ಧಾರ್ಮಿಕ ವಿಚಾರಗಳನ್ನು ರಾಜಕೀಯ ಸಂಘರ್ಷಕ್ಕೆ ಬಳಸಬಾರದು: ಗುರುಪ್ರಸಾದ್ ಕೆರಗೋಡು

Date:

ಶಾಂತಿ, ಸೌಹಾರ್ದ ಹಾಗೂ ಸಹಬಾಳ್ವೆಗೆ ಹೆಸರಾಗಿರುವ ತಿರುಮಕೂಡಲು ನರಸೀಪುರ ಪಟ್ಟಣದಲ್ಲಿ ಸಾಮರಸ್ಯ ಕದಡುವ ಯಾವುದೇ ಪ್ರಯತ್ನಗಳಿಗೆ ಅವಕಾಶ ನೀಡದೆ, ಎಲ್ಲ ಸಮುದಾಯಗಳ ಜನರು ಒಗ್ಗಟ್ಟಿನಿಂದ ಇರಬೇಕು ಎಂದು ದಸಂಸ ರಾಜ್ಯ ಸಂಚಾಲಕ ಗುರುಪ್ರಸಾದ್ ಕೆರಗೋಡು ಸಲಹೆ ನೀಡಿದರು.

- Advertisement -

ಪಟ್ಟಣದ ಲೋಕೋಪಯೋಗಿ ಇಲಾಖೆ ಅತಿಥಿ ಗೃಹದಲ್ಲಿ ಭಾನುವಾರ ರೈತ ಸಂಘ, ಕಾರ್ಮಿಕ ಸಂಘಟನೆಗಳು, ಪ್ರಗತಿಪರ ಹಾಗೂ ದಲಿತ ಸಂಘಟನೆಗಳ ಮುಖಂಡರ ಸಭೆ ನಡೆಯಿತು. ಸಭೆಯ ಬಳಿಕ ಮಾತನಾಡಿದ ಅವರು, ತಿ. ನರಸೀಪುರ ತಾಲ್ಲೂಕು ದಶಕಗಳಿಂದಲೂ ಸಾಮರಸ್ಯ ಮತ್ತು ಸಹಬಾಳ್ವೆಯ ವಾತಾವರಣಕ್ಕೆ ಹೆಸರಾಗಿದೆ. ವಿವಿಧ ಸಮುದಾಯಗಳ ಜನರು ಪರಸ್ಪರ ಗೌರವ, ಸಹಕಾರ ಹಾಗೂ ಸೌಹಾರ್ದದಿಂದ ಬದುಕುತ್ತಿದ್ದಾರೆ. ಧಾರ್ಮಿಕ ಆಚರಣೆಗಳು ಸಮಾಜವನ್ನು ಒಗ್ಗೂಡಿಸುವಂತಿರಬೇಕೇ ಹೊರತು ರಾಜಕೀಯ ಸಂಘರ್ಷಕ್ಕೆ ವೇದಿಕೆಯಾಗಬಾರದು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಜರ್ಮನಿಯಲ್ಲಿ ತೀವ್ರಗಾಮಿಗಳ ಅಬ್ಬರ: ದಿಕ್ಕುತಪ್ಪಿದ ಮಧ್ಯಮಾರ್ಗ, ಮರುಜೀವ ಪಡೆಯುತ್ತಿದೆಯೇ...

ಜರ್ಮನಿಯಲ್ಲಿ ತೀವ್ರ ಬಲಪಂಥೀಯರ ಈ ಮಟ್ಟದ ಏರಿಕೆ ಕೇವಲ ರಾಜಕೀಯ ಪೈಪೋಟಿಯಲ್ಲ, ಬದಲಾಗಿ ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ಜರ್ಮನಿ ಮತ್ತು ಬಲಪಂಥ ಎಂದಾಕ್ಷಣ ಇಡೀ ವಿಶ್ವಕ್ಕೆ ಅಡಾಲ್ಫ್ ಹಿಟ್ಲರ್ ಮತ್ತು ಆತನ ನಾಜಿ...

ಸೌಜನ್ಯಳನ್ನು ಕೊಂದವರು ಯಾರು? ಹೊಸ ತನಿಖೆಯಲ್ಲಿ ಉತ್ತರ ಸಿಗುವ...

14 ವರ್ಷಗಳು... 3 ತನಿಖಾ ಸಂಸ್ಥೆಗಳಾದ ಪೊಲೀಸ್, ಸಿಐಡಿ, ಸಿಬಿಐ ತನಿಖೆಗಳು... ಅಮಾಯಕನಾದ ಒಬ್ಬನೇ ಆರೋಪಿಯ ಸುತ್ತಲಿನ ತನಿಖೆ-... ಕೊನೆಗೆ ಆತ ನಿರಪರಾಧಿ ಎಂದು ಸಾಬೀತು, ಆತನ ಖುಲಾಸೆ. ಹಾಗಾದರೆ 17 ವರ್ಷದ...

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ಇತ್ತೀಚಿನ ಗಣೇಶೋತ್ಸವದ ಶೋಭಾಯಾತ್ರೆಗೆ ಸಂಬಂಧಿಸಿದ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಕೆಲ ಪಕ್ಷಗಳ ಮುಖಂಡರು ನೀಡಿರುವ ಹೇಳಿಕೆಗಳು ಖಂಡನೀಯ. ಯಾವುದೇ ಭಿನ್ನಾಭಿಪ್ರಾಯಗಳಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸಂಘಟನೆಗಳೊಂದಿಗೆ ಚರ್ಚಿಸಿ ಕಾನೂನುಬದ್ಧವಾಗಿ ಪರಿಹಾರ ಕಂಡುಕೊಳ್ಳಬೇಕು. ರಾಜಕೀಯ ಭಿನ್ನಾಭಿಪ್ರಾಯಗಳನ್ನು ಧಾರ್ಮಿಕ ವಿಚಾರಗಳೊಂದಿಗೆ ಬೆರೆಸಿ ಜನರಲ್ಲಿ ಗೊಂದಲ ಅಥವಾ ಅಸಮಾಧಾನ ಮೂಡಿಸಬಾರದು. ಸಮಸ್ಯೆಗಳನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳುವುದು ಸೂಕ್ತ ಎಂದು ಹೇಳಿದರು.

ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಮಾತನಾಡಿ, ರೈತರು ಮತ್ತು ಕಾರ್ಮಿಕರು ತಮ್ಮ ಬದುಕಿನ ಹಲವು ಸಮಸ್ಯೆಗಳನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ಧರ್ಮದ ಹೆಸರಿನಲ್ಲಿ ಜನರಲ್ಲಿ ಭಿನ್ನಾಭಿಪ್ರಾಯ ಸೃಷ್ಟಿಸುವ ಬೆಳವಣಿಗೆಗಳು ನಡೆಯಬಾರದು ಎಂದರು.

ದಸಂಸ ಜಿಲ್ಲಾ ಸಂಚಾಲಕ ಬೆಟ್ಟಯ ಕೋಟೆ ಮಾತನಾಡಿ, ಸಾಮರಸ್ಯದ ವಾತಾವರಣವಿರುವ ಪ್ರದೇಶದಲ್ಲಿ ರಾಜಕೀಯ ಕಾರಣಗಳಿಗಾಗಿ ಶಾಂತಿಗೆ ಧಕ್ಕೆ ತರುವ ಪ್ರಯತ್ನ ಮಾಡಬಾರದು. ಜನರ ಭಾವನೆಗಳನ್ನು ಪ್ರಚೋದಿಸುವುದರಿಂದ ಯಾವುದೇ ಸಮಸ್ಯೆ ಬಗೆಹರಿಯುವುದಿಲ್ಲ ಎಂದು ಹೇಳಿದರು.

ಈ ವಿಶೇಷ ಸುದ್ದಿ ಓದಿದ್ದೀರಾ? E-KYC: ಎಲ್ಲವೂ ‘ಆನ್‌ಲೈನ್‌’… ಆದರೆ, ಜನರ ಸಂಕಷ್ಟ ಮಾತ್ರ ‘ಆಫ್‌ಲೈನ್‌’!

ರೈತರು, ದಲಿತರು, ಕಾರ್ಮಿಕರು, ಮಹಿಳೆಯರು, ಯುವಕರು ಹಾಗೂ ವಿವಿಧ ಸಮುದಾಯಗಳ ಶಾಂತಿಪ್ರಿಯರನ್ನು ಒಗ್ಗೂಡಿಸಿ ಸೌಹಾರ್ದ ಸಮಾವೇಶ ಆಯೋಜಿಸಲು ಸಭೆಯಲ್ಲಿ ನಿರ್ಧರಿಸಲಾಯಿತು. ದಸಂಸ ಜಿಲ್ಲಾ ಸಂಚಾಲಕ ಅಲಗೂಡು ಶಿವಕುಮಾರ್ ಮಾತನಾಡಿ, ಯಾವುದೇ ಭಿನ್ನಾಭಿಪ್ರಾಯಗಳಿಗೆ ಅವಕಾಶ ನೀಡದೆ ಶಾಂತಿ ಮತ್ತು ಸೌಹಾರ್ದತೆ ಕಾಪಾಡಲು ಎಲ್ಲರೂ ಕೈಜೋಡಿಸಬೇಕು ಎಂದು ಮನವಿ ಮಾಡಿದರು. ಅಕ್ಟೋಬರ್ 2ರ ಗಾಂಧಿ ಜಯಂತಿಯಂದು ತಿ. ನರಸೀಪುರದಲ್ಲಿ ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ‘ಶಾಂತಿ-ಸಹಬಾಳ್ವೆಗಾಗಿ ಸೌಹಾರ್ದ ಸಮಾವೇಶ’ ಆಯೋಜಿಸಲಾಗುವುದು ಎಂದು ತಿಳಿಸಿದರು.

ಈ ವಿಶೇಷ ವರದಿ ಓದಿದ್ದೀರಾ? ಡಿಬಿ ಕುಪ್ಪೆ-ಬಾವಲಿ ನಡುವಿನ ಕಳಪೆ ರಸ್ತೆ ಕಾಮಗಾರಿ

ಸಭೆಯಲ್ಲಿ ಸಿಪಿಐ ಕಾರ್ಯದರ್ಶಿ ಸೋಮರಾಜ ಅರಸು, ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೊಸಕೋಟೆ ಬಸವರಾಜು, ಜಿಲ್ಲಾ ಸಂಚಾಲಕ ಚುಂಚನಹಳ್ಳಿ ಮಲೇಶ್, ದಸಂಸ ಸಂಯೋಜಕ ಬಳಗದ ಬಸವಣ್ಣ, ರೈತ ಸಂಘದ ಮಹಿಳಾ ಘಟಕದ ಸಂಚಾಲಕಿ ನೇತ್ರಾವತಿ, ಸಣ್ಣಸ್ವಾಮಿ, ಶಂಭುಲಿಂಗ ಸ್ವಾಮಿ, ಬನ್ನಹಳ್ಳಿ ಸೋಮಣ್ಣ, ಕುಕ್ಕೂರು ರಾಜು, ಯಾಚೇನಹಳ್ಳಿ ಸೋಮಶೇಖರ್, ಮಂಜು ಶಂಕರಪುರ, ವಾಟಾಳು ನಾಗರಾಜು ಸೇರಿದಂತೆ ರೈತ, ದಲಿತ, ಕಾರ್ಮಿಕ ಹಾಗೂ ಪ್ರಗತಿಪರ ಸಂಘಟನೆಗಳ ಮುಖಂಡರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಡಿಬಿ ಕುಪ್ಪೆ-ಬಾವಲಿ ನಡುವಿನ ಕಳಪೆ ರಸ್ತೆ ಕಾಮಗಾರಿ

₹20 ಕೋಟಿ ವೆಚ್ಚದ ರಸ್ತೆ ವರ್ಷ ತುಂಬುವ ಮುನ್ನವೇ ಕಿತ್ತುಬಂತು; ಕಾಕನಕೋಟೆ...

ಹಾಸನ | ಕಸ್ತೂರಿ ರಂಗನ್ ವರದಿ: ಕೇರಳ ಮಾದರಿಯಲ್ಲಿ ಕರ್ನಾಟಕ ವಿನಾಯಿತಿ ಪಡೆಯಲು ಕೆ.ಪಿ.ಆರ್.ಎಸ್ ಆಗ್ರಹ

ಸರ್ವೋಚ್ಚ ನ್ಯಾಯಾಲಯದ ನಿರ್ದೇಶನಗಳು ಹಾಗೂ ಕೇಂದ್ರ ಸರ್ಕಾರ ಸರ್ವೋಚ್ಚ ನ್ಯಾಯಾಲಯಕ್ಕೆ ಸಲ್ಲಿಸಿರುವ...