ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್‌!

Date:

Advertisements

ವಿಧಾನ ಪರಿಷತ್ ಬಿಜೆಪಿ ಸದಸ್ಯ, ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ನಿಗದಿಯಾಗಿದೆ. ಅಂಬೇಡ್ಕರ್ ಜಯಂತಿಯ ದಿನದಂದೇ ಸವದಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.

ಇಂದು (ಏ.14) ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಜೊತೆ ಬೆಂಗಳೂರಿನಲ್ಲಿ ಮಾತುಕತೆ ನಡೆಸಿದ ಸವದಿ, ಪಕ್ಷ ಸೇರಲು ಮುಂದಾಗಿದ್ದಾರೆ.

ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಡಿ ಕೆ ಶಿವಕುಮಾರ್, “ಪಕ್ಷದ ಸಿದ್ಧಾಂತವನ್ನು ಒಪ್ಪಿ ಲಕ್ಷ್ಮಣ ಸವದಿ ನಮ್ಮ ಕುಟುಂಬ ಸೇರಲಿದ್ದಾರೆ. ಲಕ್ಷ್ಮಣ ಸವದಿ ಅವರು ಇಂದು ಸಂಜೆ (ಏ.14) 4 ಗಂಟೆ ಸುಮಾರಿಗೆ ತಮ್ಮ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ನೀಡಿ, 4:30ರ ಸುಮಾರಿಗೆ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ” ಎಂದು ತಿಳಿಸಿದರು.

Advertisements

ಸವದಿ ಜೊತೆಗೆ ಅವರ ಬೆಂಬಲಿಗರು ಸಹ ಪಕ್ಷ ಸೇರ್ಪಡೆಯಾಗಲಿದ್ದು, ಇವರ ಜೊತೆಗೆ ಪಕ್ಷ ಸೇರಲು ಬರುವ ಇತರರಿಗೂ ಮುಕ್ತ ಆಹ್ವಾನವಿದೆ ಎಂದು ಡಿ ಕೆ ಶಿವಕುಮಾರ್ ಹೇಳಿದರು.

ಈ ಕುರಿತು ಮಾತನಾಡಿದ ಲಕ್ಷ್ಮಣ ಸವದಿ, “ನಾನು ಯಾವುದೇ ಷರತ್ತು ಹಾಕಿಲ್ಲ. ಪಕ್ಷವೇ ನನಗೆ ಅಥಣಿಯಿಂದ ಟಿಕೆಟ್ ನೀಡಲು ಒಪ್ಪಿದೆ. ನನ್ನ ಕುಟುಂಬದ ಯಾರಿಗೂ ಟಿಕೆಟ್ ಕೇಳಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ, ಬಾಕಿ ಇರುವ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಿ ಕೊಡುವಂತೆ ಮನವಿ ಮಾಡಿದ್ದೇನೆ” ಎಂದರು.

ಈ ಸುದ್ದಿ ಓದಿದ್ದೀರಾ? ಬಿಜೆಪಿಗೆ ಬಂಡಾಯದ ಬಿಸಿ: ಶಾಸಕ ಸ್ಥಾನಕ್ಕೆ ಗೂಳಿಹಟ್ಟಿ ಶೇಖರ್ ರಾಜೀನಾಮೆ

ಬಿಜೆಪಿ 212 ಅಭ್ಯರ್ಥಿಗಳ ಎರಡು ಪಟ್ಟಿಯನ್ನು ಬಿಡುಗಡೆ ಮಾಡಿದ ಬೆನ್ನಲ್ಲೇ ಬಂಡಾಯ ಹೊರಹಾಕಿದ್ದ ಲಕ್ಷ್ಮಣ ಸವದಿ ಕಾಂಗ್ರೆಸ್ ಕಡೆ ಮುಖ ಮಾಡಿದ್ದರು.

ಬಿಜೆಪಿಗೆ ರಾಜೀನಾಮೆ ನೀಡಿರುವ ಲಕ್ಷ್ಮಣ ಸವದಿ ಅವರು ಇಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ನಿವಾಸಕ್ಕೆ ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರೊಂದಿಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದರು.

ಲಕ್ಷ್ಮಣ ಸವದಿ ಅವರಿಗೆ ಅಥಣಿ ಟಿಕೆಟ್ ಕೈತಪ್ಪಿದೆ. ಈ ಹಿನ್ನೆಲೆ ಪಕ್ಷ ಹಾಗೂ ಎಂಎಲ್​ಸಿ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್​ ಸೇರುವ ಸಾಧ್ಯತೆ ಇದ್ದು, ಈ ಸಂಬಂಧ ಇಂದು ಕಾಂಗ್ರೆಸ್ ಎಂಎಲ್​ಸಿ ಚನ್ನರಾಜ ಹಟ್ಟಿಹೊಳಿ ಜತೆಗೆ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

ಬಿಹಾರದಲ್ಲಿ ಒಂದು ಮತವನ್ನೂ ಕದಿಯಲು ನಾವು ಬಿಡಲ್ಲ: ರಾಹುಲ್ ಗಾಂಧಿ

ಮತಗಳನ್ನು ಕದಿಯಲು ಚುನಾವಣಾ ಆಯೋಗ ಮತ್ತು ಬಿಜೆಪಿ ಪಾಲುದಾರಿಕೆ ಹೊಂದಿದೆ ಎಂದು...

Download Eedina App Android / iOS

X