ಅ.2ರಂದು ಟಿ. ನರಸೀಪುರದಲ್ಲಿ ಕೋಮು ಸೌಹಾರ್ದತೆಗಾಗಿ ಬೃಹತ್ ಸಮಾವೇಶ

Date:

ಟಿ. ನರಸೀಪುರ ಪಟ್ಟಣದಲ್ಲಿ ಇತ್ತೀಚೆಗೆ ಗಣೇಶ ವಿಸರ್ಜನಾ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಉಂಟಾಗಿರುವ ವಿವಾದ ಹಾಗೂ ಕೋಮು ಸೌಹಾರ್ದತೆಗೆ ಧಕ್ಕೆ ತರುವ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಸಂವಿಧಾನದ ಮೌಲ್ಯಗಳು, ಸಾಮಾಜಿಕ ಶಾಂತಿ, ಸೌಹಾರ್ದತೆ ಮತ್ತು ಸಹಬಾಳ್ವೆಗಾಗಿ ಅಕ್ಟೋಬರ್ 2ರಂದು ಬೃಹತ್ ಸಮಾವೇಶ ಆಯೋಜಿಸಲಾಗಿದೆ.

- Advertisement -

ಗಾಂಧಿ ಜಯಂತಿಯಂದು ನಡೆಯಲಿರುವ ಸಮಾವೇಶವು ಬೆಳಿಗ್ಗೆ 10 ಗಂಟೆಗೆ ಟಿ. ನರಸೀಪುರದ ಭಗವಾನ್ ವೃತ್ತದಿಂದ ಆರಂಭವಾಗಲಿದ್ದು, ಮೆರವಣಿಗೆ ಎ.ಪಿ.ಎಂ.ಸಿ. ಆವರಣ ತಲುಪಿದ ಬಳಿಕ ಸಮಾವೇಶ ನಡೆಯಲಿದೆ. ಗಣೇಶ ವಿಸರ್ಜನಾ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಠಾಣಾಧಿಕಾರಿಯವರು ಸಂಘಟಕರಿಗೆ ನೀಡಿದ್ದ ಕಾನೂನು ಪಾಲನೆ ಹಾಗೂ ಮುನ್ನೆಚ್ಚರಿಕೆಯ ಸೂಚನೆಗಳನ್ನು ಕೆಲವರು ತಿರುಚಿ, ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಪರಿವಾರದ ಮುಖಂಡರು ಕೋಮು ದ್ವೇಷಕ್ಕೆ ಕಾರಣವಾಗುವ ರೀತಿಯಲ್ಲಿ ವಿವಾದ ಸೃಷ್ಟಿಸಿದ್ದಾರೆ ಎಂದು ಆಯೋಜಕರು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಐತಿಹಾಸಿಕ ರೈತ ಹೋರಾಟಕ್ಕೆ ಸಾಕ್ಷಿಯಾದ ಹುಬ್ಬಳ್ಳಿ! ಆಕ್ರೋಶದ ನಡುವೆಯೂ...

ಡಾ. ಸ್ವಾಮಿನಾಥನ್ ಆಯೋಗ ವರದಿ ಜಾರಿಗೊಳಿಸುವ ಮೂಲಕ ಪ್ರತಿ ಟನ್ ಕಬ್ಬಿಗೆ ಕನಿಷ್ಠ ರೂ.5,500 ಬೆಂಬಲ ಬೆಲೆ ನಿಗದಿಪಡಿಸಲು ಮತ್ತು ಸಕ್ಕರೆಯ ಕನಿಷ್ಠ ಬೆಂಬಲ ಬೆಲೆಯನ್ನು ರೂ.31ರಿಂದ 60ಕ್ಕೆ ಏರಿಕೆ ಮಾಡಿ ವಾಣಿಜ್ಯ...

ಸೆಪ್ಟೆಂಬರ್ 18ರಂದು ಪೊಲೀಸ್ ಠಾಣೆಗೆ ನುಗ್ಗುವುದಾಗಿ ಹಾಗೂ ಇನ್ಸ್‌ಪೆಕ್ಟರ್ ಧನಂಜಯ ಅವರಿಗೆ ‘ಬುದ್ಧಿ ಕಲಿಸುವುದಾಗಿ’ ಹೇಳಿಕೆ ನೀಡಿ ಶೋಭಾಯಾತ್ರೆ ನಡೆಸುವ ಮೂಲಕ ಪಟ್ಟಣದಲ್ಲಿ ಉದ್ವಿಗ್ನ ವಾತಾವರಣ ನಿರ್ಮಿಸಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ. ಇದೇ ಸಂದರ್ಭದಲ್ಲಿ ದಲಿತ ಹಾಗೂ ಪ್ರಗತಿಪರ ಸಂಘಟನೆಗಳು ಆಯೋಜಿಸಿದ್ದ ‘ಕೋಮು ಸಾಮರಸ್ಯ, ಸೌಹಾರ್ದ ನಡಿಗೆ’ ಕುರಿತು ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಟೀಕೆ-ಟಿಪ್ಪಣಿ ಮಾಡಿರುವುದನ್ನೂ ಆಯೋಜಕರು ಖಂಡಿಸಿದ್ದಾರೆ.

ಗಣೇಶೋತ್ಸವದ ಹೆಸರಿನಲ್ಲಿ ಪ್ರತಿವರ್ಷವೂ ಸಮಾಜದ ಶಾಂತಿ ಮತ್ತು ಸಾಮರಸ್ಯಕ್ಕೆ ಧಕ್ಕೆ ತರುವ ಪ್ರಯತ್ನಗಳು ನಡೆಯುತ್ತಿವೆ ಎಂದು ಆರೋಪಿಸಿರುವ ಸಂಘಟನೆಗಳು, ಇಂತಹ ಬೆಳವಣಿಗೆಗಳಲ್ಲಿ ಅಹಿಂದ ಸಮುದಾಯಗಳ ಜನರನ್ನು ರಾಜಕೀಯ ಉದ್ದೇಶಗಳಿಗೆ ಬಳಸಿಕೊಳ್ಳಲಾಗುತ್ತಿದೆ ಎಂದು ದೂರಿವೆ.

Advertisements

ಟಿ. ನರಸೀಪುರದ ಸಾಮಾಜಿಕ ಇತಿಹಾಸವನ್ನು ಉಲ್ಲೇಖಿಸಿರುವ ಸಂಘಟನೆಗಳು, ಮಂಟೇಸ್ವಾಮಿ, ಮಲೆ ಮಹದೇಶ್ವರರ ಪರಂಪರೆ, ತಲಕಾಡು ಚಿಕ್ಕರಂಗೇಗೌಡರ ಶೈಕ್ಷಣಿಕ ಕೊಡುಗೆ, ನಾಲ್ವಡಿ ಕೃಷ್ಣರಾಜ ಒಡೆಯರ ಸಾಮಾಜಿಕ ನ್ಯಾಯದ ಪರಂಪರೆ ಹಾಗೂ ಆರ್. ಭರಣಯ್ಯ ಅವರ ಹೋರಾಟಗಳು ರೂಪಿಸಿರುವ ಸಹಬಾಳ್ವೆಯ ವಾತಾವರಣವನ್ನು ಕಾಪಾಡುವುದು ಎಲ್ಲರ ಜವಾಬ್ದಾರಿ ಎಂದು ಹೇಳಿದ್ದಾರೆ. ಮೂಗೂರು ತ್ರಿಪುರ ಸುಂದರಿ ದೇವಾಲಯದ ಕುರಿತು ಸ್ಥಳೀಯವಾಗಿ ಪ್ರಚಲಿತದಲ್ಲಿರುವ ನವಾಬ್ ಬಾಬಾ ಸಾಹೇಬ್ ಅವರೊಂದಿಗೆ ಸಂಬಂಧಿಸಿದ ದಂತಕತೆಯನ್ನೂ ಕೋಮು ಸಾಮರಸ್ಯದ ಐತಿಹಾಸಿಕ ನಿದರ್ಶನವಾಗಿ ಸಂಘಟನೆಗಳು ಉಲ್ಲೇಖಿಸಿವೆ.

ಈ ಹಿನ್ನೆಲೆಯಲ್ಲಿ ಸಂವಿಧಾನದ ಮೌಲ್ಯಗಳ ರಕ್ಷಣೆ, ಮಾನವೀಯ ಮೌಲ್ಯಗಳ ಉಳಿವು, ಸಾಮಾಜಿಕ ಶಾಂತಿ, ಸೌಹಾರ್ದತೆ ಹಾಗೂ ಸಹಬಾಳ್ವೆಗಾಗಿ ಅಕ್ಟೋಬರ್ 2ರಂದು ವಿವಿಧ ಜನಪರ ಸಂಘಟನೆಗಳು ಒಗ್ಗೂಡಿ ಸಮಾವೇಶ ನಡೆಸುತ್ತಿವೆ ಎಂದು ತಿಳಿಸಿವೆ.

ಈ ವಿಶೇಷ ವರದಿ ಓದಿದ್ದೀರಾ? ಕರ್ನಾಟಕ ಮತ್ತೊಂದು ಬೆಂಗಾಲ್ ಆಗಲು ಬಿಡುವುದಿಲ್ಲ; SIR ರದ್ದಾಗಲೇಬೇಕು: ಪ್ರಕಾಶ್ ರಾಜ್

ಸಮಾವೇಶದಲ್ಲಿ ದಲಿತ ಸಂಘರ್ಷ ಸಮಿತಿ ನಾಯಕರಾದ ಎನ್. ವೆಂಕಟೇಶ್, ಇಂದೂಧರ ಹೊನ್ನಾಪುರ, ಗುರುಪ್ರಸಾದ್ ಕೆರಗೋಡು, ಲಾವಣಿ ಶಂಕರ್, ಡಿ.ಜಿ. ಸಾಗರ್, ಜೀವನಹಳ್ಳಿ ವೆಂಕಟೇಶ್, ಎನ್. ಮುನಿಸ್ವಾಮಿ, ವಿ. ನಾಗರಾಜು, ಹರಿಹರ ಆನಂದಸ್ವಾಮಿ, ಬೆಟ್ಟಯ್ಯ ಕೋಟೆ ಸೇರಿದಂತೆ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ, ಗೌರವಾಧ್ಯಕ್ಷ ಚಾಮರಸ ಮಾಲಿಪಾಟೀಲ್, ಕಾರ್ಮಿಕ ನಾಯಕರಾದ ಮರಿಯಪ್ಪಹಳ್ಳಿ, ವರಲಕ್ಷ್ಮಿ ಸೇರಿದಂತೆ ವಿವಿಧ ಪ್ರಗತಿಪರ ಸಂಘಟನೆಗಳ ಮುಖಂಡರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ವೇಳೆ ಸಿಲಿಂಡರ್‌ಗಳ ಸರಣಿ ಸ್ಫೋಟ

ಬೈಯ್ಯಪ್ಪನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಭಾರೀ ಅನಾಹುತ‌ವೊಂದು ತಪ್ಪಿದೆ. ಕಗ್ಗದಾಸಪುರದ...

ಪತ್ರಕರ್ತ ಶ್ರೀನಿವಾಸ ಎ. ಕೊಳ್ಳೇಗಾಲ ನಿಧನ

ಕಿರಿಯ ವಯಸ್ಸಿನಲ್ಲೇ ಹೃದಯಾಘಾತದಿಂದ ಪತ್ರಕರ್ತ ಹಾಗೂ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ...

ಶಿಕಾರಿಪುರದಲ್ಲಿ ‘ಭಾರತ್ ಜೋಡೋ 2.0’ ಪಾದಯಾತ್ರೆಗೆ ಚಾಲನೆ

ಇಂದು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಕಿಟ್ಟದಹಳ್ಳಿ ಗ್ರಾಮದಿಂದ ‘ಭಾರತ್ ಜೋಡೋ...