ಬಹಿರಂಗ ಪ್ರಚಾರಕ್ಕಿಂದು ತೆರೆ |ಪ್ರಿಯಾಂಕಾ, ರಾಹುಲ್, ಶಿವಣ್ಣ, ಸುದೀಪ್ ಕೊನೆಗಳಿಗೆಯ ಪ್ರಚಾರ

Date:

Advertisements
  • ಗೋವಿಂದ ರಾಜನಗರದಲ್ಲಿ ಪ್ರಿಯಾಕೃಷ್ಣ ಪರ ಪ್ರಿಯಾಂಕಾ ಗಾಂಧಿ ಪ್ರಚಾರ
  • ರಾಜ್ಯದ ಹಲವೆಡೆ ಪಕ್ಷಗಳ ಪರ ಸ್ಟಾರ್ ಪ್ರಚಾರಕರಿಂದ ಭರ್ಜರಿ ಕ್ಯಾಂಪೇನ್

ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೆರಡೇ ದಿನ ಬಾಕಿ ಉಳಿದಿದೆ. ಇದರ ಜೊತೆ ಜೊತೆಗೆ ಇಂದು (ಮೇ8) ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರಕ್ಕೂ ತೆರೆ ಬೀಳಲಿದೆ.

ಈ ಹಿನ್ನೆಲೆಯಲ್ಲಿ ಎಲ್ಲ ರಾಜಕೀಯ ಪಕ್ಷಗಳ ಮುಖಂಡರು ತಮ್ಮ ತಮ್ಮ ಪಕ್ಷದ ಅಭ್ಯರ್ಥಿಗಳ ಬಿರುಸಿನ ಪ್ರಚಾರ ನಡೆಸಲಿದ್ದಾರೆ.

ಕಾಂಗ್ರೆಸ್ ವರಿಷ್ಠ ನಾಯಕರಾದ ಪ್ರಿಯಾಂಕಾ ಗಾಂಧಿ ಹಾಗೂ ರಾಹುಲ್ ಗಾಂಧಿ ಇಂದು ಬೆಂಗಳೂರಿನಲ್ಲಿ ಮತದಾರರನ್ನು ಭೇಟಿ ಮಾಡಲಿದ್ದಾರೆ. ಮೊದಲಿಗೆ ಬೆಂಗಳೂರಿನ ವಿಜಯನಗರದಲ್ಲಿ ರೋಡ್ ಶೋ ನಡೆಸಲಿರುವ ಪ್ರಿಯಾಂಕಾ ಹಾಗೂ ರಾಹುಲ್ ಗಾಂಧಿ ಪ್ರಿಯಾಕೃಷ್ಣ ಪರ ಮತಯಾಚಿಸಲಿದ್ದಾರೆ.

Advertisements

ಮಧ್ಯಾಹ್ನ 12ಕ್ಕೆ ಆರಂಭವಾಗಲಿರುವ ರೋಡ್ ಶೋ ಜಿಟಿ ಮಾಲ್ ನಿಂದ ಆರಂಭಗೊಂಡು ಪೈಪ್ ಲೇನ್ ರಸ್ತೆವರೆಗೆ ಹಲವು ಮಾರ್ಗಗಳಲ್ಲಿ ಸಂಚರಿಸಲಿದೆ. ಇದಾದ ಬಳಿಕ ಚಿಕ್ಕಪೇಟೆಯಲ್ಲೂ ಪ್ರಿಯಾಂಕಾಗಾಂಧಿ ರೋಡ್ ಶೋ ನಡೆಸಲಿದ್ದಾರೆ.

ಇನ್ನು ಬಿಜೆಪಿ ಪರ ನಟ ಸುದೀಪ್ ಮತದಾರರ ಮನವೊಲಿಸಲಿದ್ದಾರೆ. ಇಂದು ಶಿಕಾರಿಪುರ ಅಭ್ಯರ್ಥಿ ಬಿ ವೈ ವಿಜಯೇಂದ್ರ ಪರ ಮತಯಾಚನೆಗೆ ಕೈ ಜೋಡಿಸಲಿರುವ ಸುದೀಪ್ ಗೆ ನಟಿ, ಮಾಜಿ ವಿಧಾನಪರಿಷತ್ ಸದಸ್ಯೆ ತಾರಾನುರಾಧ ಜೊತೆಯಾಗಲಿದ್ದಾರೆ.

ಗಾಂಧಿನಗರದ ಕಾಂಗ್ರೆಸ್‌ ಅಭ್ಯರ್ಥಿ ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಪರ ನಟ ಶಿವರಾಜ್‌ ಕುಮಾರ್‌ ಪ್ರಚಾರ ನಡೆಸಲಿದ್ದಾರೆ.

ಈ ಸುದ್ದಿ ಓದಿದ್ದೀರಾ?:ಮೋದಿ ಬೆನ್ನಲ್ಲೇ ಬೆಂಗಳೂರಿನಲ್ಲಿ ಪ್ರಿಯಾಂಕಾ ಗಾಂಧಿ ಭರ್ಜರಿ ರೋಡ್‌…

ಉಳಿದಂತೆ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಉಡುಪಿಯಲ್ಲಿ, ಶಿಗ್ಗಾಂವ್‌ನಲ್ಲಿ ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಕುಮಾರಸ್ವಾಮಿ ಚನ್ನಪಟ್ಟಣ ಹಾಗೂ ರಾಮನಗರದಲ್ಲಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ವಕ್ಷೇತ್ರ ವರುಣಾದಲ್ಲೂ ಮತಬೇಟೆ ನಡೆಸಲಿದ್ದಾರೆ.

ಮೇ 10ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಇಂದು ಸಂಜೆ 6ಕ್ಕೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಬಳಿಕ ನಾಳಿನಿಂದ ಅಭ್ಯರ್ಥಿಗಳು ಮನೆಮನೆಗೆ ತೆರಳಿ ಪ್ರಚಾರ ಕಾರ್ಯ ನಡೆಸಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಚಳ್ಳಕೆರೆ ನಗರದಲ್ಲಿ ರಸ್ತೆ ಗುಂಡಿಗಳ ಪೂಜೆ; ಕರ್ನಾಟಕ ರಾಷ್ಟ್ರ ಸಮಿತಿಯಿಂದ ವಿನೂತನ ಪ್ರತಿಭಟನೆ

ಚಳ್ಳಕೆರೆ ನಗರದ ಬಹುತೇಕ ವಾರ್ಡುಗಳಲ್ಲಿ ಹಾಗೂ ಮುಖ್ಯ ರಸ್ತೆಗಳಲ್ಲಿ, ಅಲ್ಲದೆ ತಾಲೂಕಿನ...

ವಿಧಾನಸಭೆಯ ಮುಂಗಾರು ಅಧಿವೇಶನ ಮುಕ್ತಾಯ: ಒಟ್ಟು 39 ವಿಧೇಯಕ ಅಂಗೀಕಾರ

ಕಳೆದ ಆಗಸ್ಟ್ 11ರಿಂದ ಆರಂಭಗೊಂಡಿದ್ದ 16ನೇ ವಿಧಾನಸಭೆಯ ಮುಂಗಾರು ಅಧಿವೇಶನವು ಇಂದು(ಆ.22)...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X