ಮೋದಿ ಬೆನ್ನಲ್ಲೇ ಬೆಂಗಳೂರಿನಲ್ಲಿ ಪ್ರಿಯಾಂಕಾ ಗಾಂಧಿ ಭರ್ಜರಿ ರೋಡ್‌ ಶೋ

ಪ್ರಿಯಾಂಕಾ ಗಾಂಧಿ

ಮತದಾನಕ್ಕೆ ಮೂರು ದಿನ ಬಾಕಿ ಇದ್ದು, ಮತದಾರರನ್ನು ಸೆಳೆಯಲು ಕಾಂಗ್ರೆಸ್‌ ಕೂಡ ಬೆಂಗಳೂರಿನಲ್ಲಿ ಭರ್ಜರಿ ರೋಡ್‌ ಶೋಗೆ ಮುಂದಾಗಿದೆ.

ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರ ಎರಡನೇ ದಿನದ ರೋಡ್‌ ಶೋ ಮುಕ್ತಾಯವಾದ ಬೆನ್ನಲ್ಲೇ ಕಾಂಗ್ರೆಸ್‌ ರಾಷ್ಟ್ರೀಯ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಇಂದು ಸಂಜೆ ಮಹದೇವಪುರ ವಿಧಾನಸಭಾ ಕ್ಷೇತ್ರದಿಂದ ಭರ್ಜರಿ ರೋಡ್‌ ಶೋ ಆರಂಭಿಸಿದ್ದಾರೆ.

ರಾಹುಲ್ ಗಾಂಧಿ ಕೂಡ ರೋಡ್ ಶೋನಲ್ಲಿ ಭಾಗಿಯಾಗಲಿದ್ದು, ರಾತ್ರಿ 10 ಗಂಟೆಯವರೆಗೆ ಹಳೆ ವಿಮಾನ ರಸ್ತೆ, ಸುರಂಜನ್ ದಾಸ್ ರಸ್ತೆ, ಮಹದೇವಪುರ ಮುಖ್ಯರಸ್ತೆ, ಮಾರತ್ ಹಳ್ಳಿ ಮುಖ್ಯರಸ್ತೆ, ವರ್ತೂರು ಕೋಡಿ ರಸ್ತೆಯಲ್ಲಿ ರೋಡ್ ಶೋ ನಡೆಯಲಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಹಾಗೆಯೇ ರಸಲ್ ಮಾರ್ಕೆಟ್ ಸ್ಕ್ವೇರ್, ಶಿವಾಜಿನಗರ, ಪೆರಿಯಾರ್ ವೃತ್ತ, ಟ್ಯಾನರಿ ರಸ್ತೆಯಲ್ಲಿ ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ರೋಡ್ ಶೋ ನಡೆಸಲಿದ್ದಾರೆ.

ರೋಡ್ ಶೋ ಸಾಗುವ ಮಾರ್ಗದುದ್ದಕ್ಕೂ ರಸ್ತೆಯ ಇಕ್ಕೆಲಗಳಲ್ಲಿ ಸಾವಿರಾರು ಮಂದಿ ಕಾರ್ಯಕರ್ತರು ಕಾಂಗ್ರೆಸ್ ಬಾವುಟ ಹಿಡಿದು ನಿಂತಿದ್ದಾರೆ. ಪ್ರಿಯಾಂಕಾ ಗಾಂಧಿ ಅವರು ತೆರೆದ ವಾಹನದಲ್ಲಿ ಸಾಗಿ ಬರುತ್ತಿದ್ದಾರೆ. ರಸ್ತೆಯಲ್ಲಿ ಸೇರಿರುವ ಜನರು ಹೂ ಎರಚಿ ಸಂಭ್ರಮಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here