ಬಂಡಾಯ ಅಭ್ಯರ್ಥಿಗಳು ನಾಮಪತ್ರ ಹಿಂಪಡೆಯಲಿದ್ದಾರೆ : ಕೆಪಿಸಿಸಿ ಅಧ್ಯಕ್ಷ ಡಿಕೆಶಿ

Date:

  • ಬಂಡಾಯ ಅಭ್ಯರ್ಥಿಗಳೊಂದಿಗೆ ಮಾತನಾಡಿದ್ದೇವೆ
  • ನಾಮಪತ್ರ ವಾಪಸ್ಸಿಗೆ ಏಪ್ರಿಲ್ 24 ಕೊನೆಯ ದಿನ

ನಾಮಪತ್ರ ಪಡೆಯಲು ಇಂದು (ಏ.24) ಕೊನೆಯ ದಿನವಾಗಿರುವ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳೂ ಬಂಡಾಯ ಅಭ್ಯರ್ಥಿಗಳೊಂದಿಗೆ ಮಾತುಕತೆ ನಡೆಸಿ ಬಂಡಾಯ ಶಮನಕ್ಕೆ ಮುಂದಾಗಿದ್ದಾರೆ.

ಅದರಂತೆ ಕಾಂಗ್ರೆಸ್ ವಿರುದ್ಧ ಬಂಡಾಯವೆದ್ದು ನಾಮಪತ್ರ ಸಲ್ಲಿಸಿದ್ದ ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಹಿಂಪಡೆಯಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದರು.

ಕೊಲ್ಲೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಟಿಕೆಟ್ ಹಂಚಿಕೆ ವಿಚಾರದಲ್ಲಿ ಅಸಮಾಧಾನಗೊಂಡು ಪಕ್ಷದ ವಿರುದ್ಧ ಬಂಡಾಯ ಎದ್ದಿದ್ದ ಅಭ್ಯರ್ಥಿಗಳ ಜೊತೆ ಮಾತನಾಡಲಾಗಿದೆ. ಅವರು ತಮ್ಮ ಉಮೇದುವಾರಿಕೆಯನ್ನು ಹಿಂಪಡೆಯಲು ಒಪ್ಪಿದ್ದಾರೆಂದು ತಿಳಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇದೇ ವೇಳೆ ಸಿಎಂ ಅಭ್ಯರ್ಥಿ ವಿಚಾರವಾಗಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್, ನಾವು ರಾಜಕಾರಣಿಗಳು ಕಾವಿ ಹಾಕಿಲ್ಲ. ಬಿಳಿ ಬಟ್ಟೆ ಹಾಕಿದ್ದೇವೆ ಎಂದು ಮಾರ್ಮಿಕ ಉತ್ತರ ನೀಡಿದರು.

ಈ ಸುದ್ದಿ ಓದಿದ್ದೀರಾ? :ಕಾಂಗ್ರೆಸ್ ಎಂದರೆ ಭ್ರಷ್ಟಾಚಾರ, ಅಧರ್ಮ, ಅನೀತಿ: ಸಿಎಂ ಬೊಮ್ಮಾಯಿ…

ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅವರು ಕರ್ನಾಟಕಲ್ಲಿ ಅತಿ ಭ್ರಷ್ಟ ಸರ್ಕಾರ ಅಂದರೇ ಬಿಜೆಪಿ ಸರ್ಕಾರ. ಅವರದ್ಧೇ ಪಕ್ಷದ ಅನೇಕ ನಾಯಕರು ಭ್ರಷ್ಟಾಚಾರದ ಬಗ್ಗೆ ಹೇಳಿದ್ದಾರೆ. 40 ಪರ್ಸೆಂಟ್ ಸರ್ಕಾರವನ್ನ ಕಿತ್ತೊಗೆಯಬೇಕು. ಭ್ರಷ್ಟಾಚಾರ ನಿರ್ಮೂಲನೆ ಮಾಡುವುದು ನಮ್ಮ ಗುರಿ.

ಬಿಜೆಪಿಯ ಹಿಂದುತ್ವದ ಹೋರಾಟ ಫಲ ಕೊಡಲ್ಲ. ಅವರು ಜನರ ಭಾವನೆಗಳ ಬಗ್ಗೆ ಮಾತನಾಡುತ್ತಾರೆ. ನಾವು ಜನರ ಬದುಕಿನ ಬಗ್ಗೆ ಮಾತನಾಡುತ್ತೇವೆ. ಹೀಗಾಗಿ ಜನ ನಮ್ಮನ್ನು ಈ ಬಾರಿ ಬೆಂಬಲಿಸುತ್ತಾರೆ ಎಂದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಹಿತಕ್ಕಾಗಿ ಸೌಮ್ಯ ರೆಡ್ಡಿಗೆ ಮತ ನೀಡಿ: ನಟ ಧ್ರುವ ಸರ್ಜಾ

ಲೋಕಸಭಾ ಚುನಾವಣೆ ಹಿನ್ನೆಲೆ, ಅಭ್ಯರ್ಥಿಗಳ ಪ್ರಚಾರದ ಭರಾಟೆ ಜೋರಾಗಿದೆ. ಬೆಂಗಳೂರು ದಕ್ಷಿಣ...

ಬಿಸಿಲ ಧಗೆಗೆ ಬೆಂದ ಜನರಿಗೆ ತಂಪೆರೆದ ಮಳೆ: ಶನಿವಾರ ಬೆಳಿಗ್ಗೆ ರಾಜ್ಯದ ಹಲವೆಡೆ ಮಳೆ

ತಾಪಮಾನ ಹೆಚ್ಚಳದಿಂದ ಬಸವಳಿದ್ದಿದ್ದ ರಾಜ್ಯದ ಜನತೆಗೆ ತಡವಾಗಿ ಆರಂಭವಾದ ಪೂರ್ವ ಮುಂಗಾರು...

ಮಹಿಳೆಯರಿಗೆ 2,000 ಕೊಡ್ತಿದ್ದಾರೆ; ಗಂಡಸ್ರು ದುಡಿಮೆಯ 90% ಕುಡಿಯುತ್ತಿದ್ದಾರೆ: ಎಚ್‌ಡಿಕೆ

ಗೃಹಲಕ್ಷ್ಮಿ ಯೋಜನೆ ಬಗ್ಗೆ ಮಾತನಾಡುವ ಮೂಲಕ ಮಾಜಿ ಮುಖ್ಯಮಂತ್ರಿ, ಮಂಡ್ಯ ಲೋಕಸಭಾ...

ಮೊದಲ ಹಂತದ ಚುನಾವಣೆ | 2019ಕ್ಕಿಂತ ಕುಸಿದ ಮತದಾನ; ಬಿಜೆಪಿಗೆ ಸೋಲಿನ ಆತಂಕ?

ಮನುವಾದಿ, ಫ್ಯಾಸಿಸ್ಟ್‌ ಆಡಳಿತದ ವಿರುದ್ಧ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಉಳಿವಿಗಾಗಿನ ಹೋರಾಟವೆಂದೇ...