ಕನ್ನಡ ದ್ರೋಹಿ ಬಿಜೆಪಿ ಸರ್ಕಾರಕ್ಕೆ ಕನ್ನಡಿಗರು ತೆರಿಗೆ ಕಟ್ಟಲ್ಲ ಅಂದರೆ ಏನು ಮಾಡ್ತೀರಿ: ಪ್ರಕಾಶ್ ರಾಥೋಡ್ ಪ್ರಶ್ನೆ

Date:

  • ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಹೇಳಿಕೆ ಖಂಡಿಸಿದ ಪ್ರಕಾಶ್ ರಾಥೋಡ್
  • ಒಕ್ಕೂಟ ತತ್ವದ ಕಾರಣದಿಂದ ಈ ಕ್ಷಣಕ್ಕೂ ಕರ್ನಾಟಕ ವಜ್ರದಷ್ಟು ಗಟ್ಟಿಯಾಗಿದೆ

ಕರ್ನಾಟಕದಲ್ಲಿ ಬಿಜೆಪಿಯೇತರ ಸರ್ಕಾರ ಇದ್ದರೆ ನೀವು ಕನ್ನಡಿಗರ ತೆರಿಗೆ ಹಣ ಸ್ವೀಕರಿಸುವುದಿಲ್ಲವೇ? ಕನ್ನಡಿಗರು ಕನ್ನಡ ದ್ರೋಹಿಯಾದ ಬಿಜೆಪಿ ಸರ್ಕಾರಕ್ಕೆ ತೆರಿಗೆ ಹಣ ನೀಡುವುದಿಲ್ಲ ಎಂದು ಹಠಕ್ಕೆ ಬಿದ್ದರೆ ಅದರ ಪರಿಣಾಮ ಏನಾಗಬಹುದು ಎನ್ನುವ ಕಲ್ಪನೆ ನಿಮಗೆ ಇದೆಯೇ? ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಪ್ರಕಾಶ್ ರಾಥೋಡ್ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ವಿರುದ್ಧ ಕಿಡಿಕಾರಿದ್ದಾರೆ.

- Advertisement -

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, “ಚುನಾವಣಾ ಪ್ರಚಾರಕ್ಕೆಂದು ರಾಜ್ಯಕ್ಕೆ ಬಂದಿದ್ದ ಸಂದರ್ಭದಲ್ಲಿ, `ಕೇಂದ್ರದಿಂದ ಪ್ರಧಾನಿ ಮೋದಿ ಕಳುಹಿಸುವ ಹಣ ಪಡೆಯಲು ಕರ್ನಾಟಕದಲ್ಲಿ ಬಿಜೆಪಿ ಅಧಿಕಾರದಲ್ಲಿ ಇರಬೇಕು’ ಎಂದು ಹೇಳಿದ್ದೀರಿ. ಇದು ಭಾರತದ ಒಕ್ಕೂಟ ತತ್ವಕ್ಕೆ ವಿರುದ್ಧವಾದ ಅಹಂಕಾರದ ಮಾತಾಗಿದೆ” ಎಂದು ವಾಗ್ದಾಳಿ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

“ನಿಮ್ಮದು ಒಕ್ಕೂಟ ಸರ್ಕಾರ ಎನ್ನುವುದನ್ನು ಮರೆತು ಕನ್ನಡಿಗರಿಗೆ ಧಮ್ಕಿ ಹಾಕುವ ರೀತಿಯಲ್ಲಿ ಮಾತನಾಡಿದ್ದೀರಿ. ಕರ್ನಾಟಕದಲ್ಲಿ ಬಿಜೆಪಿಯೇತರ ಸರ್ಕಾರ ಇದ್ದರೆ ಕೇಂದ್ರದಿಂದ ಹಣ ಬರುವುದಿಲ್ಲ ಎನ್ನುವ ಅರ್ಥದಲ್ಲಿ ನಿಮ್ಮ ಮಾತು ಧ್ವನಿಸುತ್ತಿದೆ” ಎಂದು ಪ್ರಕಾಶ್ ರಾಥೋಡ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಭಾರತದ ಅಡಿಪಾಯ ಒಕ್ಕೂಟ ತತ್ವದ ಕಾರಣದಿಂದ ಈ ಕ್ಷಣಕ್ಕೂ ವಜ್ರದಷ್ಟು ಗಟ್ಟಿಯಾಗಿದೆ. ಇದನ್ನು ದುರ್ಬಲಗೊಳಿಸುವ ಪ್ರಯತ್ನ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ದಿನದಿಂದಲೂ ನಡೆಯುತ್ತಿದೆ. ಕರ್ನಾಟಕದ ಬ್ಯಾಂಕ್‌ಗಳನ್ನು ನುಂಗಿದಿರಿ. ಅದೇ ರೀತಿ ಕನ್ನಡಿಗರ ಪಾಲಿನ ಉದ್ಯೋಗದ ಅವಕಾಶಗಳು ಮತ್ತು ಬದುಕಿನ ಅವಕಾಶಗಳನ್ನು ನಿರಂತರವಾಗಿ ಕಿತ್ತುಕೊಳ್ಳುತ್ತಲೇ ಇದ್ದೀರಿ. ಈಗ ಕನ್ನಡದ ಮಕ್ಕಳು ಕುಡಿಯುವ ನಂದಿನಿ ಹಾಲಿನ ಮೇಲೂ ನಿಮ್ಮ ಕಣ್ಣು ಬಿದ್ದಿದೆ. ಇವೆಲ್ಲದರ ಆಚೆಗೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದರೆ ಮಾತ್ರ ಕೇಂದ್ರದ ಅನುದಾನ ಎನ್ನುವ ಅರ್ಥದಲ್ಲಿ ಮಾತನಾಡಿ ಬೆದರಿಕೆ ಹಾಕಿರುವುದನ್ನು ಕನ್ನಡಿಗರು ಎಂದಿಗೂ ಸಹಿಸುವುದಿಲ್ಲ” ಎಂದು ಎಚ್ಚರಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಡಿಕೆಶಿ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಅರ್ಜಿ ವಜಾ ಮಾಡಿದ ಹೈಕೋರ್ಟ್

“ನಿಮ್ಮ ಬಿಜೆಪಿಗೆ ಇರುವುದು ನೆನ್ನೆ ಮೊನ್ನೆಯ ಇತಿಹಾಸ. ಕನ್ನಡ ಸಂಸ್ಕೃತಿ ಮತ್ತು ಕನ್ನಡತನ ಹಾಗೂ ಕನ್ನಡ ನೆಲಕ್ಕೆ ಸಾವಿರಾರು ವರ್ಷಗಳ ಇತಿಹಾಸ, ಚರಿತ್ರೆ ಇದೆ. ಇದನ್ನು ಕೆಣಕುವ ಪ್ರಯತ್ನ ಮಾಡಬೇಡಿ. ನೀವು ಹಿಮಾಚಲ ಪ್ರದೇಶದಿಂದ ಬಂದು ಕನ್ನಡಿಗರ ಸಹನೆ ಮತ್ತು ಸ್ವಾಭಿಮಾನ ಕೆಣಕಬಾರದು. ನಿಮ್ಮ ರಾಜ್ಯದಲ್ಲೇ ನೀವು ನಿಮ್ಮ ಬಿಜೆಪಿಯನ್ನು ರಕ್ಷಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಇನ್ನು ಕರ್ನಾಟಕಕ್ಕೆ ಬಂದು ಈಗಾಗಲೇ ತುರ್ತುನಿಗಾ ಘಟಕದಲ್ಲಿ ಏದುಸಿರು ಬಿಡುತ್ತಿರುವ ಬಿಜೆಪಿಯ ಕುತ್ತಿಗೆ ಹಿಚುಕಬೇಡಿ” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2027ರ ಚುನಾವಣೆ | ಬಿಜೆಪಿಯ ಲೂಟಿ ವಿರುದ್ಧ ಕಾಂಗ್ರೆಸ್ ಸಮರ: ‘ಸೇವ್ ಗೋವಾ’ ಅಭಿಯಾನದಲ್ಲಿ ರಾಹುಲ್ ಸಾಥ್

2027ರ ಗೋವಾ ವಿಧಾನಸಭೆ ಚುನಾವಣೆಗೆ ಭರ್ಜರಿ ತಳಹದಿ ನಿರ್ಮಿಸಲು ಮುಂದಾಗಿರುವ ಕಾಂಗ್ರೆಸ್,...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್ ಸಾಹೇಬ್’

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ...

ಪ್ರಜಾಪ್ರಭುತ್ವದ ಗಟ್ಟಿತನವಿರುವುದು ಪ್ರಜೆಗಳಿಗೆ ಸರ್ಕಾರವನ್ನು ಪ್ರಶ್ನಿಸುವ ಸ್ವಾತಂತ್ರ್ಯ ಇರುವಲ್ಲಿ: ಸಿಎಂ ಡಿ.ಕೆ ಶಿವಕುಮಾರ್

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರದ ಹೊಣೆಗಾರಿಕೆಯೇ ಬುನಾದಿಯಾಗಿದೆ. ಎಲ್ಲರೂ ಸರ್ಕಾರಕ್ಕೆ ಕುರುಡಾಗಿ ತಲೆಬಾಗುವುದೇ...