ನಮ್ಮ ಕುಟುಂಬ ಯಾವತ್ತೂ ಪ್ರಚಾರಕ್ಕೆ ಬಂದಿಲ್ಲ, ನಮಗೆ ಸೋಲಿನ ಭಯವಿಲ್ಲ: ಯತೀಂದ್ರ

Date:

  • ಕುಟುಂಬ ರಾಜಕಾರಣದ ಟೀಕೆಗೆ ಯತೀಂದ್ರ ಖಡಕ್‌ ಉತ್ತರ
  • ವರುಣದಲ್ಲಿ ಇಂದಿನಿಂದ ಸಿದ್ದರಾಮಯ್ಯ ಅಧಿಕೃತ ಪ್ರಚಾರ

ನಮ್ಮ ಕುಟುಂಬ ಎಂದೂ ಚುನಾವಣಾ ಪ್ರಚಾರಕ್ಕೆ ಬಂದಿಲ್ಲ, ನಮಗೆ ಅದರ ಅವಶ್ಯಕತೆ ಇಲ್ಲ. ಏಕೆಂದರೆ ವರುಣ ಕ್ಷೇತ್ರ ಕಾಂಗ್ರೆಸ್‌ನ ಭದ್ರಕೋಟೆ ಎಂದು ವರುಣ ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ವರುಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ವರುಣದಲ್ಲಿ ಸಿದ್ದರಾಮಯ್ಯ ಅವರ ಗೆಲುವು ನಿಶ್ಚಿತ. ವಿರೋಧಿಗಳು ಎಷ್ಟೇ ಪ್ರಯತ್ನ ಮಾಡಿದರೂ ಸಿದ್ದರಾಮಯ್ಯನವರನ್ನು ಸೋಲಿಸಲು ಸಾಧ್ಯವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇಂದಿನಿಂದ ವರುಣ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಪ್ರಚಾರ ಮಾಡುತ್ತಾರೆ. ಈಗಾಗಲೇ ಎರಡು ದಿನ ಪ್ರಚಾರ ಮಾಡ್ತೇನೆ ಎಂದು ಹೇಳಿದ್ದಾರೆ. ಇಂದು ಕೆಲವು ಗ್ರಾಮಗಳಲ್ಲಿ ಪ್ರಚಾರ ಮಾಡಲಿದ್ದಾರೆ ಎಂದರು.

ಸಿದ್ದರಾಮಯ್ಯ ಸೋಲಿನ ಭಯದಿಂದ ಧವನ್ ರಾಕೇಶ್ ಕರೆ ತಂದು ಪ್ರಚಾರ ಮಾಡುತ್ತಿದ್ದಾರೆ ಎನ್ನುವ ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ಯತೀಂದ್ರ ಸಿದ್ಧರಾಮಯ್ಯ ತಿರುಗೇಟು ನೀಡಿದರು.

ಈ ಸುದ್ದಿ ಓದಿದ್ದೀರಾ?:ಚುನಾವಣೆ 2023 | ನಾಳೆಯಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರೋಡ್ ಶೋ

ಪ್ರತಾಪ್ ಸಿಂಹ ಅವರು ತಮ್ಮ ಮನೆಯವರನ್ನು ಎಲ್ಲಿಯೂ ಕರೆದುಕೊಂಡು ಹೋಗಿಲ್ಲವೇ ಎಂದು ಹೇಳಲಿ ಎಂದ ಯತೀಂದ್ರ ಧವನ್ ರಾಕೇಶ್ ನಾಮಪತ್ರ ಸಲ್ಲಿಸುವ ದಿನ ತಾತನಿಗೆ ಶುಭ ಕೋರಲು ಬಂದಿದ್ದ ಎಂದರು.

ಧವನ್ ರಾಕೇಶ್ ಎಲ್ಲಿಯೂ ಪ್ರಚಾರಕ್ಕೆ ಬಂದಿಲ್ಲ. ನಮ್ಮ ಕುಟುಂಬ ಯಾವತ್ತೂ ಪ್ರಚಾರ ಕಾರ್ಯಕ್ರಮಕ್ಕೆ ಆಗಮಿಸಿಲ್ಲ ಎಂದು ಹೇಳಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಹಿಳಾ ಮೀಸಲಾತಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಅಂಗೀಕಾರಗೊಂಡಿದ್ದ ಮಹಿಳಾ ಮೀಸಲಾತಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ...

ಕರ್ನಾಟಕಕ್ಕೆ ನೀಡಲು ‘ಇಲ್ಲ’ ಎಂದಿದ್ದ ‘ಅಕ್ಕಿ’ ಸಿಂಗಾಪುರಕ್ಕೆ ರಫ್ತು ಮಾಡಲು ಹೊರಟ ಕೇಂದ್ರ ಸರ್ಕಾರ!

ಕರ್ನಾಟಕ ಸರ್ಕಾರವು ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ನೀಡುವಂತೆ ಕೇಳಿದಾಗ 'ನಿಮಗೆ...

ಬೆಳಗಾವಿ | ಆಪರೇಷನ್ ಹಸ್ತದ ಬಗ್ಗೆ ಲಕ್ಷ್ಮಣ್ ಸವದಿ ಮಾರ್ಮಿಕ ಹೇಳಿಕೆ

ಬಹಳಷ್ಟು ಮಂದಿ ಜೆಡಿಎಸ್‌-ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಬರುಲು ಸಿದ್ದರಾಗಿದ್ದಾರೆ. ಎಲ್ಲದಕ್ಕೂ ಕಾಲ...

ಕಟುಕ, ಕಟಿಕ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರ್ಪಡೆ ಮಾಡಲು ಸಿಎಂಗೆ ಮನವಿ

ರಾಜ್ಯ ಕಟಿಕ ಸಮಾಜದ ನಿಯೋಗವು ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ...