ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿಕೆಗೆ ಸ್ವಪಕ್ಷದಲ್ಲೇ ವಿರೋಧ

Date:

“ಸೋನಿಯಾ ಗಾಂಧಿ ವಿಷ ಕನ್ಯೆ, ರಾಹುಲ್ ಗಾಂಧಿ ಹುಚ್ಚ” ಎಂದು ವಿವಾದಾತ್ಮಕ ಹೇಳಿಕೆ ನೀಡಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರ ನಡೆಗೆ ಸ್ವಪಕ್ಷದಲ್ಲೇ ವಿರೋಧ ವ್ಯಕ್ತವಾಗಿದೆ.

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಯತ್ನಾಳ ಹೇಳಿಕೆ ಖಂಡಿಸಿ, “ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆಯನ್ನು ನಾವು ಒಪ್ಪುವುದಿಲ್ಲ. ಇಂತಹ ಹೇಳಿಕೆ ಬಿಜೆಪಿ ಸಂಸ್ಕೃತಿ ಅಲ್ಲ” ಎಂದಿದ್ದಾರೆ.

“ಯತ್ನಾಳ ಅವರು ಬೇರೆ ಪಕ್ಷಗಳ ನಾಯಕರ ಬಗ್ಗೆ ಇಂತಹ ಹೇಳಿಕೆ ನೀಡಬಾರದು” ಎಂದೂ ಶೋಭಾ ಕರಂದ್ಲಾಜೆ ಚಿಕ್ಕಮಗಳೂರಿನ ಕಳಸದಲ್ಲಿ ಶುಕ್ರವಾರ ಹೇಳಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಮಲ್ಲಿಕಾರ್ಜುನ ಖರ್ಗೆ ಅವರು ಕೇವಲ ಕರ್ನಾಟಕದ ನಾಯಕರಲ್ಲ, ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರು. ಅವರ ಮಾತನ್ನು ಚೀನಾ, ಪಾಕಿಸ್ತಾನ, ಅಮೆರಿಕಾ ದೇಶದ ಜನ ಕೇಳಿಸಿಕೊಳ್ತಾರೆ. ಮೋದಿ ಅವರಿಗೆ ಅವಮಾನ ಮಾಡುವುದನ್ನು ಯಾರೂ ಕ್ಷಮಿಸಲ್ಲ. ಮಲ್ಲಿಕಾರ್ಜುನ ಖರ್ಗೆ ಅವರು ಬೇಷರತ್ ಕ್ಷಮೆ ಕೇಳಬೇಕು” ಎಂದು ಆಗ್ರಹಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನೀಡಿರುವ ‘ವಿಷ ಸರ್ಪ’ ಹೇಳಿಕೆ ಕುರಿತಂತೆ ಬಿಜೆಪಿ ನಾಯಕರು ಸಾಲು ಸಾಲಾಗಿ ಕಾಂಗ್ರೆಸ್‌ ವಿರುದ್ಧ ಹರಿಹಾಯುತ್ತಿದ್ದಾರೆ.

Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ, ಹೀಗಾಗಿ ಜೋಶಿ ವಿರುದ್ಧ ಸ್ಪರ್ಧೆ: ಯತ್ನಾಳ್ ಆರೋಪ

ದಿಂಗಾಲೇಶ್ವರ ಸ್ವಾಮೀಜಿಗೆ ಎಲ್ಲಿಂದಲೋ ಪೇಮೆಂಟ್ ಬಂದಿದೆ. ಹೀಗಾಗಿಯೇ ಅವರು ಧಾರವಾಡ ಲೋಕಸಭಾ...

ದೇಶದ ಜನರು ಬಿಜೆಪಿಗೆ ಖಾಲಿ ಚೊಂಬು ನೀಡಲಿದ್ದಾರೆ: ರಣದೀಪ್ ಸಿಂಗ್ ಸುರ್ಜೇವಾಲ

ಬರ ಪರಿಹಾರ ವಿಳಂಬ, ತೆರಿಗೆ ಹಂಚಿಕೆಯಲ್ಲಿನ ಅನ್ಯಾಯ ಖಂಡಿಸಿ ಪ್ರಧಾನಿ ನರೇಂದ್ರ...

ದೇಶದ ಜನರಿಗೆ ಮೋದಿ ಸರ್ಕಾರ ಖಾಲಿ ಚೊಂಬು ಕೊಟ್ಟಿದೆ: ಸಿಎಂ ಸಿದ್ದರಾಮಯ್ಯ

"ಚೊಂಬು ಜಾಹೀರಾತು ಈ ದೇಶದ ಜನರಿಗೆ ಬಿಜೆಪಿ ಸರ್ಕಾರ ಖಾಲಿ ಚೊಂಬು...

ಏ.20ರಂದು ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟದ ವಿವರ ಇಲ್ಲಿದೆ

ರಾಜ್ಯದಲ್ಲಿ ವಾಡಿಕೆಯಂತೆ ಮಳೆಯಾಗದೆ. ಕರಾವಳಿ ಪ್ರದೇಶಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ,...