ಸಿದ್ದರಾಮಯ್ಯಗೆ ಕೋಲಾರ ಟಿಕೆಟ್‌ ಮಿಸ್‌ ಆಗಿದ್ದಕ್ಕೆ ರಮೇಶ್‌ ಕುಮಾರ್‌ ಮುನಿಸು; ಸುರ್ಜೇವಾಲಾ ಭೇಟಿ

Date:

  • ರಮೇಶ್‌ ಕುಮಾರ್‌ ದಿಢೀರ್ ಮುನಿಸಿಗೆ ಬೆಚ್ಚಿಬಿದ್ದ ಹೈಕಮಾಂಡ್
  • ರಮೇಶ್ ಕುಮಾರ್ ನಿವಾಸಕ್ಕೆ ಸುರ್ಜೇವಾಲಾ ಭೇಟಿ, ಮಾತುಕತೆ

ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಮಯ್ಯ ಅವರಿಗೆ ಕೋಲಾರ ಟಿಕೆಟ್‌ ಕೈ ತಪ್ಪಿರುವುದಕ್ಕೆ ಮಾಜಿ ಸ್ಪೀಕರ್ ರಮೇಶ್ ಕುಮಾರ್​ ಮುನಿಸಿಕೊಂಡಿದ್ದಾರೆ ಎನ್ನಲಾಗಿದೆ.

- Advertisement -

ರಮೇಶ್ ಕುಮಾರ್ ಅವರ ಮುನಿಸು ಶಮನ ಮಾಡಲು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಮುಂದಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಶನಿವಾರ ಸುರ್ಜೇವಾಲಾ ಅವರು ಕೋಲಾರದ ಶ್ರೀನಿವಾಸಪುರ ತಾಲ್ಲೂಕಿನ ಅಡ್ಡಗಲ್ ಗ್ರಾಮದಲ್ಲಿನ ರಮೇಶ್ ಕುಮಾರ್ ನಿವಾಸಕ್ಕೆ ಸುರ್ಜೇವಾಲಾ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.

ಕೋಲಾರಕ್ಕೆ ಬೇರೆ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಹೈಕಮಾಂಡ್ ಸೂಚಿಸಿದ್ದಕ್ಕೆ ಬೇಸರಗೊಂಡಿರುವ ರಮೇಶ್ ಕುಮಾರ್, ಕೋಲಾರದಲ್ಲಿ ಭಾನುವಾರ ನಡೆಯಲಿರುವ ಜೈ ಭಾರತ ಸತ್ಯಾಗ್ರಹ ಯಾತ್ರೆಗೆ ಗೈರಾಗಲಿದ್ದೇನೆ ಎಂದು ತಿಳಿಸಿದ್ದರಂತೆ. ಹಾಗೆಯೇ ಸಿದ್ದರಾಮಯ್ಯಗೆ ಕೋಲಾರದಿಂದ ಟಿಕೆಟ್‌ ನೀಡದೇ ಇದ್ದಲ್ಲಿ ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸದಿರಲು ತೀರ್ಮಾನಿಸಿದ್ದರು ಎನ್ನಲಾಗಿದೆ.

ರಮೇಶ್‌ ಕುಮಾರ್‌ ಅವರ ದಿಢೀರ್ ನಿರ್ಧಾರಕ್ಕೆ ಬೆಚ್ಚಿಬಿದ್ದ ಹೈಕಮಾಂಡ್ ನಾಯಕರು, ಸುರ್ಜೇವಾಲಾ ಮೂಲಕ ರಮೇಶ್ ಕುಮಾರ್ ಮುನಿಸು ಶಮನ ಮಾಡುವ ಪ್ರಯತ್ನ ಮಾಡಿದ್ದಾರೆ. ಸುರ್ಜೇವಾಲಾ ಜೊತೆಗೆ ಶಾಸಕ ಬೈರತಿ ಸುರೇಶ್ ಹೋಗಿದ್ದು, ರಮೇಶ್‌ ಕುಮಾರ್‌ ಜೊತೆಗೆ ಮಾತುಕತೆ ನಡೆಸಿದ್ದಾರೆ.

ಕೋಲಾರದಲ್ಲೇ ಸ್ಪರ್ಧಿಸುವಂತೆ ಸಿದ್ದರಾಮಯ್ಯ ಅವರನ್ನು ಜಿಲ್ಲೆಯ ಶಾಸಕರಾದ ರಮೇಶ್ ಕುಮಾರ್, ಕೆ ವೈ ನಂಜೇಗೌಡ ಹಾಗೂ ಎಸ್‌ ಎನ್‌ ನಾರಾಯಣಸ್ವಾಮಿ ಪದೆ ಪದೇ ಒತ್ತಾಯಿಸುತ್ತಿದ್ದರು. ಇದಕ್ಕೆ ಕಾರಣ ಸಿದ್ದರಾಮಯ್ಯ ಅವರು ಕೋಲಾರಕ್ಕೆ ಬಂದರೆ ಜಿಲ್ಲೆಯ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಸಹಾಯವಾಗಲಿದೆ ಎನ್ನುವುದು ಅವರ ನಿರಿಕ್ಷೆ.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ವಿವಾದದ ನಡುವೆ ಒಡಿಶಾ ಮುಖ್ಯ ಚುನಾವಣಾಧಿಕಾರಿ ಸ್ವಯಂ ನಿವೃತ್ತಿಗೆ ಅರ್ಜಿ; ಆರ್ ಎಸ್ ಗೋಪಾಲನ್ ಹೇಳಿದ್ದೇನು?

ಒಡಿಶಾದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡ...

ಇಡಿ ಅಧಿಕಾರಿಗಳ ವಿರುದ್ಧ ಎಸ್‌ಸಿ/ಎಸ್‌ಟಿ ಪ್ರಕರಣ: ಪ್ರತಿಕ್ರಿಯಿಸಲು ವಿಳಂಬ ಮಾಡಿದ ಸಿಎಂ ಸೊರೇನ್‌ಗೆ ಜಾರ್ಖಂಡ್ ಹೈಕೋರ್ಟ್ ದಂಡ

ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳ ವಿರುದ್ಧ ದಾಖಲಾಗಿರುವ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ...

ದ್ವೇಷಭಾಷಣ ಆರೋಪ: TMC ಸಂಸದೆ ಮಹುವಾ ಮೊಯಿತ್ರಾಗೆ ಬಂಧನದಿಂದ ಮುಕ್ತಿ; ಕ್ಷೇತ್ರ ಭೇಟಿ ವೇಳೆ ಭದ್ರತೆ ನೀಡಲು ಹೈಕೋರ್ಟ್‌ ಸೂಚನೆ

ದ್ವೇಷಪೂರಿತ ಭಾಷಣ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಗಾಳದ ಟಿಎಂಸಿ...