ಮಂಡ್ಯ | ಮೇಲುಕೋಟೆ ಕ್ಷೇತ್ರದಲ್ಲಿ ರೈತ ಸಂಘ – ಜೆಡಿಎಸ್‌ ನಡುವೆ ಗಲಾಟೆ

Date:

ಜೆಡಿಎಸ್‌ನ ಭದ್ರಕೋಟೆಯಾಗಿದ್ದ ಮಂಡ್ಯ ಜಿಲ್ಲೆಯ ಮೇಲುಕೋಟೆ ಕ್ಷೇತ್ರವು ಹೈವೋಲ್ಟೇಜ್‌ ಕ್ಷೇತ್ರವಾಗಿ ಹೊಮ್ಮಿದೆ. ಬುಧವಾರ ನಡೆಯುತ್ತಿದ್ದ ಮತದಾನದ ವೇಳೆ ಪಕ್ಷದ ಹಳ್ಳಿಯೊಂದರಲ್ಲಿ ರೈತ ಸಂಘ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ.

ಮೇಲುಕೋಟೆ ವಿಧಾನಸಭಾ ಕ್ಷೇತ್ರದ ನಾರಾಯಣಪುರ ಮತಗಟ್ಟೆಯಲ್ಲಿ ಶಾಸಕ ಸಿ.ಎಸ್‌ ಪುಟ್ಟರಾಜು ಎದುರೇ ರೈತಸಂಘದ ಸದಸ್ಯರು ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ. ಹಿರಿಯ ನಾಗರಿಕರನ್ನು ಕರೆತಂದು ಮತ ಹಾಕಿಸುವ ವಿಚಾರಕ್ಕೆ ಗಲಾಟೆಯಾಗಿದೆ ಎಂದು ತಿಳಿದುಬಂದಿದೆ.

ಗಲಾಟೆ ವೇಳೆ, ವಿಡಿಯೋ ಮಾಡುತ್ತಿದ್ದ ಇಬ್ಬರು ಯುವಕರಿಗೆ ಶಾಸಕ ಪುಟ್ಟರಾಜು ಕಪಾಳಕ್ಕೆ ಹೊಡೆದಿದ್ದಾರೆ.

ಪುಟ್ಟರಾಜು ವಿರುದ್ಧ ರೈತಸಂಘದ ಸದಸ್ಯರು ಘೋಷಣೆ ಕೂಗಿದ್ದಾರೆ. ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ಇತ್ತು. ಸ್ಥಳಕ್ಕೆ ಬಂದ ಪೊಲೀಸರು ಗುಂಪು‌ ಚದುರಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯನಗರ | ತಮ್ಮ ಹಕ್ಕುಗಳಿಗಾಗಿ ಲಿಂಗತ್ವ ಅಲ್ಪಸಂಖ್ಯಾತರ ಹೋರಾಟ

ಲಿಂಗತ್ವ ಅಲ್ಪಸಂಖ್ಯಾತ ಸಮುದಾಯವು ಗೌರವಯುತ ಜೀವನ ನಡೆಸಲು ತಮಗೆ ಲಿಂಗತ್ವ ಅಲ್ಪಸಂಖ್ಯಾತರ...

ಕಲಬುರಗಿ | ಅಕ್ರಮ ಸಾಗಾಟ; 9 ಲೀಟರ್ ಮದ್ಯ, 45 ಲಕ್ಷ ರೂ. ಮೌಲ್ಯದ ಬಸ್ ವಶ

ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಬಸ್‌ ತಡೆದು ಅಬಕಾರಿ ಇಲಾಖೆಯ ಅಧಿಕಾರಿಗಳು ಪರಿಶೀಲನೆ...

ಯಾದಗಿರಿ | ವಸತಿ ಶಾಲೆಯಲ್ಲಿ ಕಲುಷಿತ ನೀರು ಕುಡಿದು ವಿದ್ಯಾರ್ಥಿಗಳು ಅಸ್ವಸ್ಥ

ವಸತಿ ಶಾಲೆಯಲ್ಲಿ ಕಲುಷಿತ ನೀರು ಕುಡಿದು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಯಾದಗಿರಿ...

ಗದಗ | ಜನತಾದರ್ಶನ: ವೃದ್ಧೆಗೆ ಆಧಾರ್ ಕಾರ್ಡ್, ಮಾಸಾಶನ ಆದೇಶ ಪತ್ರ ವಿತರಣೆ

ಶತಾಯುಷಿ ವೃದ್ಧೆಯೊಬ್ಬರು ಆಧಾರ್ ಕಾರ್ಡ್‌ ಇಲ್ಲದ ಕಾರಣ, ಮಾಸಾಶನ ಪಡೆಯಲು ಸಾಧ್ಯವಾಗಿರಲಿಲ್ಲ....