ಪ್ರಚೋದನಕಾರಿ ಭಾಷಣ : ನಟಿ ಶೃತಿ ವಿರುದ್ಧ ಪ್ರಕರಣ ದಾಖಲು

Date:

  • ಬಿಜೆಪಿ ಮಹಿಳಾ ಸಮಾವೇಶದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದ ಶೃತಿ
  • ಹಿರಿಯ ನಟಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದ ಜೆಡಿಎಸ್‌

ಪ್ರಚೋದನಕಾರಿ ಭಾಷಣ ಮಾಡಿದ ಆರೋಪ ಎದುರಿಸುತ್ತಿರುವ ಸ್ಯಾಂಡಲ್‌ವುಡ್‌ನ ಹಿರಿಯ ನಟಿ, ಬಿಜೆಪಿ ವಕ್ತಾರೆ ಶೃತಿ ವಿರುದ್ಧ ಹಿರೇಕೆರೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

ಇತ್ತೀಚೆಗೆ ಹಿರೇಕೆರೂರಿನಲ್ಲಿ ನಡೆದ ಬಿಜೆಪಿ ಮಹಿಳಾ ಮೋರ್ಚಾ ಸಮಾವೇಶದಲ್ಲಿ ಶೃತಿ ಭಾಗಿಯಾಗಿದ್ದರು. ಹಿರೇಕೆರೂರು ಕ್ಷೇತ್ರದ ಹಾಲಿ ಶಾಸಕ, ಕೃಷಿ ಸಚಿವ ಬಿ.ಸಿ ಪಾಟೀಲ್‌ ಪರವಾಗಿ ರೋಡ್‌ ಶೋ ನಡೆಸಿ ಚುನಾವಣಾ ಪ್ರಚಾರವನ್ನು ಕೂಡ ಮಾಡಿದ್ದರು. ಸಮಾವೇಶದಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ್ದ ಶೃತಿ, “ನಿಮ್ಮ ವಂಶವನ್ನು ಬಿಟ್ಟು ಬೇರೆಯವರ ವಂಶ ಅಭಿವೃದ್ಧಿ ಆಗಬೇಕೆಂದರೆ ಜೆಡಿಎಸ್‌ಗೆ ಮತ ಹಾಕಿ. ನಿಮ್ಮ ವಂಶ ಬಿಟ್ಟು ಹೊರದೇಶದ ವಂಶ ಅಭಿವೃದ್ಧಿ ಆಗಬೇಕಾದರೆ ಕಾಂಗ್ರೆಸ್‌ಗೆ ಮತ ಹಾಕಿ. ಭಾರತದಲ್ಲಿ ಭಾರತೀಯರ ವಂಶ ಅಭಿವೃದ್ಧಿ ಆಗಬೇಕು ಎಂದರೆ ಬಿಜೆಪಿಗೆ ಮತ ಹಾಕಿ” ಎಂದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಶೃತಿ ಅವರ ಈ ಹೇಳಿಕೆಯನ್ನು ತೀವ್ರವಾಗಿ ವಿರೋಧಿಸಿದ್ದ ಜೆಡಿಎಸ್‌ ನಾಯಕರು ನಟಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದರು. ಸ್ಥಳೀಯ ನೋಡಲ್‌ ಅಧಿಕಾರಿ ಪಂಪಾಪತಿ ಎನ್ನುವವರು ನಟಿಯ ವಿರುದ್ಧ ಹಿರೇಕೆರೂರು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಈ ಸುದ್ದಿ ಓದಿದ್ದೀರಾ? ಬೆದರಿಕೆ ಪ್ರಕರಣ | ಮಾಧ್ಯಮಗಳ ವಿರುದ್ಧ ಪ್ರತಿಬಂಧಕಾಜ್ಞೆ ತಂದ ಸುದೀಪ್‌

ದೂರಿನನ್ವಯ, ರಾಜಕೀಯ ಪಕ್ಷಗಳ ನಡುವೆ ದ್ವೇಷ, ವೈರತ್ವ ಮತ್ತು ಭೀತಿಯನ್ನು ಉಂಟು ಮಾಡಲು ಯತ್ನಿಸಿದ ಆರೋಪದ ಮೇಲೆ ಐಪಿಸಿ ಸೆಕ್ಷನ್‌ 505(2) ಅಡಿಯಲ್ಲಿ ಪೊಲೀಸರು ನಟಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

971ebeff7523e71323fef3c7b5b2eb494a70a04dcd51867b0c522de0b1aa64b7?s=150&d=mp&r=g
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಲಯಾಳಂ ‘ಅಮ್ಮ’ ಸಂಘಟನೆಯಲ್ಲಿ ಬದಲಾವಣೆ ಗಾಳಿ: ಉಪಾಧ್ಯಕ್ಷರಾಗಿ ನಟ ಸಿಜೋಯ್ ವರ್ಗೀಸ್, ನಟಿ ಆಶಾ ಅರವಿಂದ್ ನೇಮಕ

ಸಾಲು ಸಾಲು ವಿವಾದಗಳು ಮತ್ತು ರಾಜೀನಾಮೆಗಳಿಂದ ತೀವ್ರ ಬಿಕ್ಕಟ್ಟು ಎದುರಿಸುತ್ತಿರುವ ಮಲಯಾಳಂ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು...