ರಾಯಚೂರು | ರಾಜ್ಯದಲ್ಲಿ ಬರ, ಬೆಳೆ ಉಳಿಸಲು ಟ್ಯಾಂಕರ್‌ಗಳ ಮೊರೆಹೋದ ರೈತರು

Date:

ರಾಜ್ಯದಲ್ಲಿ ಕೈಕೊಟ್ಟ ಮುಂಗಾರಿನಿಂದ ಎಲ್ಲ ಜಿಲ್ಲೆಗಳು ಬರಗಾಲ ಅನುಭವಿಸುತ್ತಿದ್ದಾರೆ. ನೀರಿನ ಅಭಾವ ಉಂಟಾಗಿದೆ. ಹಳ್ಳ, ನದಿ, ಜಲಾಶಯಗಳಲ್ಲಿಯೂ ನೀರಲ್ಲದೆ ರೈತರು ಬೆಳೆಗಳಿಗೆ ನೀರುಣಿಸಲು ಪರದಾಡುತ್ತಿದ್ದಾರೆ. ಇತ್ತ ರಾಯಚೂರಿನಲ್ಲಿ ರೈತರು ಬೆಳೆಗಳನ್ನು ಉಳಿಸಿಕೊಳ್ಳಲು ಟ್ಯಾಂಕರ್‌ಗಳ ಮೊರೆಹೋಗಿದ್ದಾರೆ.

- Advertisement -

ಮಳೆಯಾಶ್ರಿತ ಪ್ರದೇಶದಲ್ಲಿ ಬಿತ್ತನೆ ಮಾಡಿದ‌‌ ಬೆಳೆ ಒಣಗಿ ಹೋಗುತ್ತಿದ್ದರೆ, ಇತ್ತ ತುಂಗಭದ್ರಾ ಎಡದಂಡೆಯ ಕಾಲುವೆ ನೀರನ್ನು ನಂಬಿಕೊಂಡು ವ್ಯವಸಾಯ ಮಾಡಿಕೊಳ್ಳುತ್ತಿರುವ ರೈತರು ಸಹ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಾವಿರಾರು ರೂಪಾಯಿ ವೆಚ್ಚ ಮಾಡಿ ಬೆಳೆದ ಮೆಣಸಿನಕಾಯಿ ಬೆಳೆಗೆ ಹಾನಿಯಾಗುತ್ತಿರುವುದರಿಂದ ಬೆಳೆ ಉಳಿಸಿಕೊಳ್ಳಲು ಟ್ಯಾಂಕರ್‌ಗಳಲ್ಲಿ ನೀರನ್ನು ತಂದು ನೀರುಣಿಸುವ ಸಹಾಸಕ್ಕೆ ಮುಂದಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಒಂದೂವರೆ ಎಕರೆಯಲ್ಲಿ ಮೆಣಸಿನಕಾಯಿ ಬೆಳೆ ಹಾಕಿದ್ದೇನೆ. ಇದರ ಇಳುವರಿ ಕೂಡ ಉತ್ತಮವಾಗಿ ಬಂದಿದೆ. ಪಕ್ಕದಲ್ಲಿಯೇ ತುಂಗಭದ್ರಾ ಎಡದಂಡೆ ಕಾಲುವೆ ಹಾದು ಹೋಗಿದೆ. ಆದರೆ, ನೀರಿಲ್ಲ. ಹೀಗಾಗಿ, ಟ್ಯಾಂಕರ್ ಮೂಲಕ ನೀರು ತಂದು ಬೆಳೆ ಉಳಿಸಿಕೊಳ್ಳುತ್ತಿದ್ದೇನೆ ಎನ್ನುತ್ತಾರೆ ಆಶಾಪುರ ಗ್ರಾಮದ ರೈತ ವೀರೇಶ್‌.

ಸದ್ಯ ಬೆಳೆದಿರುವ ಬೆಲೆಗೆ ಸಾಕಷ್ಟು ಹಣಹಾಕಿ ಬೆಳೆದಿದ್ದೇವೆ. ಒಂದು ಟ್ಯಂಕ್‌ ನೀರಿಗೆ ನಾಲ್ಕು ಸಾವಿರ ಖರ್ಚುಮಾಡಿ ಬೆಳೆ ಉಳಿಸಿಕೊಳ್ಳುತ್ತಿದ್ದೇವೆ. ನಮ್ಮ ಅಕ್ಕಪಕ್ಕದ ರೈತರು ಸಹ ಟ್ಯಾಂಕರ್ ಮೂಲಕ ನೀರು ತಂದು ಬೆಳೆಗಳಿಗೆ ಉಣಿಸಲು ಮುಂದಾಗಿದ್ದಾರೆ ಎಂದು ರೈತರು ಬೇಸರ ವ್ಯಕ್ತಪಡಿಸುತ್ತಾರೆ.

ಇತ್ತ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಬಿನ್ನಾಳ, ಯರೇಹಂಚಿನಾಳ, ಸೊಂಪುರ ಸೇರಿದಂತೆ ವಿವಿಧ ಗ್ರಾಮದಲ್ಲಿ ರೈತರು ಸಹ ಬೆಳೆ ಸಂರಕ್ಷಿಸಲು ಟ್ಯಾಂಕರ್‌ ನೀರಿನ ಮೊರೆ ಹೋಗುತ್ತಿದ್ದಾರೆ. ಟ್ಯಾಂಕರ್ ಮೂಲಕ ನೀರುಣಿಸುವುದು ಸರಳ ಕೆಲಸವಲ್ಲ. ಆದರೂ, ಬಂದಿರುವ ಬೆಳೇಯನ್ನು ಉಳಿಸಿಕೊಳ್ಳಲು ಟ್ಯಾಂಕರ್‌ಗಳನ್ನು ಬಾಡಿಗೆ ಪಡೆದು ನೀರು ಹಾಯಿಸುತ್ತಿದ್ದಾರೆ. ಬರದ ಹಿನ್ನೆಲೆಯಲ್ಲಿ ಏನೇ ಬೆಳೆ ಬಂದರೂ ಬೆಲೆ ಸಿಗುತ್ತದೆ ಎನ್ನುವ ಆತ್ಮವಿಶ್ವಾಸದಲ್ಲಿರುವ ರೈತರು, ಸದ್ಯಕ್ಕೆ ಉಳಿದಿರುವ ಈರುಳ್ಳಿ, ಮೆಣಸಿನಕಾಯಿಗೆ ನೀರುಣಿಸಿ ರಕ್ಷಿಸಿಕೊಳ್ಳಲು ಮುಂದಾಗಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ ಕಣದಲ್ಲಿ 14 ಅಭ್ಯರ್ಥಿಗಳು; ಅ.23ರಂದು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು...

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...