ನಾಮಪತ್ರ ಸಲ್ಲಿಕೆಗೆ ಮೂರು ದಿನಗಳು ಬಾಕಿ ಇರುವ ಹೊತ್ತಲ್ಲೇ ರಾಜ್ಯ ರಾಜಕಾರಣದಲ್ಲಿ ನಾಮಪತ್ರ ಸಲ್ಲಿಕೆಯ ಭರಾಟೆ ಜೋರಾಗಿದೆ. ಎಲ್ಲ ರಾಜಕೀಯ ಪಕ್ಷಗಳ ನಾಯಕರು ನಾ ಮುಂದು ತಾ ಮುಂದು ಎಂದು ನಾಮಪತ್ರ ಸಲ್ಲಿಕೆ ಜೊತೆಜೊತೆಗೆ ಬೃಹತ್ ಮೆರವಣಿಗೆಯನ್ನೂ ಹಮ್ಮಿಕೊಂಡಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮತ್ತು ಅವರ ಪುತ್ರ ನಿಖಿಲ್ ಕುಮಾರಸ್ವಾಮಿ, ಸಚಿವ ವಿ ಸೋಮಣ್ಣ, ಆರ್ ಅಶೋಕ್ ಸೇರಿದಂತೆ ಘಟಾನುಘಟಿಗಳು ಇಂದು (ಏಪ್ರಿಲ್ 17) ನಾಮಪತ್ರ ಸಲ್ಲಿಸಿದ್ದಾರೆ. ಹಾಗೆಯೇ ತಮ್ಮ ಶಕ್ತಿ ಪ್ರದರ್ಶನವನ್ನೂ ಮಾಡಿದ್ದಾರೆ.
ರಾಜಕೀಯ ನಾಯಕರು ನಾಮಪತ್ರ ಸಲ್ಲಿಸಿರುವ ಕೆಲವು ಚಿತ್ರಗಳು ಇಲ್ಲಿವೆ.
Advertisements
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಕನಕಪುರ ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಕೆಗೂ ಮೊದಲು ಕ್ಷೇತ್ರದಲ್ಲಿ ರೋಡ್ ಶೋ ನಡೆಸಿದರು.
ಡಿ ಕೆ ಶಿವಕುಮಾರ್ ಅವರು ಬೃಹತ್ ಮೆರವಣಿಗೆ ಬಳಿಕ ಕನಕಪುರ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿದರು.
ಚನ್ನಪಟ್ಟಣದಲ್ಲಿ ಇಂದು ನಾಮಪತ್ರ ಸಲ್ಲಿಸುವುದಕ್ಕೆ ಮುನ್ನ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ರೋಡ್ ಶೋ ನಡೆಸಿದರುಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಉಪಸ್ಥಿತಿಯಲ್ಲಿ, ವರುಣಾ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸಚಿವ ಸೋಮಣ್ಣ ಅವರು ನಂಜನಗೂಡು ತಾಲ್ಲೂಕು ಕಚೇರಿಯಲ್ಲಿ ಚುನಾವಣಾ ನಾಮಪತ್ರ ಸಲ್ಲಿಸಿದರು.ರಾಮನಗರ ವಿಧಾನಸಭೆ ಕ್ಷೇತ್ರದ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಸುವ ಮುನ್ನ ಬೆಂಗಳೂರು ನಗರದ ಜೆ.ಪಿ.ನಗರದಲ್ಲಿರುವ ತಿರುಮಲಗಿರಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಎಚ್ ಡಿ ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ ಉಪಸ್ಥಿತರಿದ್ದರು.ಬೃಹತ್ ರ‍್ಯಾಲಿಯೊಂದಿಗೆ ಬನಶಂಕರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆರ್ ಅಶೋಕ್ ನಾಮಪತ್ರ ಸಲ್ಲಿಸಿದರು. ರವಿ ಸಿ (ಪದ್ಮನಾಭನಗರ ಮಂಡಲ ಅಧ್ಯಕ್ಷರು) ನಿಕಟಪೂರ್ವ ಬಿಬಿಎಂಪಿ ಸದಸ್ಯ ಎಲ್ ಶ್ರೀನಿವಾಸ್ ಸೇರಿದಂತೆ ಸಹಸ್ರಾರು ಕಾರ್ಯಕರ್ತರು ಈ ಸಂದರ್ಭದಲ್ಲಿ ಹಾಜರಿದ್ದರು.ಭಾಲ್ಕಿ ಮತಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಈಶ್ವರ್ ಖಂಡ್ರೆ ಇಂದು ಬೃಹತ್ ಬೆಂಬಲಿಗರೊಂದಿಗೆ ಮೆರವಣಿಗೆ ಮೂಲಕ ತಹಸಿಲ್ದಾರ್ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಪಿ.ಜಿ.ಆರ್ ಸಿಂಧಿಯಾ, ಬೀದರ್ ಶಾಸಕ ರಹಿಂ ಖಾನ್ ಸೇರಿದಂತೆ ಇತರರು ಜೊತೆಗಿದ್ದರು.ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸಿ ಟಿ ರವಿ ನಾಮಪತ್ರ ಸಲ್ಲಿಕೆ ಮಾಡಿದರು. ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಶ್ವತ್ಥ್ ನಾರಾಯಣ ಅವರು ನಾಮಪತ್ರ ಸಲ್ಲಿಸುವ ಮುನ್ನ ಮಹಾಗಣಪತಿ ದೇವಸ್ಥಾನ ಹಾಗೂ ಬಾಲಾಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು.ದೇವನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಕೆ ಎಚ್ ಮುನಿಯಪ್ಪ ಅವರು ನಾಮಪತ್ರ ಸಲ್ಲಿಸಿದರು.
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ.
ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು
+91 9035362958 ಅನ್ನು ಸಂಪರ್ಕಿಸಿ.