ಮೈಸೂರು | ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಉದ್ಘಾಟಿಸಿದ ಡಾ.ಎಚ್.ಸಿ.ಮಹದೇವಪ್ಪ

Date:

Advertisements

ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ ಅವರು ನಗರದ ಚಾಮರಾಜ ಜೋಡಿ ರಸ್ತೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು (ಎನ್.ಎಂ.ಕೆ.ಎ ಬಾಲಬೋಧಿನಿ) ಗುರುವಾರ (ನ.16) ಉದ್ಘಾಟಿಸಿದರು.

ಉದ್ಘಾಟನೆ ಬಳಿಕ ಮಾತನಾಡಿದ ಅವರು, “ಸ್ವಾತಂತ್ರ್ಯಕ್ಕೂ ಮುನ್ನ, ಸುಮಾರು 80ವರ್ಷಗಳ ಹಿಂದೆ ನವಾಬ್ ಮೀರ್ ಕಮಲುದ್ದೀನ್ ಅಲಿಖಾನ್ ಅವರು ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡಿ ಶಾಲೆಗಾಗಿ ಉಚಿತವಾಗಿ ಜಾಗ ನೀಡಿದ್ದರು. ಅವರ ಉದಾರವಾದ ಮನಸ್ಸನ್ನು ನಾವು ಸ್ಮರಿಸಬೇಕು. ಅದರಂತೆ, ಮೇಯರ್ ಶಿವಕುಮಾರ್ ತಾವು ಓದಿದ ಶಾಲೆ ಎಂಬ ಅಭಿಮಾನಕ್ಕೆ ಅತ್ಯುತ್ತವಾಗಿ ನವೀಕರಣಗೊಳಿಸಲಾಗಿದೆ” ಎಂದು ಶ್ಲಾಘಿಸಿದರು.

“ಮನುಷ್ಯನ ವಿಕಾಸಕ್ಕೆ ಶಿಕ್ಷಣ ಅಗತ್ಯವಾಗಿದೆ. ಅದನ್ನು ವೈಜ್ಞಾನಿಕ ಮತ್ತು ವೈಚಾರಿಕವಾಗಿ ಪಡೆಯಬೇಕು ಎಂಬುದು ನಮ್ಮ ಸಂವಿಧಾನದ ಆಶಯ. ಪ್ರತಿಯೊಂದು ವಿಷಯವನ್ನು ವೈಚಾರಿಕವಾಗಿ ಕಲಿತರೆ ಎಲ್ಲರೂ ಸಮಾಜಕ್ಕೆ ದಾರಿದೀಪವಾಗುತ್ತಾರೆ. ಅದರಂತೆ ಮಕ್ಕಳ ಭವಿಷ್ಯ ಕಟ್ಟಲು, ನಿರ್ಮಿಸಿರುವ ಈ ಸರ್ಕಾರಿ ಶಾಲೆಯಲ್ಲಿ ಹೆಚ್ಚಿನ ಮಕ್ಕಳು ದಾಖಲಾಗಿ, ಮುಂದಿನ ದಿನಗಳಲ್ಲಿ ಮಾದರಿ ಶಾಲೆಯಾಗಿ ರೂಪುಗೊಳ್ಳುವಂತೆ ಗುಣಮಟ್ಟದ ಶಿಕ್ಷಣ ನೀಡಬೇಕು” ಎಂದು ಕಿವಿಮಾತು ಹೇಳಿದರು.

ಎಲ್ಲರೂ ಜಾತಿ, ಧರ್ಮದಿಂದ ಹೊರಬಂದು ನಾವೆಲ್ಲ ಭಾರತೀಯರು ಎಂಬ ಮನೋಭಾವ ಬರಬೇಕು. ನಮ್ಮ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ನಾವೆಲ್ಲರೂ ಶ್ರಮಿಸಬೇಕು. ಪ್ರಾಥಮಿಕ ಶಾಲಾ ಮಕ್ಕಳಿಗೆ ಗ್ರಹಿಕಾಶಕ್ತಿ ಹೆಚ್ಚಿರುತ್ತದೆ. ಈ ಅವಧಿಯಲ್ಲಿ ಮಕ್ಕಳಿಕೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡಬೇಕು. ಅದು ಹೆಚ್ಚು ದಿನಗಳ ಕಾಲ ನೆನಪಿನಲ್ಲಿ ಉಳಿಯುತ್ತದೆ. ಇಂಗ್ಲಿಷ್ ಅನ್ನು ಸಂಪರ್ಕ ಭಾಷೆಯಾಗಿ ಬಳಕೆ ಮಾಡಲು ಮಾತ್ರ ಕಲಿಯಬೇಕು. ಆದರೆ, ನಮ್ಮ ಮಾತೃಭಾಷೆಯಾದ ಕನ್ನಡ ಮಾಧ್ಯಮದಲ್ಲೇ ಮಕ್ಕಳಿಗೆ ಕಲಿಸಬೇಕು. ಸರ್ಕಾರ ಜಾರಿ ಮಾಡುವ ನೂತನ ಪದ್ಧತಿಗಳನ್ನು ಅಳವಡಿಸಿಕೊಂಡು ವಿಜ್ಞಾನವನ್ನು ಸಮರ್ಪಕವಾಗಿ ಮಾನವನ ಅಭಿವೃದ್ದಿಗೆ ಬಳಿಸಿಕೊಳ್ಳಲು ಮೀಸಲಿಡಬೇಕು. ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಶಾಸಕ ಶ್ರೀವತ್ಸ, ಮೇಯರ್ ಶಿವಕುಮಾರ್, ನಗರ ಪಾಲಿಕೆ ಆಯುಕ್ತ ಆಶಾದ್ ಉರ್ ರೆಹಮಾನ್ ಶರೀಫ್, ಅಧೀಕ್ಷಕ ಕಾರ್ಯಪಾಲಕ ಎಂಜಿನಿಯರ್ ಸಿಂಧೂ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ರಂಗೇಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ರಾಜು, ಮುಖ್ಯಶಿಕ್ಷಕಿ ರತ್ನಮಾಲ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಡುಕೋಣ ದಾಳಿ ವ್ಯಕ್ತಿ ಗಂಭೀರ

ಕಾಡುಕೋಣ ದಾಳಿಯಿಂದ ವ್ಯಕ್ತಿ ಗಂಭೀರ ಗಾಯವಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬಾಳೂರು...

ರಾಯಚೂರು | ರಕ್ತಹೀನತೆ, ತಾಯಿ ಶಿಶು ಮರಣ ನಿಯಂತ್ರಣಕ್ಕೆ ಒತ್ತಾಯಿಸಿ ಮಹಿಳಾ ಒಕ್ಕೂಟ ಪ್ರತಿಭಟನೆ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಅತಿ ಹೆಚ್ಚು ಮಹಿಳೆಯರಲ್ಲಿ ರಕ್ತ ಹೀನತೆ ಹಾಗೂ...

ಚಿಕ್ಕಮಗಳೂರು l ಗುಡ್ಡಹಳ್ಳದಲ್ಲಿ ಪುಂಡಾನೆ ಸೆರೆ; ಕಾರ್ಯಾಚರಣೆ ಯಶಸ್ವಿಗೊಳಿಸಿದ ಅರಣ್ಯ ಇಲಾಖೆ

ಸುಮಾರು ಒಂದುವರೆ ವರ್ಷಗಳಿಂದ ಬೀಡು ಬಿಟ್ಟಿದ್ದ, ಪುಂಡಾನೆ ಕೊನೆಗೂ ಸೆರೆಯಾಗಿರುವ ಘಟನೆ,...

ಚಿಕ್ಕಮಗಳೂರು l 1% ಮೀಸಲಾತಿಯನ್ನು ಕೂಡಲೇ ಜಾರಿ ಮಾಡಬೇಕು; ಎದ್ದೇಳು ಕರ್ನಾಟಕ

ಬದುಕಿನ್ನುದ್ದಕ್ಕೂ ಅಲೆಯುತ್ತಲೇ ಬದುಕಿದ ಅಲೆಮಾರಿ ಬಂಧುಗಳು ಇಂದು ನ್ಯಾಯ ಅರೆಸುತ್ತಾ ದೆಹಲಿಗೆ...

Download Eedina App Android / iOS

X