ʼಶುಭ ಸೋಮವಾರʼಕ್ಕೆ ಭರ್ಜರಿ ಕ್ಯೂ; ನಾಮಪತ್ರ ಸಲ್ಲಿಸಿದ ಹಲವು ನಾಯಕರು

Date:

  • ಸೋಮವಾರ ನಾಮಪತ್ರ ಸಲ್ಲಿಸಿದ ಹಲವು ನಾಯಕರು
  • ನಾಮಪತ್ರ ಸಲ್ಲಿಕೆಗೆ ಹರಿದು ಬಂದ ಅಭಿಮಾನಿ ಜನಸಾಗರ

ನಾಮಪತ್ರ ಸಲ್ಲಿಕೆಗೆ ಕಡೆಯ ಮೂರುದಿನಗಳು ಬಾಕಿ ಇರುವ ಹಿನ್ನೆಲೆಯಲ್ಲಿ ನಾಮಪತ್ರ ಸಲ್ಲಿಕೆ ಭರಾಟೆ ಜೋರಾಗಿದೆ.
‘ಶುಭ ಸೋಮವಾರ’ದ ಹೆಸರಿನಲ್ಲಿ ನಾಮಪತ್ರ ಸಲ್ಲಿಸಿರುವ ಹಲವು ನಾಯಕರು ಇಂದಿನಿಂದ ಅಧಿಕೃತ ಚುನಾವಣಾ ಪ್ರಚಾರ ಕಾರ್ಯ ಕೈಗೊಂಡಿದ್ದಾರೆ.

- Advertisement -

ಏಪ್ರಿಲ್ 17ರ ಸೋಮವಾರದಂದು ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷದ ನಾಯಕರು ಉಮೇದುವಾರಿಕೆ ಸಲ್ಲಿಸಿದರು.
ಹೊಳೆನರಸೀಪುರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಹೆಚ್.ಡಿ ರೇವಣ್ಣ ನಾಮಪತ್ರ ಸಲ್ಲಿಸಿದರು. ಈ ವೇಳೆ ಹೆಚ್.ಡಿ ರೇವಣ್ಣಗೆ ಪತ್ನಿ ಭವಾನಿ ರೇವಣ್ಣ, ಪುತ್ರ ಸೂರಜ್ ಜೊತೆಯಾದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಹಾಗೆಯೇ ಕನಕಪುರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಿಕೆ ಶಿವಕುಮಾರ್ ನಾಮಪತ್ರ ಸಲ್ಲಿಕೆ ಮಾಡಿದರು. ಬೆಂಬಲಿಗರೊಂದಿಗೆ ಬೈಕ್ ರ್ಯಾಲಿ ಮೂಲಕ ಬಂದ ಡಿಕೆಶಿ, ಈ ವೇಳೆ ತಮ್ಮ ಶಕ್ತಿ ಪ್ರದರ್ಶನ ಮಾಡಿದರು.

ಇನ್ನು ರಾಮನಗರ ಜೆಡಿಎಸ್ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಿದರು. ಇವರಿಗೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ ಜೊತೆಯಾಗಿದ್ದರು.

ಇದಕ್ಕೂ ಮುನ್ನ ರಾಮನಗರದ ಚಾಮುಂಡೇಶ್ವರಿ ದೇಗುಲದಲ್ಲಿ ಪೂಜೆ ಸಲ್ಲಿಸಿದ ನಂತರ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಿದರು.

ಇನ್ನೊಂದೆಡೆ ಮಲ್ಲೇಶ್ವರಂನಲ್ಲಿ ಸಚಿವ ಅಶ್ವತ್ಥನಾರಾಯಣ್, ಚಿಕ್ಕಮಗಳೂರಿನಲ್ಲಿ ಶಾಸಕ ಸಿಟಿ ರವಿ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದರು.

ಈ ಸುದ್ದಿ ಓದಿದ್ದೀರಾ? : ರಂಗೇರಿದ ರಾಜಕೀಯ ಅಖಾಡ: ಹೆಲಿಪ್ಯಾಡ್‌ನಲ್ಲೇ ಬಿ ಫಾರಂ ವಿತರಣೆ

ಸೊರಬದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕುಮಾರ್ ಬಂಗಾರಪ್ಪ, ಹಾಸನದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ವರೂಪ್ ಉಮೇದುವಾರಿಕೆ ಸಲ್ಲಿಸಿದರು.

ಬೆಂಗಳೂರಿನ ಗಾಂಧಿ ನಗರದ ಅಭ್ಯರ್ಥಿ ದಿನೇಶ್ ಗುಂಡೂರಾವ್, ಹೊಸಕೋಟೆಯಲ್ಲಿ ಶರತ್ ಬಚ್ಚೇಗೌಡ, ಸಕಲೇಶಪುರದ ಜೆಡಿಎಸ್‌ನ ಎಚ್ ಕೆ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜಸ್ಥಾನದ ಶಾಸಕನಾದ ಬೆಂಗಳೂರಿನ ಬಟ್ಟೆ ವ್ಯಾಪಾರಿ

ಬೆಂಗಳೂರಿನಲ್ಲಿ ವಾಸವಿರುವ ಬಟ್ಟೆ ವ್ಯಾಪಾರಿಯೊಬ್ಬರು ರಾಜಸ್ಥಾನ ರಾಜ್ಯದ ಶಾಸಕರಾಗಿ ಆಯ್ಕೆಯಾಗಿದ್ದಾರೆ. ರಾಜಾಜಿನಗರದಲ್ಲಿ ವಾಸವಿರುವ...

ಮಿಜೋರಾಂ ಮತ ಎಣಿಕೆ: ಬಹುಮತದತ್ತ ಝೆಡ್‌ಪಿಎಂ

ಈಶಾನ್ಯ ರಾಜ್ಯ ಮಿಜೋರಾಂ ವಿಧಾನಸಭಾ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು, ಒಟ್ಟು...

ಮಧ್ಯಪ್ರದೇಶ ಚುನಾವಣೆ | ಆಡಳಿತ ವಿರೋಧಿ ಅಲೆಯ ನಡುವೆಯೂ ಬಿಜೆಪಿ ಜಯಭೇರಿ

ಮಧ್ಯಪ್ರದೇಶದಲ್ಲಿ ಬಿಜೆಪಿ ಉಗ್ರ ಹಿಂದುತ್ವ ಪ್ರತಿಪಾದಿಸಿದರೆ, ಕಾಂಗ್ರೆಸ್‌ನ ಕಮಲನಾಥ್ ಸಾಫ್ಟ್ ಹಿಂದುತ್ವದ...

ಛತ್ತೀಸ್‌ಗಡ: ಹಗರಣಗಳ ಆರೋಪಕ್ಕೆ ಸಿಲುಕಿ ಅಧಿಕಾರ ಕಳೆದುಕೊಂಡ ಕಾಂಗ್ರೆಸ್

ಛತ್ತೀಸ್‌ಗಢ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿ ರಾಜ್ಯದಲ್ಲಿ ಮತ್ತೆ ಅಧಿಕಾರ...