ನಟಿ ರಮ್ಯಾರನ್ನು ಬಿಜೆಪಿಗೆ ಆಹ್ವಾನಿಸುವಷ್ಟು ನಮ್ಮ ಪಾರ್ಟಿ ಬರಗೆಟ್ಟಿಲ್ಲ‌ : ಸಚಿವ ಆರ್ ಅಶೋಕ

Date:

ನಟಿ ರಮ್ಯಾರನ್ನು ಬಿಜೆಪಿಗೆ ಆಹ್ವಾನಿಸುವಷ್ಟು ನಮ್ಮ ಪಾರ್ಟಿ ಬರಗೆಟ್ಟಿಲ್ಲ‌. ಮಾಜಿ ಸಿಎಂ ಜಗದೀಶ್ ಶೆಟ್ಟರ್, ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರಿಗೇ ಟಿಕೆಟ್ ಕೊಟ್ಟಿಲ್ಲ. ಇನ್ನು ರಮ್ಯಾಗೆ ಕರೆದು ಸಚಿವ ಸ್ಥಾನ ಕೊಡ್ತೀವಾ? ಎಂದು ಸಚಿವ ಆರ್ ಅಶೋಕ ಹೇಳಿದರು.

- Advertisement -

ʼಬಿಜೆಪಿಗೆ ಬನ್ನಿ ನಾಳೆಯೇ ನಿಮ್ಮನ್ನು ಮಂತ್ರಿ ಮಾಡುತ್ತೇವೆʼ ಎಂದು ಬಿಜೆಪಿ ನಾಯಕರು ಆಹ್ವಾನಿಸಿದ್ದಾರೆ ಎಂದು ಸ್ವತಃ ರಮ್ಯಾ ಈ ವಿಚಾರ ಬಹಿರಂಗಪಡಿಸಿದ್ದಾರೆ. ರಮ್ಯಾ ಅವರ ಈ ಹೇಳಿಕೆಗೆ ಸಚಿವ ಆರ್ ಅಶೋಕ್ ಭಾನುವಾರ ತಿರುಗೇಟು ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇಂಗ್ಲಿಷ್‌ ಸುದ್ದಿವಾಹಿನಿಯ ಕಾರ್ಯಕ್ರಮವೊಂದರಲ್ಲಿ ಶನಿವಾರ ಮಾತನಾಡಿದ್ದ ರಮ್ಯಾ, “ನಾನು ಕೆಲವು ಬಾರಿ ಕಾಂಗ್ರೆಸ್‌ ವಿರುದ್ಧ ಮಾತನಾಡಿದ್ದಾಗ ಬಿಜೆಪಿಯಿಂದ ಆಫರ್‌ ಬಂದಿತ್ತು. ಆದರೆ, ನಾನು ಯಾವುದೇ ಭಿನ್ನಭಿಪ್ರಾಯ ಕಾರಣಕ್ಕೆ ಬಿಜೆಪಿಗೆ ಹೋಗಲಿಲ್ಲ. ಹಾಗಂತ ನನಗೆ ಬಿಜೆಪಿ ಮೇಲೆ ದ್ವೇಷ ಇಲ್ಲ. ಆದರೆ, ಅವರ ಕೆಲವೊಂದು ಸಿದ್ಧಾಂತಗಳಿಗೆ ನನ್ನ ವಿರೋಧವಿದೆ” ಎಂದು ಹೇಳಿಕೊಂಡಿದ್ದರು.

ಮುಂದುವರಿದು, “ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಅವರನ್ನು ಆಕಸ್ಮಿಕವಾಗಿ ಭೇಟಿಯಾದಾಗ, ʼನೀವು ಏಕೆ ರಾಜಕೀಯವನ್ನು ಬಿಟ್ರಿ? ಮತ್ತೆ ರಾಜಕೀಯಕ್ಕೆ ಬನ್ನಿ, ನಿಮಗೆ ಸಾಮರ್ಥ್ಯವಿದೆ. ರಾಜಕೀಯ ಕ್ಷೇತ್ರವನ್ನು ಬಿಡಬೇಡಿʼ ಎಂದು ಸಲಹೆ ನೀಡಿದ್ದರು” ಎಂದು ರಮ್ಯಾ ಹೇಳಿದ್ದರು.

“ಕಾಂಗ್ರೆಸ್‌ ಈ ಬಾರಿ ಆರು ಕ್ಷೇತ್ರಗಳ ಟಿಕೆಟ್‌ ಅನ್ನು ನನಗೆ ಆಫರ್‌ ಮಾಡಿತ್ತು. ಆದರೆ, ನಾನು ಇನ್ನೂ ತಯಾರಾಗಿಲ್ಲ. ಚುನಾವಣೆಗೆ ನಿಲ್ಲಲು ಗ್ರೌಂಡ್‌ನಲ್ಲಿ ಕೆಲಸ ಮಾಡಬೇಕು. ಅದಕ್ಕೆ ಸಂಪೂರ್ಣ ಸಮಯ ವಿನಿಯೋಗಿಸಬೇಕು. ಅದು ಈಗ ನನಗೆ ಸಾಧ್ಯವಿಲ್ಲ. ನಾನು ಸ್ಪರ್ಧಿಸದೇ ಪಕ್ಷಕ್ಕೆ ಬೆಂಬಲ ನೀಡುತ್ತೇನೆ. ಪಕ್ಷಕ್ಕಾಗಿ ದುಡಿಯುತ್ತೇನೆ” ಎಂದು ಹೇಳಿದ್ದೇನೆ ಎಂದು ರಮ್ಯಾ ತಿಳಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರತಿಭಟನೆಗೆ ವಾಂಗ್‌ಚುಕ್ ಬೆಂಬಲ: ಲಡಾಖ್‌ನ ‘ನೀರಿನ ಜೈವಿಕ ಬಾಂಬ್‌ಗಳ’ ಕಡೆಗೆ ಗಮನ ಹರಿಸಲು ಮನವಿ

ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜಂತರ್ ಮಂತರ್‌ನಲ್ಲಿ ಆಯೋಜಿಸಲಾಗಿರುವ ಬೃಹತ್...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ ನಂಬಿಕೆಯ ಬಿಕ್ಕಟ್ಟು

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ....

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ನವಿ ಪಿಳ್ಳೈಗೆ ಒಲಿದ ಶಾಂತಿ ಪುರಸ್ಕಾರ

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು...

ನಮ್ಮ‌ ಪ್ರಸ್ತಾಪಗಳನ್ನು ರಾಷ್ಟ್ರಪತಿ ನಿರಾಕರಿಸಿದ್ದು ಅಚ್ಚರಿ ಮೂಡಿಸಿದೆ, ಸಾಕ್ಷ್ಯ ಕೇಳಿದ್ದಾರೆ – ಕೊಡುತ್ತೇವೆ: ರಾಹುಲ್ ಗಾಂಧಿ

ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಕ್ರಮವಾಗಿ ತೆಗೆದುಹಾಕಿರುವ ಕುರಿತು ನಾವು ಎತ್ತಿರುವ ವಿಷಯವನ್ನು...