ಚುನಾವಣೆ 2023 | ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ; ಭಜರಂಗದಳ ನಿಷೇಧಕ್ಕೆ ಕ್ರಮ

Date:

  • ರಾಜ್ಯದಲ್ಲಿ 2.50 ಲಕ್ಷ ಸರ್ಕಾರಿ ಹುದ್ದೆ ಖಾಲಿ ಇದ್ದು, ವರ್ಷದೊಳಗೆ ಭರ್ತಿ
  • ಅಂಗನವಾಡಿ ಕಾರ್ಯಕರ್ತೆಯರ ಗೌರವಧನ 15,000 ರೂ.ಕ್ಕೆ ಏರಿಕೆ

ರಾಜ್ಯ ವಿಧಾನಸಭಾ ಚುನಾವಣೆ ಮತದಾನಕ್ಕೆ ಎಂಟು ದಿನ ಬಾಕಿ ಇದ್ದು, ‘ಸರ್ವಜನಾಂಗದ ಶಾಂತಿಯ ತೋಟ, ಇದುವೇ ಕಾಂಗ್ರೆಸ್ ಬದ್ಧತೆ’ ಹೆಸರಿನಲ್ಲಿ ಕಾಂಗ್ರೆಸ್‌ ಮಂಗಳವಾರ ಪ್ರಣಾಳಿಕೆ ಬಿಡುಗಡೆಮಾಡಿದೆ.

ಐಎಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಿದರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಕೇಂದ್ರದ ಮಾಜಿ ಸಚಿವ ಪಿ ಚಿದಂಬರಂ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್, ಪ್ರಣಾಳಿಕೆ ಸಮಿತಿ ಅಧ್ಯಕ್ಷರಾದ ಡಾ.ಜಿ. ಪರಮೇಶ್ವರ್, ಮಾಜಿ ಸಚಿವೆ ರಾಣಿ ಸತೀಶ್, ಎಐಸಿಸಿ ಸಂವಹನ ವಿಭಾಗದ ಮುಖ್ಯಸ್ಥ ಪವನ್ ಖೇರಾ, ವಕ್ತಾರ ಗೌರವ್ ವಲ್ಲಭ್, ಪ್ರೊ. ರಾಜೀವ್ ಗೌಡ, ಪ್ರೊ ಕೆ ಈ ರಾಧಾಕೃಷ್ಣ, ಮತ್ತಿತರರು ಉಪಸ್ಥಿತರಿದ್ದರು.

ಪ್ರಣಾಳಿಕೆಯಲ್ಲಿನ ಭರವಸೆಗಳನ್ನು ಈಡೇರಿಸುವ ಪ್ರಮಾಣಿಕತೆಯ ಸಂಕೇತವಾಗಿ ಪ್ರಣಾಳಿಕೆ ಹೊತ್ತಿಗೆಗೆ ಅರಿಶಿನ-ಕುಂಕುಮ ಹಚ್ಚಿ, ವೀಳ್ಯದೆಲೆ ಅಡಿಕೆ ಇಟ್ಟು ಸಾಂಪ್ರದಾಯಿಕವಾಗಿ ಬಿಡುಗಡೆ ಮಾಡಿದ್ದು ವಿಶೇಷವಾಗಿತ್ತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈಗಾಗಲೇ ಗ್ಯಾರಂಟಿ ಯೋಜನೆ ಘೋಷಿಸಿರುವ ಕಾಂಗ್ರೆಸ್‌, ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್​, ಗೃಹ ಲಕ್ಷ್ಮಿ ಯೋಜನೆಯಡಿ ಮನೆಯ ಯಜಮಾನತಿಗೆ ಪ್ರತಿ ತಿಂಗಳು 2,000 ರೂಪಾಯಿ, ಪ್ರತಿಯೊಬ್ಬರಿಗೆ ಉಚಿತ ಅಕ್ಕಿ, ಪದವೀಧರ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು 3,000 ರೂ. ನಿರುದ್ಯೋಗ ಭತ್ಯೆ ಹಾಗೂ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ಒದಗಿಸುವುದಾಗಿ ಹೇಳಿದೆ. ಈ ಯೋಜನೆಗಳ ಜೊತೆಗೆ ಸಾಲುಸಾಲು ಹೊಸ ಭರವಸೆಗಳನ್ನು ಕಾಂಗ್ರೆಸ್ ಘೋಷಿಸಿದೆ.

ಅಂಗನವಾಡಿ ಕಾರ್ಯಕರ್ತೆಯರ ಗೌರವಧನವನ್ನು ₹11,500 ದಿಂದ ₹15,000ಕ್ಕೆ, ಸಹಾಯಕಿಯರಿಗೆ ₹7,500 ದಿಂದ ₹10,000 ಕ್ಕೆ ಹೆಚ್ಚಿಸುವುದಾಗಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ತಿಳಿಸಿದೆ. ಜೊತೆಗೆ ಆಶಾ ಕಾರ್ಯಕರ್ತೆಯರ ಗೌರವಧನವನ್ನು ಕಾಂಗ್ರೆಸ್ ₹5,000 ದಿಂದ ₹8,000ಕ್ಕೆ, ಬಿಸಿಯೂಟ ಕಾರ್ಯಕರ್ತೆಯರ ಗೌರವಧನವನ್ನು ₹3,700 ದಿಂದ ₹5,000ಕ್ಕೆ ಹೆಚ್ಚಿಸುತ್ತೇವೆ ಎಂದಿದೆ.

ಖಾಲಿ ಇರುವ ಎಲ್ಲ ಸರ್ಕಾರಿ ಹುದ್ದೆಗಳನ್ನು ಕೇವಲ ಒಂದು ವರ್ಷದ ಅವಧಿಯಲ್ಲಿ ಭರ್ತಿ ಮಾಡುವುದಾಗಿ ಕಾಂಗ್ರೆಸ್ ಹೇಳಿದೆ. ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಉದ್ಯೋಗಿಗಳನ್ನು ಖಾಯಂಗೊಳಿಸುವುದಾಗಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿದೆ.

“ಸಂವಿಧಾನದ ವಿಧಿಗಳನ್ನು ಉಲ್ಲಂಘಿಸುವ ಭಜರಂಗದಳ ಮತ್ತು ಪಿಎಫ್ಐನಂತಹ ಸಂಘಟನೆಗಳ ಕೃತ್ಯಗಳನ್ನು ಸಹಿಸುವುದಿಲ್ಲ. ಆದ ಕಾರಣ ಇಂತಹ ವ್ಯಕ್ತಿಗಳು ಮತ್ತು ಸಂಘಟನೆಗಳ ನಿಷೇಧವೂ ಸೇರಿದಂತೆ ಬಲವಾದ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು” ಎಂದು ಕಾಂಗ್ರೆಸ್ ಹೇಳಿದೆ.

ನಾಲ್ಕು ವರ್ಷದೊಳಗೆ ಎಲ್ಲ ಪೊಲೀಸರಿಗೂ ವಸತಿ ಸೌಲಭ್ಯ. ರಾತ್ರಿ ಪಾಳಿಯ ಪೊಲೀಸರಿಗೆ 5 ಸಾವಿರ ಭತ್ಯೆ. ವರ್ಷದ ಒಂದು ತಿಂಗಳು ಪೊಲೀಸರ ಸಂಬಳ ಹೆಚ್ಚಳದ ಭರವಸೆ ನೀಡಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪೆನ್‌ಡ್ರೈವ್‌ ಪ್ರಕರಣ; ಅಪ್ಪ- ಮಗ ಇಬ್ಬರಿಂದಲೂ ಲೈಂಗಿಕ ಕಿರುಕುಳ- ಸಂತ್ರಸ್ತೆ ದೂರು

ಹಾಸನದ ಪ್ರಭಾವಿ ರಾಜಕೀಯ ಕುಟುಂಬಕ್ಕೆ ಸಂಬಂಧಿಸಿದ ಲೈಂಗಿಕ ಹಗರಣ ಹಲವು ತಿರುವುಗಳನ್ನು...

ಹಾಸನ ಪೆನ್‌ಡ್ರೈವ್ ಪ್ರಕರಣ | ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ನಿರ್ಧಾರ

ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ...

ಮೋದಿ ಸುಳ್ಳುಗಳು: ಭಾಗ-1 | ಕಳೆದ 10 ವರ್ಷಗಳಲ್ಲಿ ವಿಶ್ವಾದ್ಯಂತ ಭಾರತದ ವಿಶ್ವಾಸಾರ್ಹತೆ ಹೆಚ್ಚಾಗಿದೆಯೇ? ವಾಸ್ತವ ಏನು?

ಮುಸಲ್ಮಾನರಿಗೆ ಕಳೆದ 30 ವರ್ಷದಿಂದ ಮೀಸಲಾತಿ ಜಾರಿಯಲ್ಲಿದೆ. ನಂತರ ಬಸವರಾಜ ಬೊಮ್ಮಾಯಿ...

ಛಲಬಿಡದೆ ಬರಪರಿಹಾರ ತಂದ ಕಾಂಗ್ರೆಸ್‌ಗೆ ಜನ ಮೆಚ್ಚುಗೆ; ಯಾರು ಏನಂದರು?

ಬಿಜೆಪಿ ನಾಯಕರು ಎಷ್ಟೇ ಸುಳ್ಳು ಹೇಳಿದರೂ ಕುಗ್ಗದೆ, ಸುಪ್ರೀಂ ಕೋರ್ಟ್ ಮೆಟ್ಟಿಲನ್ನೂ...