ನಮ್ಮ ಬೆಂಬಲವಿಲ್ಲದೆ ಯಾರೂ ಸರ್ಕಾರ ರಚಿಸಲು ಸಾಧ್ಯವಿಲ್ಲ: ಗಾಲಿ ಜನಾರ್ದನ ರೆಡ್ಡಿ

Date:

ತಮ್ಮ ಹೊಸ ಪಕ್ಷ ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ವು ಉತ್ತಮ ಜನಾಶೀರ್ವಾದವನ್ನು ಪಡೆಯುತ್ತಿದೆ. ನಮ್ಮ ಪಕ್ಷದ ಬೆಂಬಲವಿಲ್ಲದೆ ಯಾರೂ ಮುಂದಿನ ಸರ್ಕಾರ ರಚಿಸಲು ಸಾಧ್ಯವಿಲ್ಲ ಎಂದು ಪಕ್ಷದ ಸಂಸ್ಥಾಪಕ, ಗಣಿ ಉದ್ಯಮಿ ಗಾಲಿ ಜನಾರ್ದನ ರೆಡ್ಡಿ ಹೇಳಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಜಮಖಂಡಿಯ ಖಜ್ಜಿಡೋಣಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರೆಡ್ಡಿ, “ಸರ್ಕಾರ ರಚಿಸಲು ಬಿಜೆಪಿ ನಮ್ಮ ಬೆಂಬಲ ಕೇಳಿದರೆ, ಬೆಂಬಲ ನೀಡುತ್ತೇವೆ” ಎಂದು ಹೇಳಿದ್ದಾರೆ.

“ಬಿಜೆಪಿ ಮಾತ್ರವಲ್ಲ, ಕಾಂಗ್ರೆಸ್ ಅಥವಾ ಜೆಡಿಎಸ್ – ಯಾರೇ ಆಗಿರಲಿ, ನಮ್ಮ ಪಕ್ಷದ ಭರವಸೆಗಳನ್ನು ಯಾರು ಈಡೇರಿಸುತ್ತಾರೋ ಅವರನ್ನು ನಾವು ಬೆಂಬಲಿಸುತ್ತೇವೆ” ಎಂದು ರೆಡ್ಡಿ ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಯುವ ಮತದಾರರು, ಉದ್ಯಮಿಗಳು ಮತ್ತು ವಿದ್ಯಾವಂತರು ನಮ್ಮನ್ನು ಬೆಂಬಲಿಸುತ್ತಿದ್ದಾರೆ. ಚುನಾವಣೆಯಲ್ಲಿ ನಮ್ಮ ಪಕ್ಷವು ಉತ್ತಮ ಸಂಖ್ಯೆಯ ಸ್ಥಾನಗಳನ್ನು ಗೆಲ್ಲುತ್ತದೆ. ನಮ್ಮಲ್ಲಿ ಬೇರೆ ಪಕ್ಷಗಳಿಂದ ವಲಸೆ ಬಂದ ನಾಯಕರು ಬಹಳ ಕಡಿಮೆ ಇದ್ದಾರೆ. ಆದರೆ, ವಿದ್ಯಾವಂತರನ್ನು ಸೆಳೆಯುವಲ್ಲಿ ನಾವು ಯಶಸ್ವಿಯಾಗಿದ್ದೇವೆ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಸಿದ್ದರಾಮಯ್ಯ ಹೇಳಿಕೆ ತಿರುಚಿದ ಎನ್‌ಡಿಟಿವಿ: ಅದಾನಿ ಟಿವಿಯಿಂದಲೂ ನೀವು ಬಚಾವಾಗಲ್ಲ ಎಂದ ಸುರ್ಜೇವಾಲ

“ಪಕ್ಷವು 50 ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಿದೆ. 30-35 ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತದೆ. ಈಗಾಗಲೇ 14 ಅಭ್ಯರ್ಥಿಗಳನ್ನು ಘೋಷಿಸಿದೆ. ಏಪ್ರಿಲ್ 10 ರೊಳಗೆ ಉಳಿದ ಹೆಸರುಗಳನ್ನು ಪ್ರಕಟಿಸಲಾಗುವುದು” ಎಂದು ಅವರು ಹೇಳಿದ್ದಾರೆ.

“ನಾವು ಸ್ವಂತ ಬಲದಿಂದ ಅಧಿಕಾರಕ್ಕೆ ಬರಲು 2028ರ ವಿಧಾನಸಭಾ ಚುನಾವಣೆಯತ್ತ ಗಮನಹರಿಸುತ್ತಿದ್ದೇವೆ. ನಮ್ಮದು ಜಾತ್ಯತೀತ ತತ್ವಗಳನ್ನು ಹೊಂದಿರುವ ಪಕ್ಷ. ಆದ್ದರಿಂದ ನಾವು ದಲಿತ, ಮುಸ್ಲಿಂ ಮತ್ತು ಇತರ ಸಮುದಾಯಗಳ ಜನರನ್ನು ಸೆಳೆಯುತ್ತಿದ್ದೇವೆ,” ಎಂದು ರೆಡ್ಡಿ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಬೈ | ಸಾಂಗ್ಲಿಯಿಂದ ಶಿವಸೇನೆ ಸ್ಪರ್ಧೆ; ಬಿಜೆಪಿಗೆ ನೆರವು ನೀಡದಂತೆ ಸಂಜಯ್ ರಾವತ್ ಕರೆ

ಮಹಾರಾಷ್ಟ್ರದ ಸಾಂಗ್ಲಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ತಮ್ಮ ಪಕ್ಷ ನಿರ್ಧರಿಸಿದೆ ಎಂದು...

ಕಲಬುರಗಿ | ನನ್ನನ್ನು ಎನ್‌ಕೌಂಟರ್ ಮಾಡುವ ಜೀವ ಬೆದರಿಕೆ ಪತ್ರ ಬಂದಿದೆ: ಸಚಿವ ಪ್ರಿಯಾಂಕ್ ಖರ್ಗೆ

ಬಿಜೆಪಿಯವರು ಗಲಭೆ ಸೃಷ್ಟಿಸಿ ಚುನಾವಣೆ ಮಾಡಬೇಕು ಅಂತಿದ್ದಾರೆ. ನನ್ನ ಹೆಣ ಬೀಳಿಸಿಯಾದ್ರೂ...