ಸಾರ್ವಜನಿಕರೊಂದಿಗೆ ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಸಿದ ರಾಹುಲ್‌ ಗಾಂಧಿ

Date:

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಸೋಮವಾರ ಬಿಎಂಟಿಸಿ ಬಸ್‌ನಲ್ಲಿ ಬೆಳಿಗ್ಗೆ ಸಾರ್ವಜನಿಕ ಪ್ರಯಾಣಿಕರೊಂದಿಗೆ ಸಹಪ್ರಯಾಣಿಕರಾಗಿ ಸಂಚರಿಸಿ ಗಮನ ಸೆಳೆದರು.

ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ಕೆಫೆ ಕಾಫಿ ಡೇಗೆ ರಾಹುಲ್ ಗಾಂಧಿ ಭೇಟಿ ನೀಡಿ ಕಾಪಿ ಸವಿಯುತ್ತ ಸಾರ್ವಜನಿಕರೊಂದಿಗೆ ಮಾತಿಗಿಳಿದರು. ಕಾಫಿ ಡೇ ನಲ್ಲಿದ್ದ ಸಾರ್ವಜನಿಕರು ರಾಹುಲ್‌ ಜೊತೆ ಸೆಲ್ಫಿ ತಗೆಸಿಕೊಂಡರು.

ಕಾಫಿ ಡೇಯಿಂದ ಹೊರಗೆ ಬಂದ ರಾಹುಲ್‌ ಗಾಂಧಿ ಅವರು ನೇರವಾಗಿ ಬಸ್‌ ನಿಲ್ದಾಣಕ್ಕೆ ತೆರಳಿ ಬಿಎಂಟಿಸಿ ಬಸ್ ಹತ್ತಿದರು. ಬಸ್‌ನಲ್ಲಿ ಸಂಚರಿಸುತ್ತಿದ್ದ ಮಹಿಳೆಯರ ಜೊತೆ ಮಾತಿಗಿಳಿದು, “ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಎಲ್ಲ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಮತ್ತು ಗೃಹಲಕ್ಷ್ಮಿ ಯೋಜನೆ (ಮನೆಯ ಯಜಮಾನತಿಗೆ ₹2000) ಕಾಂಗ್ರೆಸ್‌ ಖಾತರಿ ಬಗ್ಗೆ ಚರ್ಚಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
ರಾಹುಲ್‌ ಗಾಂಧಿ

ಈ ವೇಳೆ ಮಹಿಳೆಯರು ಸಾರಿಗೆ ಸಮಸ್ಯೆ, ಬೆಲೆ ಏರಿಕೆ ಬಗ್ಗೆ ರಾಹುಲ್‌ ಗಾಂಧಿ ಜೊತೆ ಮುಕ್ತವಾಗಿ ಮಾತನಾಡಿದರು.ಲಿಂಗರಾಜಪುರಂನಲ್ಲಿ ಬಸ್‌ ಇಳಿಯುವ ಮುನ್ನ ಚಾಲಕನೊಂದಿಗೆ ಫೋಟೋ ತಗೆಯಿಸಿಕೊಂಡರು.

ಭಾನುವಾರ ಫುಡ್‌ ಡಿಲೆವರಿ ಬಾಯ್ಸ್‌ ಜೊತೆಗೂ ರಾಹುಲ್‌ ಗಾಂಧಿ ಸಮಯ ಕಳೆದಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಸಾಕಷ್ಟು ಮೆಚ್ಚುಗೆಯ ಮಾತುಗಳು ಅಭಿಮಾನಿಗಳಿಂದ ವ್ಯಕ್ತವಾಗಿತ್ತು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಬರ ಪರಿಹಾರ ಸಾಕು’ ಎಂದಿರುವ ಕುಮಾರಸ್ವಾಮಿ ನಾಡದ್ರೋಹಿ: ಡಿಸಿಎಂ ಡಿಕೆಶಿ ವಾಗ್ದಾಳಿ

"ಕೇಂದ್ರ ಸರ್ಕಾರ ಕರ್ನಾಟಕದ ಬರಕ್ಕೆ ಅಲ್ಪ ಪರಿಹಾರ ಮೊತ್ತ ಘೋಷಿಸಿದ್ದು, ನಾವು...

ಹಿಂದುಳಿದ ಸಮುದಾಯಗಳೇ ಎಚ್ಚರ, ಮೋದಿ ನಿಮ್ಮ ಹಾದಿ ತಪ್ಪಿಸುತ್ತಿದ್ದಾರೆ: ಘರ್ಜಿಸಿದ ಸಿದ್ದರಾಮಯ್ಯ

ರಾಜ್ಯದ ಹಿಂದುಳಿದ ಸಮುದಾಯಗಳೇ ಎಚ್ಚರ. ಮೋದಿ ನಿಮ್ಮ ಹಾದಿ ತಪ್ಪಿಸಿ ಮುಸ್ಲಿಮರ...

ಪಿಎಂ ಮೋದಿ ಸೂಪರ್‌ ಮ್ಯಾನ್ ಅಲ್ಲ ದುಬಾರಿ ಮ್ಯಾನ್: ಪ್ರಿಯಾಂಕಾ ಗಾಂಧಿ ವ್ಯಂಗ್ಯ

ಪ್ರಧಾನಿ ನರೇಂದ್ರ ಮೋದಿ ಸೂಪರ್ ಮ್ಯಾನ್ ಅಲ್ಲ ಬದಲಾಗಿ ಅವರು ದುಬಾರಿ...