ಮಂಡ್ಯ | ವಯನಾಡು ಗುಡ್ಡಕುಸಿತ: ಮೃತರಾದ ಕೆ ಆರ್ ಪೇಟೆಯ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರ ಘೋಷಣೆ

Date:

Advertisements

ಕೇರಳದ ವಯನಾಡಿನ ಗುಡ್ಡ ಕುಸಿತ ದುರಂತದಲ್ಲಿ ಸಾವನ್ನಪ್ಪಿರುವ ಕೆಆರ್‌ಪೇಟೆಯ ಕತ್ತರಘಟ್ಟ ಮೂಲದ ಅಜ್ಜಿ-ಮೊಮ್ಮಗ ನಿಹಾಲ್ ಹಾಗೂ ಲೀಲಾವತಿ ಅವರ ಮನೆಗೆ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಭೇಟಿ ನೀಡಿ ಸಾಂತ್ವನ ಹೇಳಿದರು.

ಇದೇ ಕುಟುಂಬದ ಮೂರು ಜನರು ವಯನಾಡಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರಿಗೆ ಉತ್ತಮ ಚಿಕಿತ್ಸೆ ನೀಡಲು ಹಾಗೂ ಅಗತ್ಯ ಸಹಕಾರ ನೀಡಿ ಸಮನ್ವಯ ವಹಿಸಲು ಕರ್ನಾಟಕ ಸರಕಾರದಿಂದ ಅಧಿಕಾರಿಗಳ ತಂಡ ವಯನಾಡಿಗೆ ತೆರಳಿದ್ದು, ಅವರಿಗೆ ಅಗತ್ಯವಿರುವ ಪ್ರಾಥಮಿಕ ಚಿಕಿತ್ಸೆಯನ್ನು ವಯನಾಡಿನಲ್ಲಿ ಒದಗಿಸಿ ಮುಂದಿನ ದಿನಗಳಲ್ಲಿ ಹೆಚ್ಚಿನ ಚಿಕಿತ್ಸೆಯ ಅವಶ್ಯಕತೆ ಇದ್ದಲ್ಲಿ ಕರ್ನಾಟಕ ಸರಕಾರದಿಂದ ಒದಗಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.

1001191828

ಮೃತರಾದ ಲೀಲಾವತಿ ಅವರ ಕುಟುಂಬಕ್ಕೆ ಸರ್ಕಾರದಿಂದ 5 ಲಕ್ಷ ಪರಿಹಾರ ವಿತರಣೆಯನ್ನು ಶೀಘ್ರದಲ್ಲೇ ಮಾಡಲಾಗುವುದು. ನಿಹಾಲ್ ಅವರು ಚಿಕ್ಕ ವಯಸ್ಸಿನ ಹುಡುಗನಾಗಿದ್ದು, ಅವರಿಗೂ ಸಹ ಸಣ್ಣ ಪ್ರಮಾಣದ ಪರಿಹಾರ ಒದಗಿಸಲು ಪ್ರಯತ್ನಿಸಲಾಗುವುದು ಎಂದು ಸಚಿವ ಚಲುವರಾಯಸ್ವಾಮಿ ಹೇಳಿದರು.

Advertisements

ಇದೇ ಸಂದರ್ಭದಲ್ಲಿ ಸಚಿವರು ಕುಟುಂಬಕ್ಕೆ ವೈಯಕ್ತಿಕವಾಗಿ ಪರಿಹಾರದ ಮೊತ್ತ ನೀಡಿದರು.

ಈ ಸಂದರ್ಭದಲ್ಲಿ ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ್, ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ಜೊತೆಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಬಿಜೆಪಿಗರು ನೀಡಿದ್ದ ಸೀರೆಯನ್ನು ವಾಪಸ್ ಎಸೆದ ಮಹಿಳೆಯರು

ರಾಜ್ಯಾದ್ಯಂತ ಮತದಾನ ಭರ್ಜರಿಯಾಗಿ ನಡೆಯುತ್ತಿದೆ. ಇದೇ ಸಂದರ್ಭದಲ್ಲಿ ಮಂಡ್ಯ ಜಿಲ್ಲೆಯ ಕೆ.ಆರ್‌...

ಮಂಡ್ಯ | ಮೇಲುಕೋಟೆ ಕ್ಷೇತ್ರದಲ್ಲಿ ರೈತ ಸಂಘ – ಜೆಡಿಎಸ್‌ ನಡುವೆ ಗಲಾಟೆ

ಜೆಡಿಎಸ್‌ನ ಭದ್ರಕೋಟೆಯಾಗಿದ್ದ ಮಂಡ್ಯ ಜಿಲ್ಲೆಯ ಮೇಲುಕೋಟೆ ಕ್ಷೇತ್ರವು ಹೈವೋಲ್ಟೇಜ್‌ ಕ್ಷೇತ್ರವಾಗಿ ಹೊಮ್ಮಿದೆ....

ಪ್ರಚಾರಕ್ಕಾಗಿ ದಲಿತ ವ್ಯಕ್ತಿಯ ಮಾತು ತಿರುಚಿದ ಪಕ್ಷೇತರ ಅಭ್ಯರ್ಥಿ?; ಸಮಾಜ ಕಲ್ಯಾಣ ಇಲಾಖೆ ಸ್ಪಷ್ಟನೆ

ದಲಿತರನ್ನು ಬೇರೆಡೆಗೆ ಸ್ಥಳಾಂತರಿಸಿ ಎಂದು ಕೇಳಿದ್ದ ವ್ಯಕ್ತಿಯೂ ದಲಿತರೇ ಆಗಿದ್ದಾರೆ. ದಲಿತರು...

ನಿರುದ್ಯೋಗ, ಬೆಲೆ ಏರಿಕೆ ಬಗ್ಗೆ ಮಾತಾಡಿ: ಮೋದಿಗೆ ರಾಹುಲ್-ಪ್ರಿಯಾಂಕಾ ಸವಾಲು

ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ವರಿಷ್ಠ ನಾಯಕರು ನಿಮ್ಮ ಬಗ್ಗೆ...

Download Eedina App Android / iOS

X