ಈ ದಿನ ಸಮೀಕ್ಷೆ | ಬಿಜೆಪಿಗೆ ನಿದ್ರಾಭಂಗ; ಕಾಂಗ್ರೆಸ್‌ನಲ್ಲಿ ಹೊಸ ಹುಮ್ಮಸ್ಸು

Date:

  • ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ಎಂದ ಸಮೀಕ್ಷೆ
  • ರಾಜ್ಯದ ಚುನಾವಣಾ ಇತಿಹಾಸದಲ್ಲಿ ಅತಿದೊಡ್ಡ ಸಮೀಕ್ಷೆ

ಜನರೇ ರೂಪಿಸಿಕೊಂಡಿರುವ ‘ಈ ದಿನ.ಕಾಮ್‌’ ಸುದ್ದಿ ಮಾಧ್ಯಮ ನಡೆಸಿರುವ ವೈಜ್ಞಾನಿಕ ಚುನಾವಣಾ ಪೂರ್ವ ಸಮೀಕ್ಷೆ ರಾಜ್ಯ ಮತ್ತು ರಾಷ್ಟ್ರ ರಾಜಕಾರಣದಲ್ಲಿ ಪರ-ವಿರೋಧದ ಚರ್ಚೆಗೆ ಕಾರಣವಾಗಿದೆ. ಸಮೀಕ್ಷೆಯು ಕೋಮುವಾದ, ಹಿಂದುತ್ವದ ಮೇಲೆ ರಾಜಕಾರಣ ಮಾಡುತ್ತಾ ಭ್ರಷ್ಟಾಚಾರ, ಕಮಿಷನ್, ಅಸಮರ್ಥ ಆಡಳಿತದ ಆರೋಪ ಎದುರಿಸುತ್ತಿರುವ ಬಿಜೆಪಿಯ ನಿದ್ದೆಗೆಡಿಸಿದೆ.

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ದೇಶದ ಅತ್ಯಂತ ದೊಡ್ಡ ಸಮೀಕ್ಷೆಯನ್ನು ‘ಈ ದಿನ.ಕಾಮ್‌’ ನಡೆಸಿದೆ. ಸುಮಾರು 41 ಸಾವಿರಕ್ಕೂ ಅಧಿಕ ಜನರನ್ನು ಸಂಪರ್ಕಿಸಿ ಮೆಗಾ ಸಮೀಕ್ಷೆ ನಡೆಸಿದೆ.

ಸಮೀಕ್ಷೆಯ ಪ್ರಕಾರ ರಾಜ್ಯದಲ್ಲಿ 132 ರಿಂದ 140 ಸೀಟುಗಳನ್ನು ಗೆಲ್ಲುವ ಮೂಲಕ ಕಾಂಗ್ರೆಸ್ ರಾಜ್ಯದ ಅಧಿಕಾರವನ್ನು ತನ್ನದಾಗಿಸಿಕೊಳ್ಳಲಿದೆ. ಆಡಳಿತಾರೂಢ ಬಿಜೆಪಿ 57-65 ಸ್ಥಾನಗಳಿಗೆ ತೃಪ್ತಿಪಟ್ಟುಕೊಳ್ಳಲಿದೆ ಎಂದು ಸಮೀಕ್ಷೆಯ ಅಂಕಿಅಂಶಗಳು ಹೇಳಿವೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ

ಈ ಮೆಗಾ ಸಮೀಕ್ಷಾ ವರದಿ ರಾಜ್ಯ ಮತ್ತು ರಾಷ್ಟ್ರೀಯ ಮಾಧ್ಯಮಗಳಲ್ಲಿಯೂ ಬಿತ್ತರವಾಗುತ್ತಿದೆ. ಸುದ್ದಿ ವಾಹಿನಿಗಳು ಸಮೀಕ್ಷೆಯ ಕುರಿತು ಚರ್ಚೆಗಳನ್ನು ನಡೆಸುತ್ತಿವೆ. ಈ ನಡುವೆ, ಮೊದಲೇ ಸೋಲಿನ ಭಯದಲ್ಲಿದ್ದ ಬಿಜೆಪಿಗೆ ಸಮೀಕ್ಷೆ ಮತ್ತಷ್ಟು ಭಯವುಂಟು ಮಾಡಿದೆ. ಬಿಜೆಪಿ ನಾಯಕರು ಸಮೀಕ್ಷೆಯನ್ನು ತಿರಸ್ಕರಿಸಿದ್ದಾರೆ.

‘ಈ ದಿನ.ಕಾಮ್‌’ ಮೆಗಾ ಸಮೀಕ್ಷೆಯ ವಿಶ್ಲೇಷಣೆಯನ್ನು ಸ್ವರಾಜ್ ಇಂಡಿಯಾ ಪಕ್ಷದ ಯೋಗೇಂದ್ರ ಯಾದವ್ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಸಮೀಕ್ಷೆಯ ಅಂಕಿ ಅಂಶಗಳಿಂದ ನಿದ್ರೆಗೆಟ್ಟಿರುವ ಬಿಜೆಪಿ ಹೈಕಮಾಂಡ್ ನಾಯಕರು ಯೋಗೇಂದ್ರ ಯಾದವ್ ಅವರ ಮೇಲೆ ಮುಗಿಬಿದ್ದಿದ್ದಾರೆ.

ಸಮೀಕ್ಷೆಯ ಕುರಿತು ಟ್ವೀಟ್ ಮಾಡಿರುವ ಬಿಜೆಪಿ ಮುಖಂಡ ಬಿ.ಎಲ್ ಸಂತೋಷ್, “ಆಂದೋಲನ ಮತ್ತು ಪಾದಯಾತ್ರೆಗಳನ್ನು ನಡೆಸುವ ಯೋಗೇಂದ್ರ ಯಾದವ್ ತಮ್ಮ ಯಜಮಾನರನ್ನು ಮೆಚ್ಚಿಸಲು ಈ ಸಮೀಕ್ಷೆ ನಡೆಸಿದ್ದಾರೆ. ಇದು ಆಶ್ಚರ್ಯಕರ” ಎಂದು ಹೇಳಿದ್ದಾರೆ.

ಬಿ.ಎಲ್ ಸಂತೋಷ್ ಅವರಂತೆಯೇ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್, “ಯೋಗೇಂದ್ರ ಯಾದವ್ ಒಬ್ಬ ಬೋಗಸ್ ರಾಜಕಾರಣಿ, ಆತ ನಡೆಸಿದ ಸಮೀಕ್ಷೆ ಬೋಗಸ್ ಸಮೀಕ್ಷೆ” ಎಂದು ಟ್ವೀಟ್ ಮಾಡಿದ್ದಾರೆ.

ರಾಜೀವ್ ಚಂದ್ರಶೇಖರ್ ಅವರಿಗೆ ತಿರುಗೇಟು ನೀಡಿರುವ ಯೋಗೇಂದ್ರ ಯಾದವ್, “ಯಶಸ್ವಿ ಉದ್ಯಮಿ. ಯಶಸ್ವಿ ರಾಜಕಾರಣಿಗೆ ‘ಇದು ನನ್ನ ಸಮೀಕ್ಷೆಯಲ್ಲ’ ಎಂಬುದನ್ನು ಗಮನಿಸಲು ಸಾಧ್ಯವಾಗಿಲ್ಲ. ಎಂತಹ ಜೆಂಟಲ್‌ಮನ್” ಎಂದು ವ್ಯಂಗ್ಯವಾಡಿದ್ದಾರೆ.

ಕಾಂಗ್ರೆಸ್ಸಿಗರ ಹರ್ಷ

ಸಮೀಕ್ಷೆಯ ಕುರಿತು ಪ್ರತಿಕ್ರಿಯಿಸಿರುವ ಎಐಸಿಸಿ ರಾಜ್ಯ ಚುನಾವಣಾ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, “ಈದಿನ.ಕಾಮ್‌ ನಡೆಸಿರುವ ಅತಿದೊಡ್ಡ ಸಮೀಕ್ಷೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದಿದೆ. ಕಾಂಗ್ರೆಸ್ 140 ಸ್ಥಾನಗಳನ್ನು ಪಡೆಯುತ್ತಿದೆ. ಬಿಜೆಪಿ ಪತನವಾಗುತ್ತಿದೆ. ಜೆಡಿಎಸ್ ನಶಿಸುತ್ತಿದೆ” ಎಂದಿದ್ದಾರೆ.

ಕಾಂಗ್ರೆಸ್ ನಾಯಕ ಪವನ್ ಖೇರಾ ಅವರು ಕೂಡ ತಮ್ಮ ಟ್ವಿಟರ್‌ ಖಾತೆಯಲ್ಲಿ ‘ಈ ದಿನ’ ಸಮೀಕ್ಷಾ ವರದಿ ಹಂಚಿಕೊಂಡಿದ್ದು, “ಇದು ಬಿಜೆಪಿಯ ಹತಾಶೆಯನ್ನು ವಿವರಿಸುತ್ತದೆ” ಎಂದಿದ್ದಾರೆ.

ಸಮೀಕ್ಷೆಯಲ್ಲಿ ಏನಿದೆ?

2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಸ್ಪಷ್ಟವಾದ ಬಹುಮತ ಲಭ್ಯವಾಗಲಿದೆ ಎಂದು ಈದಿನ.ಕಾಮ್‌ನ ಸಮೀಕ್ಷೆಯ ಅಂಕಿ-ಅಂಶಗಳು ತಿಳಿಸುತ್ತಿವೆ. ಇನ್ನೊಂದು ಆಪರೇಷನ್‌ ಕಮಲದ ಸಾಧ್ಯತೆಯನ್ನೂ ಇಲ್ಲವಾಗಿಸುವ ಹಾಗೆ 113ಅನ್ನು ಕಾಂಗ್ರೆಸ್‌ ಸಲೀಸಾಗಿ ದಾಟಲಿದೆ ಎಂದು ತೋರುತ್ತಿದೆ.

ಈ ಹಿಂದೆ 2013 ಮತ್ತು 1999ರಲ್ಲಿ ರಾಜ್ಯ ವಿಧಾನಸಭೆಯಲ್ಲಿ ಇಂತಹ ಬಹುಮತವಿತ್ತು. ಈ ಬಾರಿ, ಅವೆರಡನ್ನೂ ದಾಟಲಿದ್ದು, 1989ರ ನಂತರ ಮೂರು ದಶಕಗಳಲ್ಲಿ ಇದೇ ಅತಿ ದೊಡ್ಡ ಸಾಧನೆಯಾಗಬಹುದು ಎಂದು ಸಮೀಕ್ಷೆಯ ಅಂಕಿಅಂಶಗಳು ಹೇಳುತ್ತಿವೆ.

ಬಿಜೆಪಿಯ ಮಟ್ಟಿಗೆ ಹೇಳುವುದಾದರೆ, 2013ರಲ್ಲಿ ಆ ಪಕ್ಷ ಒಡೆದು ಹೋಗಿದ್ದಾಗ ಉದ್ಭವವಾಗಿದ್ದ ಅತ್ಯಂತ ಕೆಟ್ಟ ಪರಿಸ್ಥಿತಿಯನ್ನು ಹೊರತುಪಡಿಸಿದರೆ, ಇದು ಅದರ ಅತ್ಯಂತ ಹೀನಾಯ ಸ್ಥಿತಿಯಾಗಿರಲಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾತಿಗಣತಿ ಪ್ರಶ್ನಿಸುವ ಪೇಜಾವರ ಸ್ವಾಮಿ, ಶೇ.10ರ ಮೇಲ್ಜಾತಿ ಮೀಸಲಾತಿ ನಿರಾಕರಿಸುತ್ತಾರ?

ಪೇಜಾವರ ಸ್ವಾಮಿಗಳು ಮಾಧ್ವರು, ಮೇಲ್ಜಾತಿಗೆ ಸೇರಿದವರು. ಅವರು ಜಾತಿ ಗಣತಿ ಏಕೆ...

ಯೋಗೇಶ್ವರ್ ಬಿಜೆಪಿ ಬಿಟ್ಟಿದ್ದು ಆಶ್ಚರ್ಯವಿಲ್ಲ, ಕಾಂಗ್ರೆಸ್‌ಗೆ ಕುಮಾರಣ್ಣನೇ ಟಾರ್ಗೆಟ್: ನಿಖಿಲ್ ಕುಮಾರಸ್ವಾಮಿ

ಬಿಜೆಪಿಗೆ ಸಿ ಪಿ ಯೋಗೇಶ್ವರ್ ರಾಜೀನಾಮೆ ಕೊಟ್ಟಿರುವುದು ಆಶ್ಚರ್ಯ ಪಡುವಂತದ್ದು ಏನೂ...

ಯಾವುದೇ ಷರತ್ತಿಲ್ಲದೆ ರಾಜಕೀಯ ಪ್ರಾರಂಭ ಮಾಡಿದ್ದ ಪಕ್ಷಕ್ಕೆ ಸೇರ್ಪಡೆಯಾಗಿದ್ದೇನೆ: ಸಿ ಪಿ ಯೋಗೇಶ್ವರ್

"ಯಾವುದೇ ಷರತ್ತಿಲ್ಲದೆ ರಾಜಕೀಯ ಜೀವನ ಪ್ರಾರಂಭ ಮಾಡಿದ್ದ ಪಕ್ಷಕ್ಕೆ ಸೇರ್ಪಡೆಯಾಗಿದ್ದೇನೆ. ಕಾಂಗ್ರೆಸ್...