ಮಂಗಳವಾರ ಮೈಸೂರು ಭಾಗದಲ್ಲಿ ಪ್ರಿಯಾಂಕಾ ಗಾಂಧಿ ಮೋಡಿ : ಕೈ ಅಭ್ಯರ್ಥಿಗಳ ಪರ ಪ್ರಚಾರ

Date:

  • ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಿಯಾಂಕಾ ಗಾಂಧಿ ರೋಡ್ ಶೋ
  • ಮೈಸೂರು ಭಾಗದಲ್ಲಿ ಬಿಜೆಪಿ-ಕಾಂಗ್ರೆಸ್ ಪ್ರಚಾರ ಪೈಪೋಟಿ

ಹಳೆ ಮೈಸೂರು ಭಾಗದ ರಾಜಕೀಯ ಅಖಾಡ ರಂಗೇರಿದ್ದು,ಮಂಗಳವಾರ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಇಲ್ಲಿ ಪ್ರಚಾರ ನಡೆಸಲಿದ್ದಾರೆ.

ಇದರೊಂದಿಗೆ ಮೈಸೂರು ಪ್ರಾಂತ್ಯ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ- ಕಾಂಗ್ರೆಸ್ ನಡುವಿನ ಪ್ರಚಾರ ಪೈಪೋಟಿಯ ಕಣವಾಗಿ ಮಾರ್ಪಟ್ಟಿದೆ.

ಏಪ್ರಿಲ್ 24ರಂದು ಬಿಜೆಪಿ ವರಿಷ್ಠ ಅಮಿತ್ ಶಾ ಈ ಭಾಗದಲ್ಲಿ ಪ್ರಚಾರ ನಡೆಸಿ ತೆರಳಿದರೆ, ಏಪ್ರಿಲ್ 25ರಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಇಲ್ಲಿ ಪ್ರಚಾರ ಕೈಗೊಳ್ಳಲಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ರಾಜಕೀಯ ಲೋಕದ ಸ್ಟಾರ್ ನಾಯಕರುಗಳ ಪ್ರಚಾರಕ್ಕೆ ಸಾಕ್ಷಿಯಾಗಿರುವ ಈ ಭಾಗದಲ್ಲಿ ಕಾರ್ಯಕರ್ತರ ಹುಮ್ಮಸ್ಸು ಮುಗಿಲು ಮುಟ್ಟಿದೆ. ಏಪ್ರಿಲ್ 25ರಂದು ರಾಜ್ಯಕ್ಕೆ ಬರಲಿರುವ ಪ್ರಿಯಾಂಕಾ ಗಾಂಧಿ, ಅಂದು ಭಾಗವಹಿಸುವ ಕಾರ್ಯಕ್ರಮ ಪಟ್ಟಿ ಹೀಗಿದೆ.

25 ಏಪ್ರಿಲ್ 2023
ಮಧ್ಯಾಹ್ನ 12:00 – ಟಿ ನರಸೀಪುರ – ಯಾಳವಾರ ಹುಂಡಿಯಲ್ಲಿ ಸಾರ್ವಜನಿಕ ಸಭೆ


• 3.00 PM- ಹನೂರಿನಲ್ಲಿ ಮಹಿಳಾ ಸಂವಾದ – ಗೌರಿಶಂಕರ್ ಕನ್ವೆನ್ಷನ್ ಹಾಲ್ ಹತ್ತಿರ, ಹನೂರು ಟೌನ್


• 5:30 PM – ಕೃಷ್ಣರಾಜನಗರದಲ್ಲಿ ರೋಡ್ ಶೋ – ಅಂಬೇಡ್ಕರ್ ಪ್ರತಿಮೆಯ ವೃತ್ತದ ಮೂಲಕ ಪುರಸಭೆ ಕಚೇರಿ ತೋಪಮ್ಮ ದೇವಸ್ಥಾನ.

ಮಂಗಳವಾರ ಮಧ್ಯಾಹ್ನ 12ಕ್ಕೆ ಟಿ ನರಸೀಪುರ – ಯಾಳವಾರ ಹುಂಡಿಯಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಹಾಗೆಯೇ ಮಧ್ಯಾಹ್ನ 3 ಗಂಟೆಗೆ ಹನೂರು ಟೌನ್‌ನ ಗೌರಿಶಂಕರ್ ಕನ್ವೆನ್ಷನ್ ಹಾಲ್ ಹತ್ತಿರ ಪ್ರಿಯಾಂಕಾ ಗಾಂಧಿ ಮಹಿಳೆಯರೊಂದಿಗೆ ಸಂವಾದ ನಡೆಸಲಿದ್ದಾರೆ.

ಸಂಜೆ 5ಕ್ಕೆ ಕೆ ಆರ್ ನಗರಕ್ಕೆ ಬರಲಿರುವ ಅವರು ಅಲ್ಲಿನ ರೋಡ್ ಶೋನಲ್ಲಿ ಭಾಗವಹಿಸಲಿದ್ದಾರೆ. ಇದಾದ ಬಳಿಕ ಅವರು ಬೆಂಗಳೂರಿಗೆ ವಾಪಸಾಗಲಿದ್ದಾರೆ.

ಈ ಸುದ್ದಿ ಓದಿದ್ದೀರಾ? :ಮೈಸೂರು ಭಾಗದಲ್ಲಿ ಪ್ರಚಾರಕ್ಕೆ ಸಿದ್ಧವಾದ ಬಿಜೆಪಿ : ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಅಮಿತ್ ಶಾ

ಈ ಎಲ್ಲ ಕಾರ್ಯಕ್ರಮಗಳಿಗಾಗಿನ ಅಗತ್ಯ ಸಿದ್ಧತೆಯನ್ನು ರಾಜ್ಯ ಕಾಂಗ್ರೆಸ್‌ ಮಾಡಿಕೊಂಡು ನಾಯಕಿಯ ಸ್ವಾಗತಕ್ಕಾಗಿ ಕಾದು ನಿಂತಿದೆ. ಪ್ರಿಯಾಂಕಾ ಪ್ರಚಾರದ ವೇಳೆ ಕಾಂಗ್ರೆಸ್‌ ರಾಜ್ಯ ಪ್ರಮುಖರು ಅವರೊಂದಿಗಿರಲಿದ್ದಾರೆ.

ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಪ್ರಿಯಾಂಕಾ ಗಾಂಧಿ ಪೂರ್ಣ ಪ್ರಮಾಣದಲ್ಲಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳುತ್ತಿರುವುದು ಪಕ್ಷದ ಕಾರ್ಯಕರ್ತರಲ್ಲಿ ಹಬ್ಬದ ವಾತಾವರಣವನ್ನು ಹುಟ್ಟುಹಾಕಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲ್ಯಾಣ ಕರ್ನಾಟಕದಲ್ಲಿ ಬೃಹತ್ ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರ ಸ್ಥಾಪಿಸಿ : ಸಚಿವ ಈಶ್ವರ ಖಂಡ್ರೆ

ಕಲ್ಯಾಣ ಕರ್ನಾಟಕ ಭಾಗ ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ತೀವ್ರ ಹಿಂದುಳಿದಿದ್ದು, ಈ...

ದೇವದಾರಿ ಉಕ್ಕು ಗಣಿಗಾರಿಕೆ | ಆರು ವರ್ಷಗಳ ಹಿಂದೆ ವಿರೋಧ – ಇಂದು ಒಪ್ಪಿಗೆ; ಇದು ಕೇಂದ್ರ ಸಚಿವ ಎಚ್‌ಡಿಕೆ ವರಸೆ!

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸಂಸದರಾಗಿ ಆಯ್ಕೆಯಾಗಿದ್ದು, ಮೋದಿ ನೇತೃತ್ವದ ಎನ್‌ಡಿಎ...

ಪೋಕ್ಸೋ ಪ್ರಕರಣ | ಬಿಎಸ್‌ವೈ ಬಂಧಿಸದಂತೆ ಹೈಕೋರ್ಟ್‌ ಮಧ್ಯಂತರ ಆದೇಶ

ಪೋಕ್ಸೊ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು...

ಬಿಎಸ್‌ವೈ ಪೋಕ್ಸೊ | ಕಾನೂನು ರಕ್ಷಕರಿಂದಲೇ ಕಾನೂನು ಉಲ್ಲಂಘನೆ: ವಕೀಲ ಎಸ್‌ ಬಾಲನ್ ಆರೋಪ

"ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ವಿರುದ್ಧ ಗಂಭೀರವಾಗಿರುವ ಪೋಕ್ಸೊ ಪ್ರಕರಣ...