ರಾಮನಗರ | ಏ.19ರಂದು ನಾಮಪತ್ರ ಸಲ್ಲಿಸುತ್ತೇನೆ: ಎಚ್‌ ಡಿ ಕುಮಾರಸ್ವಾಮಿ

Date:

Advertisements
  • ರಾಮನಗರ ಜಿಲ್ಲೆಯ 3 ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲ್ಲುವ ವಿಶ್ವಾಸ
  • ರಾಜ್ಯದಲ್ಲಿ ಈಗಾಗಲೇ ಪಂಚರತ್ನ ರಥಯಾತ್ರೆ ಯಶಸ್ವಿ

ಏಪ್ರಿಲ್ 19ರಂದು ಚನ್ನಪಟ್ಟಣದಲ್ಲಿ ನಾಮಪತ್ರ ಸಲ್ಲಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಏ ಪ್ರಿಲ್‌ 17ರಂದು ಪುತ್ರ ನಿಖಿಲ್ ರಾಮನಗರದಲ್ಲಿ ನಾಮಪತ್ರ ಸಲ್ಲಿಸಲಿದ್ದು, 19ರಂದು ನಾನು ಚನ್ನಪಟ್ಟಣದಲ್ಲಿ ನಾಮಪತ್ರ ಸಲ್ಲಿಸುತ್ತೇನೆ. ಏಪ್ರಿಲ್ 20, 21ರ ಎರಡು ದಿನಗಳ ಕಾಲ ಕ್ಷೇತ್ರದಲ್ಲಿ ಪ್ರಚಾರ ಮಾಡುತ್ತೇನೆ” ಎಂದು ಮಾಹಿತಿ ನೀಡಿದ್ದಾರೆ.

“2018ರ ವಿಧಾನಸಭಾ ಚುನಾವಣೆಯ ರೀತಿಯಲ್ಲಿ ಈ ಚುನಾವಣೆಯಲ್ಲಿಯೂ ನೀವೆ ಮುಂದೆ ನಿಂತು ಚುನಾವಣೆ ನಡೆಸಿಕೊಡಿ. ನನ್ನನ್ನ ನೀವು ರಕ್ಷಣೆ ಮಾಡಿದರೆ, ರಾಜ್ಯದ ಬಡವರನ್ನು ನಾನು ರಕ್ಷಣೆ ಮಾಡುತ್ತೇನೆ. ಈ ಬಾರಿ ನನಗೆ ಶಕ್ತಿ ನೀಡಿ” ಎಂದು ಕ್ಷೇತ್ರದ ಜನರಲ್ಲಿ ಮನವಿ ಮಾಡಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಹಾಸನ ಟಿಕೆಟ್ ಗೊಂದಲ | ದೊಡ್ಡಗೌಡರ ನಿರ್ಧಾರವೇ ಅಂತಿಮ : ಇಂದೇ 2ನೇ ಪಟ್ಟಿ ಬಿಡುಗಡೆ

“ರಾಜ್ಯದಲ್ಲಿ ಈಗಾಗಲೇ ಪಂಚರತ್ನ ರಥಯಾತ್ರೆ ಯಶಸ್ವಿಯಾಗಿದ್ದು, ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಈ ಬಾರಿಯೂ ಗೆಲ್ಲುತ್ತೇವೆಂಬ ಸಂಪೂರ್ಣ ವಿಶ್ವಾಸವಿದೆ. ಚನ್ನಪಟ್ಟಣದಲ್ಲಿ ನಮ್ಮ ಶಕ್ತಿ ದೊಡ್ಡಮಟ್ಟದಲ್ಲಿದೆ. ಮತ್ತೆ ಮುಖ್ಯಮಂತ್ರಿ ಆಗುವ ಅವಕಾಶ ಇದೆ” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

“ರಾಮನಗರ ಜಿಲ್ಲೆಯ 3 ವಿಧಾನಸಭಾ ಕ್ಷೇತ್ರಗಳಲ್ಲಿ ನಾವು ಗೆಲ್ಲುತ್ತೇವೆ. ನಿಮ್ಮ ಮನೆ ಮಗನನ್ನು ಬಿಟ್ಟು ಬೇರೆ ಯಾರೂ ಮುಖ್ಯಮಂತ್ರಿ ಆಗುವುದಕ್ಕೆ ಆಗಲ್ಲ” ಎಂದು ಹೇಳಿಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X