ಫೋಟೋ ಸುದ್ದಿ | ನಾಮಪತ್ರ ಸಲ್ಲಿಕೆ ಮಾಡಿದ ಘಟಾನುಘಟಿಗಳು

Date:

ನಾಮಪತ್ರ ಸಲ್ಲಿಕೆಗೆ ಮೂರು ದಿನಗಳು ಬಾಕಿ ಇರುವ ಹೊತ್ತಲ್ಲೇ ರಾಜ್ಯ ರಾಜಕಾರಣದಲ್ಲಿ ನಾಮಪತ್ರ ಸಲ್ಲಿಕೆಯ ಭರಾಟೆ ಜೋರಾಗಿದೆ. ಎಲ್ಲ ರಾಜಕೀಯ ಪಕ್ಷಗಳ ನಾಯಕರು ನಾ ಮುಂದು ತಾ ಮುಂದು ಎಂದು ನಾಮಪತ್ರ ಸಲ್ಲಿಕೆ ಜೊತೆಜೊತೆಗೆ ಬೃಹತ್ ಮೆರವಣಿಗೆಯನ್ನೂ ಹಮ್ಮಿಕೊಂಡಿದ್ದಾರೆ.

- Advertisement -

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಮತ್ತು ಅವರ ಪುತ್ರ ನಿಖಿಲ್ ಕುಮಾರಸ್ವಾಮಿ, ಸಚಿವ ವಿ ಸೋಮಣ್ಣ, ಆರ್‌ ಅಶೋಕ್‌ ಸೇರಿದಂತೆ ಘಟಾನುಘಟಿಗಳು ಇಂದು (ಏಪ್ರಿಲ್ 17) ನಾಮಪತ್ರ ಸಲ್ಲಿಸಿದ್ದಾರೆ. ಹಾಗೆಯೇ ತಮ್ಮ ಶಕ್ತಿ ಪ್ರದರ್ಶನವನ್ನೂ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ರಾಜಕೀಯ ನಾಯಕರು ನಾಮಪತ್ರ ಸಲ್ಲಿಸಿರುವ ಕೆಲವು ಚಿತ್ರಗಳು ಇಲ್ಲಿವೆ.

ಡಿಕೆ

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಕನಕಪುರ ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಕೆಗೂ ಮೊದಲು ಕ್ಷೇತ್ರದಲ್ಲಿ ರೋಡ್‌ ಶೋ ನಡೆಸಿದರು.

dk Shivakumar

ಡಿ ಕೆ ಶಿವಕುಮಾರ್ ಅವರು ಬೃಹತ್ ಮೆರವಣಿಗೆ ಬಳಿಕ ಕನಕಪುರ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿದರು.

ಕುಮಾರಸ್ವಾಮಿ
ಚನ್ನಪಟ್ಟಣದಲ್ಲಿ ಇಂದು ನಾಮಪತ್ರ ಸಲ್ಲಿಸುವುದಕ್ಕೆ ಮುನ್ನ ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ರೋಡ್ ಶೋ ನಡೆಸಿದರು
WhatsApp Image 2023 04 17 at 3.03.04 PM
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಉಪಸ್ಥಿತಿಯಲ್ಲಿ, ವರುಣಾ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸಚಿವ ಸೋಮಣ್ಣ ಅವರು ನಂಜನಗೂಡು ತಾಲ್ಲೂಕು ಕಚೇರಿಯಲ್ಲಿ ಚುನಾವಣಾ ನಾಮಪತ್ರ ಸಲ್ಲಿಸಿದರು.
Nikhl
ರಾಮನಗರ ವಿಧಾನಸಭೆ ಕ್ಷೇತ್ರದ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಸುವ ಮುನ್ನ ಬೆಂಗಳೂರು ನಗರದ ಜೆ.ಪಿ.ನಗರದಲ್ಲಿರುವ ತಿರುಮಲಗಿರಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಎಚ್‌ ಡಿ ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ ಉಪಸ್ಥಿತರಿದ್ದರು.
R Ashok
ಬೃಹತ್ ರ‍್ಯಾಲಿಯೊಂದಿಗೆ ಬನಶಂಕರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆರ್‌ ಅಶೋಕ್‌ ನಾಮಪತ್ರ ಸಲ್ಲಿಸಿದರು.
ರವಿ ಸಿ (ಪದ್ಮನಾಭನಗರ ಮಂಡಲ ಅಧ್ಯಕ್ಷರು) ನಿಕಟಪೂರ್ವ ಬಿಬಿಎಂಪಿ ಸದಸ್ಯ ಎಲ್ ಶ್ರೀನಿವಾಸ್ ಸೇರಿದಂತೆ ಸಹಸ್ರಾರು ಕಾರ್ಯಕರ್ತರು ಈ ಸಂದರ್ಭದಲ್ಲಿ ಹಾಜರಿದ್ದರು.
ಈಶ್ವರ್ ಖಂಡ್ರೆ
ಭಾಲ್ಕಿ ಮತಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಈಶ್ವರ್ ಖಂಡ್ರೆ ಇಂದು ಬೃಹತ್ ಬೆಂಬಲಿಗರೊಂದಿಗೆ ಮೆರವಣಿಗೆ ಮೂಲಕ ತಹಸಿಲ್ದಾರ್‌ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಪಿ.ಜಿ.ಆರ್ ಸಿಂಧಿಯಾ, ಬೀದರ್ ಶಾಸಕ ರಹಿಂ ಖಾನ್ ಸೇರಿದಂತೆ ಇತರರು ಜೊತೆಗಿದ್ದರು.
CT Ravi
ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸಿ ಟಿ ರವಿ ನಾಮಪತ್ರ ಸಲ್ಲಿಕೆ ಮಾಡಿದರು.
Ashwath
ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಶ್ವತ್ಥ್‌ ನಾರಾಯಣ ಅವರು ನಾಮಪತ್ರ ಸಲ್ಲಿಸುವ ಮುನ್ನ ಮಹಾಗಣಪತಿ ದೇವಸ್ಥಾನ ಹಾಗೂ ಬಾಲಾಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು.
ಕೆ ಎಚ್‌ ಮುನಿಯಪ್ಪ
ದೇವನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಕೆ ಎಚ್‌ ಮುನಿಯಪ್ಪ ಅವರು ನಾಮಪತ್ರ ಸಲ್ಲಿಸಿದರು.
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...