅನ್ನೋ ಸಂದರ್ಭದಲ್ಲಿ ಕೆಲಸ ಮಾಡಿದ್ದೆ. ಆದರೆ ಈ ರೀತಿ ನಡೆಸಿಕೊಂಡದ್ದು ಬೇಸರ ತಂದಿದೆ” ಎಂದು ಕಿಡಿಕಾರಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಹಾಡಹಗಲೇ ಪಾರ್ಕ್‌ನಲ್ಲಿ ಕುಳಿತಿದ್ದ ಇಬ್ಬರ ಬರ್ಬರ ಹತ್ಯೆ

ರಾಜ್ಯ ರಾಜಧಾನಿ ಬೆಂಗಳೂರಿನ ಸಾರಕ್ಕಿ ಮಾರ್ಕೆಟ್ ಬಳಿಯ ಪಾರ್ಕ್‌ನಲ್ಲಿ ಕುಳಿತಿದ್ದ ಇಬ್ಬರನ್ನು...

ಬೆಂಗಳೂರು |ತಲಾ ₹1 ಲಕ್ಷ ದಂಡ ಬಾಕಿ ಉಳಿಸಿಕೊಂಡಿವೆ 123 ವಾಹನಗಳು

ಹಲವು ಬಾರಿ ಸಂಚಾರ ನಿಯಮ ಉಲ್ಲಂಘಿಸಿ, ಹೆಚ್ಚು ದಂಡಕ್ಕೆ ಗುರಿಯಾಗಿರುವ ವಾಹನಗಳನ್ನು...

ಚಿಕ್ಕಮಗಳೂರು | ಜಯಪ್ರಕಾಶ್ ಹೆಗ್ಡೆ ಮಲೆನಾಡಿನ ಅಡಿಕೆ ಬೆಳೆಗಾರರ ಆಶಾಕಿರಣ: ಬಿ ಎ ರಮೇಶ್ ಹೆಗ್ಡೆ

"ಜಯಪ್ರಕಾಶ್ ಹೆಗ್ಡೆ ಅವರು ಅಡಿಕೆ ಬೆಳೆಗಾರರ ಆಶಾಕಿರಣ. ಕೇವಲ ಎರಡು ವರ್ಷಗಳಲ್ಲಿ...

ಕನ್ನಡ ಸೇರಿ 5 ಭಾಷೆಗಳಲ್ಲಿ ಯೂಟ್ಯೂಬ್ ಚಾನೆಲ್ ಆರಂಭಿಸಿದ ಖ್ಯಾತ ಯೂಟ್ಯೂಬರ್ ಧ್ರುವ್ ರಾಠಿ

ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಪ್ರೊಪಗ್ಯಾಂಡಗಳ ವಿರುದ್ಧ ಟೊಂಕಕಟ್ಟಿ ನಿಂತಿರುವ ದೇಶದ...