ಬೀದರ್‌ | ಬಿಎಸ್‌ಪಿ ಮುಖಂಡ ಭೂಮಾನಂದ ಹತ್ಯೆ ಪ್ರಕರಣ : ಸಮಗ್ರ ತನಿಖೆಗೆ ಆಗ್ರಹ

Date:

ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಸುಂಕೇಶ್ವರಹಾಳ ಗ್ರಾಮದ ಬಳಿ ಸಾಮಾಜಿಕ ಹೋರಾಟಗಾರ ಹಾಗೂ ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಮುಖಂಡ ಭೂಮಾನಂದ (32) ಅವರನ್ನು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಬರ್ಬರವಾಗಿ ಹತ್ಯೆಗೈದ ಘಟನೆಯನ್ನು ಬಿಎಸ್‌ಪಿ ಬೀದರ್‌ ಜಿಲ್ಲಾ ಘಟಕ ತೀವ್ರವಾಗಿ ಖಂಡಿಸಿದೆ.

- Advertisement -

ಈ ಸಂಬಂಧ ಶುಕ್ರವಾರ ಬಿಎಸ್ಪಿ ಜಿಲ್ಲಾ ಘಟಕದ ಪದಾಧಿಕಾರಿಗಳು ಮುಖ್ಯಮಂತ್ರಿಗಳ ಹೆಸರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಜಿಲ್ಲಾಡಳಿತ ಕಚೇರಿ ಅಧಿಕಾರಿಗೆ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ನಮ್ಮ ಜೀವನ ಪ್ರೇಮ, ಸ್ನೇಹ, ಸೌಂದರ್ಯ ಹರಡುವ ಹೂವಿನಂತಿರಲಿ:...

ಶ್ರೀರಂಗಪಟ್ಟಣ ಪುರಸಭೆ ಚಾಮನ್ ಬಯಲನ್ನು ʼಹೂವಿನ ಗ್ರಾಮʼ ಎಂದು ಘೋಷಿಸಿ, ಅಲ್ಲಿ ಗುಲಾಬಿ ಎಣ್ಣೆ ತಯಾರಿಕಾ ಘಟಕ, ಪ್ರವಾಸಿ ತಾಣ ಮಾಡಬೇಕು. ಟಿಪ್ಪು ಕಾಲದ ಚಾಮನ್ ಎಂಬ ಹೆಸರನ್ನು ಉಳಿಸಬೇಕು. ಗುಲಾಬಿ ಕೇವಲ ಒಂದು...

ಜರ್ಮನಿಯಲ್ಲಿ ತೀವ್ರಗಾಮಿಗಳ ಅಬ್ಬರ: ದಿಕ್ಕುತಪ್ಪಿದ ಮಧ್ಯಮಾರ್ಗ, ಮರುಜೀವ ಪಡೆಯುತ್ತಿದೆಯೇ...

ಜರ್ಮನಿಯಲ್ಲಿ ತೀವ್ರ ಬಲಪಂಥೀಯರ ಈ ಮಟ್ಟದ ಏರಿಕೆ ಕೇವಲ ರಾಜಕೀಯ ಪೈಪೋಟಿಯಲ್ಲ, ಬದಲಾಗಿ ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ಜರ್ಮನಿ ಮತ್ತು ಬಲಪಂಥ ಎಂದಾಕ್ಷಣ ಇಡೀ ವಿಶ್ವಕ್ಕೆ ಅಡಾಲ್ಫ್ ಹಿಟ್ಲರ್ ಮತ್ತು ಆತನ ನಾಜಿ...

ಸೌಜನ್ಯಳನ್ನು ಕೊಂದವರು ಯಾರು? ಹೊಸ ತನಿಖೆಯಲ್ಲಿ ಉತ್ತರ ಸಿಗುವ...

14 ವರ್ಷಗಳು... 3 ತನಿಖಾ ಸಂಸ್ಥೆಗಳಾದ ಪೊಲೀಸ್, ಸಿಐಡಿ, ಸಿಬಿಐ ತನಿಖೆಗಳು... ಅಮಾಯಕನಾದ ಒಬ್ಬನೇ ಆರೋಪಿಯ ಸುತ್ತಲಿನ ತನಿಖೆ-... ಕೊನೆಗೆ ಆತ ನಿರಪರಾಧಿ ಎಂದು ಸಾಬೀತು, ಆತನ ಖುಲಾಸೆ. ಹಾಗಾದರೆ 17 ವರ್ಷದ...

ಮುಖಂಡರು ಮಾತನಾಡಿ, “ಈ ದುರ್ಘಟನೆಯು ರಾಜ್ಯವನ್ನೇ ಬೆಚ್ಚಿಬೀಳಿಸಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ವಿಫಲವಾಗಿ ಹದಗೆಟ್ಟಿರುವುದು ಸ್ಪಷ್ಟವಾಗಿ ಕಂಡುಬರುತ್ತಿದೆ. ರಾಜ್ಯದಲ್ಲಿ ಹೋರಾಟಗಾರರಿಗೆ ರಕ್ಷಣೆ ಇಲ್ಲದಂತಾಗಿದೆ, ಇಡೀ ರಾಜ್ಯದಲ್ಲಿ ಭೂಮಾನಂದ ಅವರ ಹತ್ಯೆಯಿಂದಾಗಿ ಹೋರಾಟಗಾರರಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದ್ದು, ಎಲ್ಲಾ ಹೋರಾಟಗಾರರು ಆತಂಕದ ಸ್ಥಿತಿಯಲ್ಲಿ ಇರುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಘಟನೆಯನ್ನು ನಮ್ಮ ಪಕ್ಷವು ರಾಜ್ಯಾದ್ಯಂತ ಬಲವಾಗಿ ಖಂಡಿಸುತ್ತದೆ” ಎಂದರು.

“ಭೂಮಾನಂದ ಅವರ ಹತ್ಯೆಯ ಕುರಿತು ಉನ್ನತ ಮಟ್ಟದ ನಿಷ್ಪಕ್ಷಪಾತ ತನಿಖೆ ನಡೆಸಬೇಕು. ಮೃತರ ಕುಟುಂಬಕ್ಕೆ ಸಂಪೂರ್ಣ ಭದ್ರತೆಯನ್ನು ಒದಗಿಸಬೇಕು. ಕುಟುಂಬಕ್ಕೆ ಸೂಕ್ತ ಪರಿಹಾರ ಹಾಗೂ ಕುಟುಂಬದ ಓರ್ವ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡಬೇಕು. ಕೊಲೆ ಪ್ರಕರಣದ ಎಲ್ಲ ಆರೋಪಿಗಳನ್ನು ತಕ್ಷಣ ಬಂಧಿಸಿ, ಕಾನೂನಿನ ಅಡಿಯಲ್ಲಿ ಶಿಕ್ಷೆಗೆ ಒಳಪಡಿಸಬೇಕು. ಪ್ರಕರಣದ ತನಿಖೆಯನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಿ ನ್ಯಾಯ ದೊರಕಿಸಬೇಕು” ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಇದನ್ನೂ ಓದಿ : SIR | ಕಲ್ಯಾಣ ಕರ್ನಾಟಕದಲ್ಲಿ 18.11 ಲಕ್ಷ ಮತದಾರರು ಡಿಲೀಟ್ ಆಗುವ ಆತಂಕ!

ಈ ಸಂದರ್ಭದಲ್ಲಿ ಬಿಎಸ್‌ಪಿ ಜಿಲ್ಲಾಧ್ಯಕ್ಷ ಕಪಿಲ ಗೋಡಬೋಲೆ, ರಾಜ್ಯ ಕಾರ್ಯದರ್ಶಿ ಜ್ಞಾನೇಶ್ವರ ಸಿಂಗಾರೆ, ಅಶೋಕ ಮಂಠಾಳಕರ್, ಜಿಲ್ಲಾ ಸಂಯೋಜಕರಾದ ಜಾಫರ್ ಖುರೇಷಿ, ರಾಜಕುಮಾರ ಮೂಲಭಾರತಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಕ್ತಿಕಾಂತ ಭಾವಿದೊಡ್ಡಿ, ಜಿಲ್ಲಾ ಉಪಾಧ್ಯಕ್ಷ ಸಚೀನ ಗಿರಿ, ಬೀದರ್ ಉತ್ತರ ಅಧ್ಯಕ್ಷ ಮಹೇಶ ಭೋಲಾ, ಜಿಲ್ಲಾ ಕಾರ್ಯದರ್ಶಿ ಅಂಬಾದಾಸ ಚಕ್ರವರ್ತಿ, ಹುಮನಾಬಾದ್ ಸಂಯೋಜಕ ನಿಲೇಶ ಮೇಲಕೇರಿ, ಔರಾದ ತಾಲ್ಲೂಕಾಧ್ಯಕ್ಷ ಮಲ್ಲಿಕಾರ್ಜುನ ಕೆ., ಹುಮನಾಬಾದ್ ತಾಲ್ಲೂಕಾಧ್ಯಕ್ಷ ವೈಜಿನಾಥ ಸಿಂಧೆ, ಭಾಲ್ಕಿ ವಿಧಾನಸಭಾ ಅಧ್ಯಕ್ಷ ಆಕಾಶ ಶಿಂಧೆ, ಬಸವಕಲ್ಯಾಣ ಅಧ್ಯಕ್ಷ ಶಂಕರ ಫುಲೆ, ಔರಾದ ತಾಲ್ಲೂಕು ಉಪಾಧ್ಯಕ್ಷ ತುಕಾರಾಮ ಕಾಂಬಳೆ, ಬೀದರ್ ಕಾರ್ಯದರ್ಶಿ ಶಶಿಕಾಂತ ಒಂಟಿ, ಬೀದರ್ ತಾಲ್ಲೂಕು ಖಜಾಂಚಿ ಅಬ್ದುಲ್ ಖಾಲೇದ್, ಬೀದರ್ ದಕ್ಷಿಣ ಅಧ್ಯಕ್ಷ ಸತೀಶ ಎಸ್. ದೊಡ್ಡಿ, ನಗರ ಸಂಯೋಜಕ ಅಮರ ಜಲ್ಲೆ, ನಗರ ಅಧ್ಯಕ್ಷ ಅಭಿಷೇಕ ಮದನಾ ಸೇರಿದಂತೆ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಗತ್ತಿನಲ್ಲೇ ಮೊದಲು: ಹಂದಿ ಮೂತ್ರಪಿಂಡದಿಂದ 9 ತಿಂಗಳು ಜೀವಿಸಿದ ವ್ಯಕ್ತಿ

ವೈದ್ಯಕೀಯ ವಿಜ್ಞಾನ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬೆಳವಣಿಗೆಯೊಂದು ನಡೆದಿದೆ. ತಳಿವಿಜ್ಞಾನದ (ಜೆನೆಟಿಕ್ಸ್‌) ಮೂಲಕ...

ಒಡಿಶಾದಲ್ಲೂ ಸಿಜೆಪಿ ‘ಸ್ಕೂಲ್ ಟೀಕ್ ಕರೋ’ ಅಭಿಯಾನ: ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ತನ್ನ 'ಸ್ಕೂಲ್ ಟೀಕ್ ಕರೋ' (ಶಾಲೆ ಸರಿಪಡಿಸಿ)...

ಮುದ್ದೇಬಿಹಾಳ | ಪ್ರತಿಯೊಬ್ಬರೂ ಮಾನವೀಯ ಮೌಲ್ಯ ಅಳವಡಿಸಿಕೊಳ್ಳುವುದು ಸೂಕ್ತ: ಅಕ್ಬರ್ ಅಲಿ ಉಡುಪಿ

ಜಾತಿ, ಪಂಗಡಗಳ ಎಲ್ಲೆಗಳನ್ನು ಮೀರಿ ಮಾನವೀಯತೆ, ಪ್ರೀತಿ, ತ್ಯಾಗ ಹಾಗೂ ಸಮಾನತೆಯ...