ಚುನಾವಣೆ 2023| ಬಸವಣ್ಣನವರ ಪರಿಕಲ್ಪನೆಯ ಪ್ರಜಾಪ್ರಭುತ್ವದ ಮೇಲೆ ಸಂಘ ಪರಿವಾರ ಆಕ್ರಮಣ ನಡೆಸುತ್ತಿದೆ: ರಾಹುಲ್ ಗಾಂಧಿ

Date:

ಬೀದರ್ ಬಸವಣ್ಣನವರ ಕರ್ಮಭೂಮಿ. ಭಾರತದಲ್ಲೇ ಮೊದಲ ಬಾರಿಗೆ ಪ್ರಜಾಪ್ರಭುತ್ವದ ಪರಿಕಲ್ಪನೆ ಮೂಡಿಸಿ ಮಾರ್ಗದರ್ಶನ ತೋರಿದ್ದು ಬಸವಣ್ಣನವರು. ಆದರೆ, ಇಂದು ಆರ್‌ಎಸ್‌ಎಸ್ ಮತ್ತು ಬಿಜೆಪಿಯವರು ಪ್ರಜಾಪ್ರಭುತ್ವದ ಮೇಲೆ ಆಕ್ರಮಣ ನಡೆಸಿ ಬಸವಣ್ಣನವರ ಸಹಬಾಳ್ವೆ, ಸಮಾನತೆ ಮತ್ತು ಸಮಸಮಾಜದ ವಿಚಾರಧಾರೆ ವಿರುದ್ಧ ಆಕ್ರಮಣ ನಡೆಸುತ್ತಿರುವುದು ದುಃಖಕರ ಸಂಗತಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಷಾದ ವ್ಯಕ್ತಪಡಿಸಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ, ಭಾಲ್ಕಿ ಶಾಸಕ ಈಶ್ವರ ಖಂಡ್ರೆ ಅವರ ನಾಮಪತ್ರ ಸಲ್ಲಿಕೆಗೆ ಮುನ್ನ ಬೀದರ್‌ ಜಿಲ್ಲೆ ಭಾಲ್ಕಿಯಲ್ಲಿ ಆಯೋಜಿಸಿದ್ದ ಜನಕ್ರಾಂತಿ ಸಮಾವೇಶದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಅವರು ಮಾತನಾಡಿದರು.

“ಬಿಜೆಪಿಯವರು ಭಾರತದಲ್ಲಿ ಕೋಮು ಗಲಭೆ, ಹಿಂಸೆ ಸೃಷ್ಟಿಸುತ್ತಿದ್ದಾರೆ. ಅಷ್ಟೇ ಅಲ್ಲ, ಅತ್ಯಂತ ಬಡವರ ಜೇಬಿಗೆ ಕತ್ತರಿ ಹಾಕಿ, ಕೆಲವೇ ಕೋಟ್ಯಾಧಿಪತಿಗಳ ಮನೆ ತುಂಬುತ್ತಿದ್ದಾರೆ. ಹಲವು ಭರವಸೆ ಕೊಟ್ಟು ಅಧಿಕಾರಕ್ಕೇರಿದ ಕೇಂದ್ರ ಸರ್ಕಾರ ಯಾವುದೇ ಭರವಸೆ ಈಡೇರಿಸದೆ ಜನರಿಗೆ ಸುಳ್ಳು ಹೇಳಿದೆ” ಎಂದು ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮೋದಿ ಸರ್ಕಾರದಂತೆ ಕಾಂಗ್ರೆಸ್ ಸುಳ್ಳು ಭರವಸೆಗಳನ್ನು ನೀಡುವುದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಈಗಾಗಲೇ ನೀಡಿದ ನಾಲ್ಕು ಭರವಸೆಗನ್ನು ಮೊದಲ ದಿನವೇ ಜಾರಿಗೊಳಿಸಲಾಗುವುದು. ಈ ಭರವಸೆಗಳು ರಾಜ್ಯದ ಕಡು ಬಡವರಿಗೆ ಸಹಾಯವಾಗಲಿವೆ” ಎಂದರು.

“ಕಲ್ಯಾಣ ಕರ್ನಾಟಕ ಭಾಗಕ್ಕೆ ಕಾಂಗ್ರೆಸ್ ಸರ್ಕಾರ 371(ಜೆ) ಜಾರಿಗೊಳಿಸಿ ಈ ಭಾಗದ ಲಕ್ಷಾಂತರ ಜನರಿಗೆ ಉದ್ಯೋಗ, ಶಿಕ್ಷಣ ಸೌಲಭ್ಯ ದೊರಕುವಂತೆ ಮಾಡಿತು. ಆದರೆ, ಬಿಜೆಪಿ ಸರ್ಕಾರ ಕಪ್ಪು ಹಣ, 15 ಲಕ್ಷ ಕೊಡುತ್ತೇವೆಂದು ಸುಳ್ಳು ಭರವಸೆ ಕೊಟ್ಟು ಜನರಿಗೆ ಮೋಸ ಮಾಡಿತು” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಕರ್ನಾಟಕ ಸರ್ಕಾರದಿಂದ ಶೇ.40ರಷ್ಟು ಕಮಿಷನ್, ಪಿಎಸ್ಐ ಹಗರಣ, ಉಪನ್ಯಾಸಕರ ನೇಮಕಾತಿ ಹಗರಣ ನಡೆದರೂ ಪ್ರಧಾನಿ ಮಾತನಾಡುವುದಿಲ್ಲ. ಆದರೆ, ಭಾಷಣದಲ್ಲಿ ಮಾತ್ರ ಭ್ರಷ್ಟಾಚಾರ ವಿರುದ್ಧ ಮಾತಾಡುತ್ತಾರೆ. ಇದನ್ನೆಲ್ಲ ಪ್ರಶ್ನಿಸಿದ್ದಕ್ಕೆ ನನ್ನನ್ನು ಸಂಸತ್ತಿನಿಂದ ಹೊರ ಹಾಕಿದ್ದಾರೆ” ಎಂದು ಆಕ್ಷೇಪಿಸಿದರು.

ಶೇ.40ರ ಸರ್ಕಾರಕ್ಕೆ 40 ಸೀಟು : ರಾಹುಲ್‌ ಗಾಂಧಿ
ಕರ್ನಾಟಕದಲ್ಲಿ ಕಾಂಗ್ರೆಸ್ 150 ಸೀಟುಗಳನ್ನು ಗೆಲ್ಲುವ ಭರವಸೆಯಿದೆ. ಹಿಂದೆ ಬಿಜೆಪಿ ಕಾಂಗ್ರೆಸ್ ಶಾಸಕರನ್ನು ಖರೀದಿಸಿ ಸರ್ಕಾರ ನಡೆಸಿ ಶೇ.40ರಷ್ಟು ಕಮಿಷನ್ ವಸೂಲಿ ಮೂಲಕ ಭ್ರಷ್ಟಾಚಾರ ನಡೆಸಿತು. ಇಂಥ ಸರ್ಕಾರದ ವಿರುದ್ಧ ನಿಮ್ಮ ಮತವಿರಲಿ, ಕರ್ನಾಟಕ ಮತದಾರರು ಈ ಬಾರಿ ಭ್ರಷ್ಟಾಚಾರ ವಿರುದ್ಧ ಮತದಾನ ಮಾಡಬೇಕು” ಎಂದು ಮನವಿ ಮಾಡಿದರು.

ಬಿಜೆಪಿ ಸರಕಾರದಿಂದ ರಾಜ್ಯದ ಗೌರವ ಮಣ್ಣುಪಾಲು
“ಒಂದು ಕಾಲದಲ್ಲಿ ರಾಜ್ಯದ ಗೌರವ, ಸಂಸ್ಕೃತಿ ಬಗ್ಗೆ ಇಡೀ ದೇಶವೇ ಹೆಮ್ಮೆ ಪಡುವಂತಿತ್ತು. ಆದರೆ, ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರದ ದುರಾಡಳಿತ, ವ್ಯಾಪಕ ಭ್ರಷ್ಟಾಚಾರ, ಅವ್ಯವಹಾರದಿಂದ ರಾಜ್ಯದ ಗೌರವ ಮಣ್ಣು ಪಾಲಾಗಿದೆ” ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಈಶ್ವರ ಖಂಡ್ರೆ ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ನೀತಿ ಸಂಹಿತೆ ಜಾರಿ | ಅಕ್ರಮ ಮದ್ಯ, ದಾಸ್ತಾನು ಸಾಗಾಟ ತಡೆಗೆ ರ‍್ಯಾಂಕಿಂಗ್ ಮಾದರಿ ಟಾಸ್ಕ್‌

“ಬಿಜೆಪಿ ನೀಡಿದ ಭರವಸೆಗಳಲ್ಲಿ ಒಂದು ಭರವಸೆಯೂ ಈಡೇರಿಲ್ಲ. ಜನರಿಗೆ ಅಚ್ಛೆ ದಿನಗಳನ್ನು ತರುವುದಾಗಿ ಹೇಳಿ ಅಧಿಕಾರಕ್ಕೆ ಬಂದ ಬಿಜೆಪಿ ಬಡ ಜನರ ಮೇಲೆ ಪ್ರಹಾರ ನಡೆಸುತ್ತಿದೆ. ಬೆಲೆ ಏರಿಕೆ ಬಿಸಿಯಿಂದ ಜನರು ತತ್ತರಿಸಿದ್ದಾರೆ. ಜೀವನಾವಶ್ಯಕ ವಸ್ತುಗಳ ಬೆಲೆ ಗಗನಕ್ಕೇರಿದೆ. ರಾಜ್ಯದಲ್ಲಿ ಶೇ.40ರಷ್ಟು ಭ್ರಷ್ಟಾಚಾರ ತಾಂಡವಾಡುತ್ತಿದೆ. ನಿರುದ್ಯೋಗ ಸಮಸ್ಯೆ ಇದೆ. ಬಿಜೆಪಿ ಜನರ ರಕ್ತ ಹೀರುತ್ತಿದೆ. ಬಡ ಜನರು, ಕೂಲಿ ಕಾರ್ಮಿಕರು, ರೈತರು, ಸಣ್ಣ ವ್ಯಾಪಾರಸ್ಥರು ಸಂಕಷ್ಟ ಅನುಭವಿಸುತ್ತಿದ್ದಾರೆ” ಎಂದು ದೂರಿದರು.

“ಈ ಬಾರಿ ರಾಜ್ಯದ ಜನ ಇಂತಹ ಜನವಿರೋಧಿ ಸರ್ಕಾರವನ್ನು ಕಿತ್ತೊಗೆಯಲು ನಿರ್ಧರಿಸಿದ್ದಾರೆ. ಕಾಂಗ್ರೆಸ್ ಸರ್ಕಾರ‌ ಅಧಿಕಾರಕ್ಕೆ ಬರುತ್ತಲೇ ಜನತೆಗೆ ನೀಡಿರುವ ಎಲ್ಲ ಗ್ಯಾರಂಟಿಗಳನ್ನು ಈಡೇರಿಸಲಾಗುವುದು” ಎಂದು ತಿಳಿಸಿದರು.

ಗಾಂಧಿ- ಖಂಡ್ರೆ ಕುಟುಂಬಕ್ಕೆ ಹಳೆ ನಂಟು
ಗಾಂಧಿ ಪರಿವಾರದ ಜತೆಗೆ ಭಾಲ್ಕಿಯ ಖಂಡ್ರೆ ಪರಿವಾರ ಹಳೆ ನಂಟು ಹೊಂದಿದೆ ಎಂದು ಶಾಸಕ ಈಶ್ವರ ಖಂಡ್ರೆ ಅವರು ರಾಹುಲ್ ಗಾಂಧಿ ಗಮನಕ್ಕೆ ತಂದರು.

“1982ರಲ್ಲಿ ನಮ್ಮ ತಂದೆ ಭೀಮಣ್ಣ ಖಂಡ್ರೆ ಅವರು ಇಲ್ಲಿಗೆ ರಾಜೀವ್‌ ಗಾಂಧಿ ಅವರನ್ನು ಆಹ್ವಾನಿಸಿ, ಕಿಸಾನ್ ಸಮ್ಮೇಳನ ನಡೆಸಿದ್ದರು. 1999ರ ವೇಳೆ ಕ್ಷೇತ್ರದಲ್ಲಿ ರೈತರು ಆತ್ಮಹತ್ಯೆ ಮಾಡಿಕೊಂಡ ಸಂದರ್ಭದಲ್ಲಿ ಸೋನಿಯಾ ಗಾಂಧಿ ಅವರನ್ನು ಕರೆತಂದು ರೈತರಿಗೆ ಧೈರ್ಯ ತುಂಬುವ ಕೆಲಸ ಮಾಡಲಾಗಿತ್ತು. 2008 ಮತ್ತು 2018ರ ಚುನಾವಣೆ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರು ಪ್ರಚಾರ ಕೈಗೊಂಡ ಹಿನ್ನೆಲೆಯಲ್ಲಿ ನಾನು ಅಭೂತಪೂರ್ವ ಗೆಲುವು ಸಾಧಿಸಿದ್ದೇನೆ” ಎಂದು ನೆನಪಿಸಿಕೊಂಡರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು ಗ್ರಾಮಾಂತರ | ಕಾಂಗ್ರೆಸ್‌ನ ಡಿ.ಕೆ. ಸುರೇಶ್ ಪರ ನಟ ದರ್ಶನ್ ಪ್ರಚಾರ

ಲೋಕಸಭಾ ಚುನಾವಣೆಯ ಹಿನ್ನೆಲೆ, ರಾಜ್ಯದಲ್ಲಿ ರಾಜಕೀಯ ಪಕ್ಷದ ಅಭ್ಯರ್ಥಿಗಳು ಪ್ರಚಾರ ಭರಾಟೆ...

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಹಿತಕ್ಕಾಗಿ ಸೌಮ್ಯ ರೆಡ್ಡಿಗೆ ಮತ ನೀಡಿ: ನಟ ಧ್ರುವ ಸರ್ಜಾ

ಲೋಕಸಭಾ ಚುನಾವಣೆ ಹಿನ್ನೆಲೆ, ಅಭ್ಯರ್ಥಿಗಳ ಪ್ರಚಾರದ ಭರಾಟೆ ಜೋರಾಗಿದೆ. ಬೆಂಗಳೂರು ದಕ್ಷಿಣ...

ಕಲಬುರಗಿ | ನೇಹಾಳ ಭೀಕರ ಕೊಲೆ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಲು ಎಸ್ಎಫ್ಐ ಆಗ್ರಹ

ಹುಬ್ಬಳ್ಳಿಯ ಬಿವಿಬಿ ಕಾಲೇಜ್ ಕ್ಯಾಂಪಸ್‌ನಲ್ಲಿ ನಡೆದ ವಿದ್ಯಾರ್ಥಿನಿ ನೇಹಾಳ ಭೀಕರ ಕೊಲೆ,...

ಕಲಬುರಗಿ | ಮತದಾನ ಮಾಡಿ ಜವಾಬ್ದಾರಿಯುತ ನಾಗರಿಕರಾಗೋಣ: ತಾಹೇರ್ ಹುಸೇನ್

ನಮ್ಮ ದೇಶ ಚುನಾವಣೆಯ ಹೊಸ್ತಿಲಿನಲ್ಲಿದೆ. ಈ ಬಾರಿ ನಡೆಯುವಂತಹ ಚುನಾವಣೆಯು ಪ್ರಜಾಪ್ರಭುತ್ವ...