ತಾಯಿ ಚಾಮುಂಡೇಶ್ವರಿ ಆಶೀರ್ವಾದದಿಂದ ರಾಜ್ಯದಲ್ಲಿ ಉತ್ತಮ ಮಳೆಯಾಗಿ ಜಲಾಶಯಗಳೆಲ್ಲಾ ಭರ್ತಿಯಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ರಾಮನಗರದ ತಾಯಿ ಚಾಮುಂಡೇಶ್ವರಿ ಕರಗ ಉತ್ಸವದಲ್ಲಿ ಪಾಲ್ಗೊಂಡು ಮೊದಲಿಗೆ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು.
“ಪ್ರಕೃತಿ ನಮ್ಮ ಪರವಾಗಿದೆ. ಆದ್ದರಿಂದ ರಾಜ್ಯದಲ್ಲಿ ಮಳೆ ಚೆನ್ನಾಗಿದೆ. ನನ್ನ ಕಾಲ ಗುಣದಿಂದಲೇ ಉತ್ತಮ ಮಳೆ ಆಗುತ್ತಿದೆ ಎಂದು ಹೇಳುವುದಿಲ್ಲ. ಇಂತಹ ಮೌಡ್ಯದಲ್ಲಿ ನನಗೆ ನಂಬಿಕೆ ಇಲ್ಲ” ಎನ್ನುವ ಮೂಲಕ ಸಿದ್ದರಾಮಯ್ಯ ಅವರ ಕಾಲ ಗುಣದಿಂದ ರಾಜ್ಯದಲ್ಲಿ ಮಳೆ ಆಗಲ್ಲ ಎನ್ನುವವರಿಗೆ ಟಾಂಗ್ ಕೊಟ್ಟರು.
ರಾಮನಗರ ಜಿಲ್ಲೆ ಅಭಿವೃದ್ಧಿಗೆ ಸಕಲ ನೆರವು
“ರಾಮನಗರ ಜಿಲ್ಲೆಯ ಅಭಿವೃದ್ಧಿಗೆ ಅಗತ್ಯ ಅನುದಾನವನ್ನು ನೀಡಲು ನಾನು ಬದ್ದವಾಗಿದ್ದೇನೆ. ರಾಜ್ಯದ ಏಳೂವರೆ ಕೋಟಿ ಜನರ ಅಭಿವೃದ್ಧಿ ನನ್ನ ಗುರಿ” ಎಂದರು.
ಶಾಸಕ ಇಕ್ಬಾಲ್ ಹುಸೇನ್, ಮಾಜಿ ಸಂಸದ ಡಿ.ಕೆ.ಸುರೇಶ್, ಮಾಗಡಿ ಶಾಸಕ ಬಾಲಕೃಷ್ಣ, ಮಾಜಿ ಶಾಸಕರಾದ ಸಿ.ಎಂ.ಲಿಂಗಪ್ಪ ಸೇರಿ ಹಲವು ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

E Rajyada Prabhudda Rajakarani Adu Siddramaiahnavaru Maatra, Badavara, Deena Dalithara, Hindulidavara Ashakirana, Moudya Nirakarisuva Hemmeya putra Mattomme, Magadomme, Sada CM Agirali