ಚಾಮರಾಜನಗರ | ಸಚಿವ ವಿ ಸೋಮಣ್ಣ ವಿರುದ್ಧ ಸುದ್ದಿಗೋಷ್ಠಿ ನಡೆಸಿದ್ದಕ್ಕೆ ನೋಟಿಸ್ ಜಾರಿ

Date:

  • ಬಿಜೆಪಿ ವಕ್ತಾರ ಆಯ್ಯನಪುರ ಶಿವಕುಮಾರ್‌ಗೆ ನೋಟಿಸ್ ಜಾರಿ
  • ಪಕ್ಷದ ಚೌಕಟ್ಟಿನಲ್ಲಿ ಶಿಸ್ತು ಕ್ರಮ: ಜಿಲ್ಲಾಧ್ಯಕ್ಷ ನಾರಾಯಣ ಪ್ರಸಾದ್

ವಸತಿ ಸಚಿವ ವಿ ಸೋಮಣ್ಣ ವಿರುದ್ಧ ಸುದ್ದಿಗೋಷ್ಠಿ ನಡೆಸಿದ್ದ ಕಾರಣಕ್ಕೆ ಬಿಜೆಪಿ ಚಾಮರಾಜನಗರ ಜಿಲ್ಲಾ ವಕ್ತಾರ ಅಯ್ಯನಪುರ ಶಿವಕುಮಾರ್‌ಗೆ ಕಾರಣ ಕೇಳಿ ಬಿಜೆಪಿ ನಾಯಕರು ನೋಟಿಸ್ ಜಾರಿ ಮಾಡಿದ್ದಾರೆ.

“ಸಚಿವ ವಿ ಸೋಮಣ್ಣ ಅವರಿಗೆ ಮೈಸೂರು ವಿಭಾಗದ ಉಸ್ತುವಾರಿ ಮತ್ತು ಚಾಮರಾಜನಗರ ಕ್ಷೇತ್ರದಿಂದ ಟಿಕೆಟ್ ನೀಡುವುದು ಬೇಡ. ಒಂದು ವೇಳೆ, ಚಾಮರಾಜನಗರದಲ್ಲಿ ಟಿಕೆಟ್ ನೀಡಿದರೆ ‘ಗೋ ಬ್ಯಾಕ್’ ಚಳವಳಿ ನಡೆಸುತ್ತೇವೆ. ಸೋಮಣ್ಣ ಕಳೆದ ಚುನಾವಣೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಸಹಕರಿಸಿದ್ದಾರೆ. ಜೊತೆಗೆ ಜಿಲ್ಲೆಯಲ್ಲಿ ಪಕ್ಷ ಸಂಘಟನೆ ಮಾಡುವಲ್ಲಿ ವಿಫಲರಾಗಿದ್ದಾರೆ” ಎಂದು ಬಿಜೆಪಿ ವಕ್ತಾರ ಶಿವಕುಮಾರ್ ಬಹಿರಂಗವಾಗಿ ಆರೋಪ ಮಾಡಿದ್ದರು.

ಶಿವಕುಮಾರ್‌ ಆರೋಪಗಳ ಉರಿತು ಪ್ರತಿಕ್ರಿಯಿಸಿರುವ ಬಿಜೆಪಿ ಚಾಮರಾಜನಗರ ಜಿಲ್ಲಾಧ್ಯಕ್ಷ ನಾರಾಯಣ ಪ್ರಸಾದ್, “ಇದು ಜಿಲ್ಲಾ ಬಿಜೆಪಿಯ ನಿಲುವಲ್ಲ, ಅವರ ವೈಯಕ್ತಿಕ ಅಭಿಪ್ರಾಯ. ಅವರ ಹೇಳಿಕೆಗೂ ಜಿಲ್ಲಾ ಬಿಜೆಪಿಗೂ ಸಂಬಂಧವಿಲ್ಲ. ಶಿವಕುಮಾರ್ ಹೇಳಿಕೆಗಳನ್ನು ವರಿಷ್ಠರ ಗಮನಕ್ಕೆ ತರಲಾಗಿದೆ. ಶಿವಕುಮಾರ್‌ಗೆ ಕಾರಣ ಕೇಳಿ ನೋಟಿಸ್ ಜಾರಿಗೊಳಿಸಲಾಗಿದೆ. ಅವರ ವಿರುದ್ಧ ಪಕ್ಷದ ಚೌಕಟ್ಟಿನಲ್ಲಿ ಶಿಸ್ತು ಕ್ರಮ ಜರುಗಿಸಲಾಗುವುದು” ಎಂದು ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

26/11 ದಾಳಿಯ ಉಗ್ರ ಕಸಬ್‌ನನ್ನು ಗಲ್ಲಿಗೇರಿಸಲು ವಾದ ಮಂಡಿಸಿದ್ದ ವಕೀಲ ಮುಂಬೈ ಕ್ಷೇತ್ರದ ಬಿಜೆಪಿ ಅಭ್ಯರ್ಥಿ

ಮುಂಬೈನ 26/11ರ ಭಯೋತ್ಪಾದನಾ ದಾಳಿಯಲ್ಲಿ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿದ್ದ ವಕೀಲ ಉಜ್ವಲ್...

ಕುಮಾರಣ್ಣನ ಜೇಬಲ್ಲಿದ್ದ ‘ಪೆನ್‌ಡ್ರೈವ್‌’ನಲ್ಲಿ ಏನಿತ್ತು ಎಂಬುದು ಈಗ ಗೊತ್ತಾಯ್ತು: ಡಿ ಕೆ ಶಿವಕುಮಾರ್

ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿರುವ ಜೆಡಿಎಸ್ ಸಂಸದ ಹಾಗೂ ಹಾಸನ...

‘ಬರ ಪರಿಹಾರ ಸಾಕು’ ಎಂದಿರುವ ಕುಮಾರಸ್ವಾಮಿ ನಾಡದ್ರೋಹಿ: ಡಿಸಿಎಂ ಡಿಕೆಶಿ ವಾಗ್ದಾಳಿ

"ಕೇಂದ್ರ ಸರ್ಕಾರ ಕರ್ನಾಟಕದ ಬರಕ್ಕೆ ಅಲ್ಪ ಪರಿಹಾರ ಮೊತ್ತ ಘೋಷಿಸಿದ್ದು, ನಾವು...