ಚುನಾವಣಾ ರಾಜಕಾರಣಕ್ಕೆ ರಮಾನಾಥ ರೈ ನಿವೃತ್ತಿ

Date:

ಚುನಾವಣಾ ರಾಜಕೀಯಕ್ಕೆ ಕಾಂಗ್ರೆಸ್‌ ಹಿರಿಯ ಮುಖಂಡ, ಮಾಜಿ ಸಚಿವ ರಮಾನಾಥ ರೈ ನಿವೃತ್ತಿ ಘೋಷಿಸಿದ್ದಾರೆ. ಪಕ್ಷದ ರಾಜಕೀಯ ಚಟುವಟಿಕೆಗಳನ್ನು ಸಕ್ರಿಯವಾಗಿರುವುದಾಗಿ ಹೇಳಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಕಾಂಗ್ರೆಸ್‌ ಹಿನ್ನಡೆ ಅನುಭವಿಸಿದರೂ, ರಾಜ್ಯದಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದೆ. ಕಾಂಗ್ರೆಸ್‌ ಕೈ ಹಿಡಿದ ರಾಜ್ಯದ ಜನರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಜಿಲ್ಲೆಯಲ್ಲಿ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಮತ್ತು ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಕಾರ್ಯಕರ್ತರು ಗೆಲುವಿಗಾಗಿ ಶ್ರಮಿಸಬೇಕು” ಎಂದು ಕರೆಕೊಟ್ಟರು.

“ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಬಾರಿಗಿಂತ ಈ ಬಾರಿ ನನಗೆ ಹೆಚ್ಚು ಮತಗಳು ಬಂದಿವೆ. ಆದರೆ, ಸೋಲುಂಡಿದ್ದೇನೆ. ಈ ಬಗ್ಗೆ ಪರಾಮರ್ಶಿಸುತ್ತೇನೆ. ನಾನು ಎಂದಿಗೂ ಪಕ್ಷದ ಮಾತನ್ನು ಮೀರುವುದಿಲ್ಲ. ಮುಂದೆ ಪಕ್ಷ ನೀಡುವ ಹೊಣೆಗಾರಿಕೆಯನ್ನು ನಿಭಾಯಿಸುತ್ತೆನೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ?: ದೆಹಲಿಯತ್ತ ಡಿಕೆಶಿ: ಯಾರಾಗ್ತಾರೆ ಮುಖ್ಯಮಂತ್ರಿ?

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡ ಇಬ್ರಾಹೀಂ ಕೋಡಿಜಾಲ್, ರಕ್ಷಿತ್ ಶಿವರಾಂ, ಶಶಿಧರ ಹೆಗ್ಡೆ, ಲ್ಯಾನ್ಸಿಲಾಟ್ ಪಿಂಟೋ, ಶಾಹುಲ್ ಹಮೀದ್, ಅಶ್ರಫ್ ಕೆ, ನವೀನ್ ಡಿಸೋಜ, ಸುದರ್ಶನ್, ಉಮೇಶ್ ದಂಡಕೇರಿ ಸೇರಿದಂತೆ ಹಲವರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾನವೀಯ ಮೌಲ್ಯ ಬೆಳೆಸಿಕೊಳ್ಳುವುದು ಅವಶ್ಯ: ಉಪನ್ಯಾಸಕ ಸೋಮಲಿಂಗ ಕರ್ಣಿ

ಪ್ರಸ್ತುತ ತಾಂತ್ರಿಕ ಯುಗದಲ್ಲಿ ಮಾನವೀಯತೆ ಕಳೆದುಕೊಳ್ಳುತ್ತಿದೆ. ಮೊದಲೆಲ್ಲಾ ಗ್ರಾಮೀಣ ಭಾಗದಲ್ಲಿ ಹಿರಿಯರ...

ನ.25-26ರಂದು ಬೆಂಗಳೂರಿನಲ್ಲಿ ಪ್ರಥಮ ಬಾರಿಗೆ ನಡೆಯಲಿದೆ ಕರಾವಳಿಯ ‘ಕಂಬಳ’

ಕಂಬಳ ವೀಕ್ಷಿಸಲು 9 ಲಕ್ಷ ಮಂದಿ ಬರುವ ನಿರೀಕ್ಷೆ ಇದೆ ಎಂದ...

ಕೊಡಗು | ಚಿರತೆ ದಾಳಿಗೆ ಕುರಿ ಬಲಿ; ವಸತಿ ಶಾಲೆಯ ಮಕ್ಕಳಲ್ಲಿ ಆತಂಕ

ಸುಂಟಿಕೊಪ್ಪ ಕೊಡಗು ಜಿಲ್ಲೆಯ ಸುಂಟಿಕೊಪ್ಪದ ಸಮೀಪದ ಗರಂಗದೂರಿನ ಮೊರಾರ್ಜಿ ದೇಸಾಯಿ ವಸತಿ...

ಬೆಂಗಳೂರು | ಕನ್ನಡಿಗರ ಬಗ್ಗೆ ಅವಹೇಳನಕಾರಿ ಬರಹ; ಪಶ್ಚಿಮ ಬಂಗಾಳ ಮೂಲದ ಯುವಕನ ಬಂಧನ

ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್‌ನಲ್ಲಿ ಬೆಂಗಳೂರು ಹಾಗೂ ಕನ್ನಡಿಗರ ಬಗ್ಗೆ ಅವಹೇಳನಕಾರಿ ಬರಹ...