- ಮೇ 6ರಂದು ಪ್ರಧಾನಿ ಮೋದಿ ರೋಡ್ ಶೋ
- ಕೋಣನಕುಂಟೆ ಪೊಲೀಸರಿಂದ ಬಿಬಿಎಂಪಿಗೆ ಪತ್ರ
ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನಲ್ಲಿ ರೋಡ್ ಶೋ ನಡೆಸಲಿದ್ದು, ಕೋಣನಕುಂಟೆ ಪೊಲೀಸರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಆಯುಕ್ತರಿಗೆ ಸ್ವಾರಸ್ಯಕರ ಪತ್ರವೊಂದನ್ನು ಬರೆದಿದ್ದಾರೆ.
ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಮೇ 6 ಮತ್ತು 7ರಂದು ಬೆಂಗಳೂರಿನಲ್ಲಿ ರೋಡ್ ಶೋ ನಡೆಸಲಿದ್ದಾರೆ. ಮೋದಿ ಭದ್ರತೆಗೆ ಸಂಬಂಧಿಸಿದಂತೆ ಕೋಣನಕುಂಟೆ ಪೊಲೀಸರು ಬಿಬಿಎಂಪಿಗೆ ಪತ್ರ ಬರೆದಿದ್ದಾರೆ.
ಪ್ರಧಾನಿ ಮೋದಿ ಮೇ 6ರಂದು ಕೋಣನಕುಂಟೆ ಪೊಲೀಸ್ ಠಾಣಾ ಸರಹದ್ದಿನ ಲಯೋಲ ಶಾಲಾ ಆವರಣದಲ್ಲಿರುವ ಹೆಲಿಪ್ಯಾಡ್‌ಗೆ ಆಗಮಿಸಲಿದ್ದಾರೆ. ಆದ್ದರಿಂದ ಮೋದಿ ಸಂಚರಿಸುವ ಮಾರ್ಗದಲ್ಲಿ ಎದುರಾಗುವ ನಾಯಿ, ಕೋತಿ, ಜೇನುಗೂಡು ಹಾಗೂ ಹಾವು ಹಿಡಿಯುವಂತೆ ಪೊಲೀಸರು ಬಿಬಿಎಂಪಿ ಆಯುಕ್ತರಿಗೆ ಮನವಿ ಮಾಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ಭಾನುವಾರ ಬೆಂಗಳೂರಲ್ಲಿ ದಿಗ್ಗಜರ ರೋಡ್ ಶೋ: ರಾಹುಲ್ – ಮೋದಿ ಮುಖಾಮುಖಿ
ಈ ಕುರಿತು ಪತ್ರ ಬರೆದಿರುವ ಪೊಲೀಸರು, “ಪ್ರಧಾನಿ ನರೇಂದ್ರ ಮೋದಿ ಅವರು ಕೋಣನಕುಂಟೆ ಪೊಲೀಸ್ ಠಾಣಾ ಸರಹದ್ದಿನ ಲಯೋಲ ಶಾಲಾ ಆವರಣದ ಹೆಲಿಪ್ಯಾಡ್‌ಗೆ ಆಗಮಿಸಲಿದ್ದು, ಸ್ಥಳದಲ್ಲಿ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಿಕೊಂಡಿದ್ದೇವೆ” ಎಂದು ಪತ್ರದಲ್ಲಿ ತಿಳಿಸಿದ್ದಾರೆ.
“ಈ ಸಂದರ್ಭದಲ್ಲಿ ಗಣ್ಯರು ಸಂಚರಿಸುವ ಮಾರ್ಗದಲ್ಲಿ ಯಾವುದೇ ತೊದರೆಯಾಗದಂತೆ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ಸದರಿ ಲಯೋಲ ಶಾಲಾ ಆವರಣದಲ್ಲಿರುವ ಹೆಲಿಪ್ಯಾಡ್‌ಗಳ ಸುತ್ತ ಮುತ್ತಲೂ ಹಾಗೂ ಗಣ್ಯರು ಸಂಚರಿಸುವ ಮಾರ್ಗದಲ್ಲಿ ಅಡ್ಡಾಡುವ ನಾಯಿಗಳನ್ನು, ಹಾವು, ಜೇನು ಹಿಡಿದು ಸ೦ರಕ್ಷಿಸುವಂತೆ ಸಂಬಂಧಪಟ್ಟವರಿಗೆ ಸೂಚಿಸಬೇಕು” ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.