ಚುನಾವಣೆ 2023 | ಬಿಜೆಪಿಯಿಂದ ʼಪ್ರಜಾ ಪ್ರಣಾಳಿಕೆʼ ಬಿಡುಗಡೆ; ನಿತ್ಯ ಅರ್ಧ ಲೀಟರ್‌ ಹಾಲು, ಮೂರು ಗ್ಯಾಸ್‌ ಸಿಲಿಂಡರ್‌ ಉಚಿತ

Date:

  • ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾರಿಂದ ಪ್ರಣಾಳಿಕೆ ಬಿಡುಗಡೆ
  • ಪ್ರತಿ ವಾರ್ಡ್‌ಗಳಲ್ಲಿ ಅಟಲ್‌ ಆಹಾರ ಕೇಂದ್ರ ಸ್ಥಾಪಿಸುವ ಭರವಸೆ

ರಾಜ್ಯ ವಿಧಾನಸಭಾ ಚುನಾವಣೆಯ ಮತದಾನಕ್ಕೆ 9 ದಿನ ಮಾತ್ರ ಬಾಕಿಯಿದ್ದು, ಸೋಮವಾರ ಬಿಜೆಪಿ ʼಪ್ರಜಾ ಪ್ರಣಾಳಿಕೆʼ ಹೆಸರಲ್ಲಿ ತನ್ನ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ.

ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಪ್ರಣಾಳಿಕೆ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಮಾಜಿ ಸಿಎಂ ಡಿ ವಿ ಸದಾನಂದಗೌಡ, ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಸೇರಿದಂತೆ ಹಲವು ನಾಯಕರು ಇದ್ದರು.

ʼಪ್ರಜಾ ಪ್ರಣಾಳಿಕೆʼಯ ಪ್ರಮುಖಾಂಶಗಳು

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
  • ಬಿಪಿಎಲ್‌ ಕುಟುಂಬಗಳಿಗೆ ವಾರ್ಷಿಕ ಮೂರು ಉಚಿತ ಗ್ಯಾಸ್ ಸಿಲಿಂಡರ್‌ ವಿತರಣೆ (ಯುಗಾದಿ, ಗಣೇಶ ಚತುರ್ಥಿ ಹಾಗೂ ದೀಪಾವಳಿ ಸಮಯದಲ್ಲಿ)
  • ಬೆಂಗಳೂರಿನ ಪ್ರತಿ ವಾರ್ಡ್‌ಗಳಲ್ಲಿ ಅಟಲ್‌ ಆಹಾರ ಕೇಂದ್ರ ಸ್ಥಾಪನೆ
  • ಬಿಪಿಎಲ್‌ ಕಾರ್ಡ್‌ ಹೊಂದಿರುವವರಿಗೆ ಪ್ರತಿ ದಿನ ಅರ್ಧ ಲೀಟರ್‌ ನಂದಿನಿ ಹಾಲು ಉಚಿತ, ಪ್ರತಿ ತಿಂಗಳು 5 ಕೆಜಿ ಸಿರಿ ಅನ್ನ, ಸಿರಿ ಧಾನ್ಯ ವಿತರಣೆ
  • ಏಕರೂಪ ನಾಗರಿಕ ಸಹಿತೆ ಜಾರಿ ಮಾಡುವ ಭರವಸೆ
  • ಸರ್ವರಿಗೂ ಸೂರು ಯೋಜನೆ

ಬಿಜೆಪಿಯ ಪ್ರಣಾಳಿಕೆ ರಚನೆ ವೇಳೆ ವಿಷಯ ತಜ್ಞರಿಂದ ಸುಮಾರು 900 ಸಲಹೆ ಬಂದಿದ್ದವು. ಜನರಿಂದ ಸುಮಾರು 6 ಲಕ್ಷ ಸಲಹೆ ಬಂದಿದ್ದವು ಎಂದು ಪ್ರಣಾಳಿಕೆ ಸಮಿತಿ ಸಂಚಾಲಕ ಮತ್ತು ಸಚಿವ ಕೆ ಸುಧಾಕರ್‌ ಹೇಳಿದ್ದಾರೆ.

ಬಿಜೆಪಿಯ ಪೂರ್ಣ ʼಪ್ರಜಾ ಪ್ರಣಾಳಿಕೆʼ ಇಲ್ಲಿದೆ

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ʼಈ ದಿನʼ ಸಮೀಕ್ಷೆ | ಬಿಗಡಾಯಿಸಿದ ನಿರುದ್ಯೋಗ ; ಮೋದಿ ಆಡಳಿತಕ್ಕೆ ಬೇಸರಗೊಂಡ ಮತದಾರ

“ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿಸಲಾಗುವುದು” ಎಂಬ ಘೋಷಣೆಯನ್ನು ನರೇಂದ್ರ ಮೋದಿಯವರು...

ನೇಹಾ ಕನ್ನಡ ನಾಡಿನ ಮಗಳು, ಸಾವಿನ ಮನೆಯಲ್ಲಿ ಬಿಜೆಪಿ ರಾಜಕಾರಣ ಬೇಡ: ಸುರ್ಜೇವಾಲ್

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪಸಿಂಗ್ ಸುರ್ಜೇವಾಲ್ ಅವರು ಹುಬ್ಬಳ್ಳಿಯ ಬಿಡ್ನಾಳದಲ್ಲಿರುವ ನೇಹಾ...

‘ಈ ದಿನ’ ಸಮೀಕ್ಷೆ | ಬೆಲೆ ಏರಿಕೆಗೆ ಬಿಜೆಪಿಯೇ ಕಾರಣ ಅಂತಾರೆ ಮತದಾರರು!

2014ರಲ್ಲಿ ಚುನಾವಣಾ ಪ್ರಚಾರಕ್ಕೆ ನರೇಂದ್ರ ಮೋದಿ ಮತ್ತು ಬಿಜೆಪಿಗೆ ಪ್ರಮುಖ ವಿಚಾರವಾಗಿದ್ದು...

ಫ್ರಿ ಬಸ್ | ತೀರ್ಥಯಾತ್ರೆ ನೆಪದಲ್ಲಿ ಮಹಿಳೆಯರು ಎಲ್ಲೆಲ್ಲೋ ಹೋಗ್ತಿದ್ದಾರೆ; ಬಿಜೆಪಿ ಪ್ರಚಾರಕಿ, ನಟಿ ಶೃತಿ ವಿವಾದಾತ್ಮಕ ಹೇಳಿಕೆ

ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ...