ಮೈಸೂರು | ಮತಗಟ್ಟೆಯತ್ತ ಸುಳಿಯದ ಮತದಾರರು; ಖಾಲಿ ಕುಳಿತ ಅಧಿಕಾರಿಗಳು

Date:

ಬುಧವಾರ ರಾಜ್ಯಾದ್ಯಂತ ಶಾಸಕ ಆಯ್ಕೆಗೆ ಮತದಾನ ನಡೆಯುತ್ತಿದೆ. ಎಲ್ಲೆಡೆ ಮತದಾರರು ಮತದಾನಕ್ಕೆ ತೆರಳುತ್ತಿದ್ದಾರೆ. ಆದರೆ, ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಏಳಿಗೆಹುಂಡಿ ಗ್ರಾಮದ ಮತದಾರರು ‘ತಾವು ಮತದಾನ ಬಹಿಷ್ಕರಿಸಿದ್ದೇವೆ’ ಎಂದು ಹೇಳಿದ್ದು, ಮತಗಟ್ಟೆಯತ್ತ ಸುಳಿದಿಲ್ಲ.

ಇಂದು (ಮೇ 10) ಬೆಳಗ್ಗೆ ಏಳು ಗಂಟೆಯಿಂದಲೇ ಮತದಾರ ಪ್ರಕ್ರಿಯೆ ಆರಂಭವಾಗಿದ್ದು, 11 ಗಂಟೆಯಾದರೂ ಗ್ರಾಮದ ಯಾವೊಬ್ಬ ಮತದಾರನೂ ಮತ ಚಲಾಯಿಸಲು ಬಂದಿಲ್ಲ. ಇದನ್ನರಿತ ಚುನಾವಣಾಧಿಕಾರಿಗಳು ಗ್ರಾಮಸ್ಥರ ಮನವೊಲಿಸಲು ಕಸರತ್ತು ನಡೆಸುತ್ತಿದ್ದಾರೆ. ಆದರೂ, ಗ್ರಾಮದ ಜನರು ಮತದಾನ ಮಾಡುವುದಿಲ್ಲವೆಂದು ಪಟ್ಟುಹಿಡಿದಿದ್ದಾರೆ.

“ಕಳೆದ ಐದು ವರ್ಷಗಳಲ್ಲಿ ಕ್ಷೇತ್ರದ ಶಾಸಕರು ಒಮ್ಮೆಯೂ ಗ್ರಾಮಕ್ಕೆ ಭೇಟಿ ನೀಡಿಲ್ಲ. ರಸ್ತೆ ಮಾಡಿಸಿಲ್ಲ. ನಾವು ಯಾಕಾಗಿ ಮತ ಹಾಕಬೇಕು” ಎಂದು ಗ್ರಾಮದ ಮತದಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಅಲ್ಲದೆ, ಚುನಾವಣಾ ಘೋಷಣೆಯಾದ ಬಳಿಕವೂ ಕ್ಷೇತ್ರದ ಶಾಸಕ ಜಿಟಿ ದೇವೇಗೌಡ ಆಗಲೀ, ಕಾಂಗ್ರೆಸ್ ಅಭ್ಯರ್ಥಿ ಮಾವಿನಹಳ್ಳಿ ಸಿದ್ದೇಗೌಡ ಆಗಲೀ ಗ್ರಾಮದತ್ತ ಸುಳಿದಿಲ್ಲವೆಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಾಮರಾಜನಗರ | ಮತದಾನ ಬಹಿಷ್ಕಾರ; ಮನವೊಲಿಸಲು ಹೋದ ಅಧಿಕಾರಿಗಳ ಮೇಲೆ ಹಲ್ಲೆ

ರಾಜ್ಯ 14 ಕ್ಷೇತ್ರಗಳಲ್ಲಿ ಶಾಂತಿಯುತವಾಗಿ ಮತದಾನ ನಡೆಯುತ್ತಿದ್ದು, ಕೆಲವೆಡೆ ಮತದಾನ ಬಹಿಷ್ಕಾರ...

ಉಡುಪಿ | ನಾನು ಮತ ಹಾಕಿರುವ ಅಭ್ಯರ್ಥಿ ನೂರಕ್ಕೆ ನೂರರಷ್ಟು ಗೆಲ್ಲುತ್ತಾರೆ: ನಟ ರಕ್ಷಿತ್ ಶೆಟ್ಟಿ

ಲೋಕಸಭಾ ಚುನಾವಣೆ ಹಿನ್ನೆಲೆ, ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ರಾಜಕಾರಣಿಗಳು,...

ಬೆಂಗಳೂರು | ಕೆಎಂಎಫ್ ಹೊಸ ದಾಖಲೆ​; ಒಂದೇ ದಿನ 51 ಲಕ್ಷ ಲೀಟರ್ ನಂದಿನಿ ಹಾಲು ಮಾರಾಟ

ವು(ಕೆಎಂಎಫ್‌) ನಂದಿನಿ ಬ್ರ್ಯಾಂಡ್​ ಉತ್ಪನ್ನಗಳ ಮಾರಾಟದಲ್ಲಿ ತನ್ನದೇ ದಾಖಲೆಯನ್ನು ಮುರಿದಿದೆ. ದಿನವೊಂದರಲ್ಲಿ...

ಬೆಂಗಳೂರು | ಮತಗಟ್ಟೆ ಬಳಿ ಮಹಿಳೆಗೆ ಹೃದಯಾಘಾತ; ಮತದಾನ ಮಾಡಲು ಬಂದ ವೈದ್ಯನಿಂದ ಜೀವ ರಕ್ಷಣೆ

ಬೆಂಗಳೂರಿನ ಜೆ ಪಿ ನಗರದಲ್ಲಿರುವ ಜಂಬೂ ಸವಾರಿ ದಿನ್ನೆ ಮತಗಟ್ಟೆಯಲ್ಲಿ ಮತದಾನ...