ಬಿಜೆಪಿಯವರ ಭ್ರಷ್ಟಾಚಾರಕ್ಕೆ ಜನರಿಂದ ಸರಿಯಾದ ಪಾಠ: ಸಿದ್ದರಾಮಯ್ಯ

Date:

  • ಬಿಜೆಪಿಯನ್ನು ಸೋಲಿಸಬೇಕು ಎಂದು ಜನ ನಿರ್ಧಾರ ಮಾಡಿದ್ದರು
  • ಮೋದಿ ಅವರ ಪ್ರಭಾವ ಈ ಚುನಾವಣೆಯಲ್ಲಿ ಏನೇನೂ ನಡೆದಿಲ್ಲ

ಬಿಜೆಪಿ ಸರ್ಕಾರದ ಭ್ರಷ್ಟಾಚಾರದಿಂದ ಜನ ಬೇಸತ್ತಿದ್ದರು. ಈ ಸರ್ಕಾರ ಎಷ್ಟು ಬೇಗ ತೊಲಗಿದ್ರು ಅಷ್ಟು ಒಳ್ಳೆಯದು ಎಂದು ಜನ ಕಾಯುತ್ತಿದ್ದರು, ಬಿಜೆಪಿಯವರ ಭ್ರಷ್ಟಾಚಾರಕ್ಕೆ ಜನ ಸರಿಯಾದ ಪಾಠ ಕಲಿಸಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.

ಕಾಂಗ್ರೆಸ್‌ ಗೆಲುವಿನ ನಂತರ ಸಿದ್ದರಾಮಯ್ಯ ಮೈಸೂರಿನಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿ, “ನಾನು ಪ್ರಚಾರ ಸಭೆಗಳಲ್ಲಿ ಹಾಗೂ ನಮ್ಮ ಹೈಕಮಾಂಡ್‌ ಬಳಿ ಸುಮಾರು 130 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಹೇಳಿದ್ದೆ. ನನ್ನ ಮಾತು ನಿಜವಾಗಿದೆ. ಕಾಂಗ್ರೆಸ್‌ ಪಕ್ಷ ತನ್ನ ಸ್ವಂತ ಬಲದ ಮೇಲೆ ಸರ್ಕಾರ ಮಾಡಲಿದೆ ಎಂದು ಹೇಳಿದ್ದೆ. ಇದು ಕೂಡ ಸತ್ಯವಾಗಿದೆ” ಎಂದರು.

“ನರೇಂದ್ರ ಮೋದಿ, ಅಮಿತ್‌ ಶಾ, ನಡ್ಡಾ, ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರು 150 ಸೀಟು ಗೆಲ್ಲುತ್ತೇವೆ ಎನ್ನುತ್ತಿದ್ದರು. ಅಮಿತ್‌ ಶಾ ಅವರ ಬಳಿ ಗೃಹ ಖಾತೆ ಇದೆ. ಇಂಟಲಿಜೆನ್ಸ್‌ ಏಜೆನ್ಸಿಗಳು ಇವೆ, ಅವರಿಗೆ ಸೋಲುತ್ತೇವೆ ಎಂದು ಗೊತ್ತಿದ್ದೂ ಕೂಡ ಸುಳ್ಳು ಹೇಳುತ್ತಿದ್ದರು. ಹಣದ ಬಲದಿಂದ ಹೇಗಾದರೂ ಮಾಡಿ ಚುನಾವಣೆ ಗೆಲ್ಲಬೇಕು ಎಂದು ಪ್ರಯತ್ನಿಸಿದ್ದರು. ಆದರೆ ಜನ ಬಿಜೆಪಿಯನ್ನು ಸೋಲಿಸಬೇಕು ಎಂದು ನಿರ್ಧಾರ ಮಾಡಿದ್ದರು” ಎಂದು ತಿಳಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಮೋದಿ ಅವರ ಪ್ರಭಾವ ಈ ಚುನಾವಣೆಯಲ್ಲಿ ಏನೇನೂ ನಡೆದಿಲ್ಲ. ನೂರು ಬಾರಿ ಮೋದಿ ಮತ್ತು ಅಮಿತ್‌ ಶಾ ಬಂದರೂ ಯಾವ ಪರಿಣಾಮ ಬೀರುವುದಿಲ್ಲ ಎಂದು ಹೇಳಿದ್ದೆ. ನನ್ನ ಮಾತು ನಿಜವಾಗಿದೆ. ಮೋದಿ ಅವರ ಪ್ರಚಾರ ರಾಜ್ಯದ ಜನರ ಮೇಲೆ ಯಾವ ಪರಿಣಾಮ ಬೀರಿಲ್ಲ. ಈ ಫಲಿತಾಂಶ ಲೋಕಸಭಾ ಚುನಾವಣೆಗೆ ಬಿಜೆಪಿಯವರಿಗೆ ಎಚ್ಚರಿಕೆಯ ಗಂಟೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮೋದಿ ಮತ್ತು ಬಿಜೆಪಿ ವಿರುದ್ಧವಾಗಿ ಜನ ಮತ ನೀಡುತ್ತಾರೆ. ಇದರಿಂದ ಬಿಜೆಪಿಯೇತರ ಸರ್ಕಾರ ಅಧಿಕಾರಕ್ಕೆ ಬಂದೇ ಬರುತ್ತದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

“ಸುಧಾಕರ್‌, ಎಂಟಿಬಿ ನಾಗರಾಜ್‌ ಸೋತಿದ್ದಾರೆ. ಹೀಗೆ ಕಾಂಗ್ರೆಸ್‌ಗೆ ಮೋಸ ಮಾಡಿ ಹೋದವರು ಬಹಳಷ್ಟು ಜನ ಸೋತಿದ್ದಾರೆ. ಇನ್ನು ಕೆಲವು ಕಡೆ ಪ್ರಬಲವಾದ ಅಭ್ಯರ್ಥಿಗಳು ಇಲ್ಲದ ಕಾರಣಕ್ಕೆ ಕಾಂಗ್ರೆಸ್‌ ಬಿಟ್ಟು ಹೋದವರು ಗೆದ್ದಿದ್ದಾರೆ. ನಮ್ಮ ಬಳಿ ಸಂಪನ್ಮೂಲ ಕೊರತೆ ಇದ್ದಿದ್ದು ನಿಜ. ಅವರ ಬಳಿ ಸಾಕಷ್ಟು ಭ್ರಷ್ಟ ಹಣ ಇತ್ತು, ನಮ್ಮ ಬಳಿ ದುಡ್ಡಿರಲಿಲ್ಲ, ನಾವು ನಮ್ಮ ಅಭ್ಯರ್ಥಿಗಳಿಗೆ ಅಲ್ಪಸ್ವಲ್ಪ ಸಹಾಯ ಮಾಡಿದ್ದೆವು ಅಷ್ಟೆ” ಎಂದರು.

“ಕಾಂಗ್ರೆಸ್‌ ಮುಕ್ತ ಭಾರತ ಮಾಡುತ್ತೇವೆ ಎಂದು ಬಿಜೆಪಿಯವರು ಹೇಳುತ್ತಿದ್ದರು. ಆದರೆ ಪಶ್ಚಿಮ ಬಂಗಾಳ, ಒರಿಸ್ಸಾ, ಬಿಹಾರ, ತಮಿಳುನಾಡು, ಕೇರಳ, ತೆಲಂಗಾಣ, ಪಂಜಾಬ್‌, ಹಿಮಾಚಲ ಪ್ರದೇಶ, ರಾಜಸ್ಥಾನ, ದೆಹಲಿ ಮುಂತಾದ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದಲ್ಲಿ ಇಲ್ಲ. ಮಧ್ಯಪ್ರದೇಶದಲ್ಲಿ ಆಪರೇಷನ್‌ ಕಮಲ ಮಾಡಿ ಸರ್ಕಾರ ಮಾಡಿದ್ರು. ಹೀಗೆ ಬಿಜೆಪಿ ಇಡೀ ದೇಶದ ಎಲ್ಲ ರಾಜ್ಯಗಳಲ್ಲೂ ಅಧಿಕಾರದಲ್ಲಿ ಇಲ್ಲ” ಎಂದರು.

“ಈ ಬಾರಿ ನಮ್ಮ ಗೆಲುವಿನಿಂದ ಪಕ್ಷದ ಕಾರ್ಯಕರ್ತರು ಸ್ಫೂರ್ತಿ ಪಡೆದಿದ್ದಾರೆ. ಈ ಫಲಿತಾಂಶ ಮುಂದಿನ ಲೋಕಸಭಾ ಚುನಾವಣೆಯ ದಿಕ್ಸೂಚಿಯಾಗಲಿದೆ. ನಾವು ಜನರಿಗೆ ಗ್ಯಾರಂಟಿಗಳನ್ನು ನೀಡಿದ್ದೇವೆ, ಅದರ ಬಗ್ಗೆ ಮೋದಿ ಅವರು ಬಹಳ ಲಘುವಾಗಿ ಮಾತನಾಡಿದ್ರು, ರಾಜ್ಯ ದಿವಾಳಿಯಾಗುತ್ತದೆ ಎಂದರು, ನಾನು 13 ಬಜೆಟ್‌ಗಳನ್ನು ಮಂಡಿಸಿದ್ದೇನೆ. ಮೋದಿ ಅವರಿಗೆ ರಾಜ್ಯದ ಆರ್ಥಿಕ ಪರಿಸ್ಥಿತಿ ಬಗ್ಗೆ ಗೊತ್ತಿಲ್ಲ ಎಂದು ಕಾಣುತ್ತೆ. ನಮ್ಮ ಗ್ಯಾರಂಟಿಗಳಿಗೆ ಸುಮಾರು 50 ರಿಂದ 60 ಸಾವಿರ ಕೋಟಿ ರೂಪಾಯಿ ಹಣ ಖರ್ಚಾದರೂ ಸರ್ಕಾರ ಭರಿಸಲು ಶಕ್ತವಾಗಿದೆ” ಎಂದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಾಮರಾಜನಗರ | ಮತದಾನ ಬಹಿಷ್ಕಾರ; ಮನವೊಲಿಸಲು ಹೋದ ಅಧಿಕಾರಿಗಳ ಮೇಲೆ ಹಲ್ಲೆ

ರಾಜ್ಯ 14 ಕ್ಷೇತ್ರಗಳಲ್ಲಿ ಶಾಂತಿಯುತವಾಗಿ ಮತದಾನ ನಡೆಯುತ್ತಿದ್ದು, ಕೆಲವೆಡೆ ಮತದಾನ ಬಹಿಷ್ಕಾರ...

ಮೋದಿಯವರ ‘ಚಾರ್‌ ಸವ್ ಪಾರ್’ ಘೋಷಣೆ ಹಿಂದಿನ ಉದ್ದೇಶವೇನು? ಅರಿತಿದ್ದಾರೆಯೇ ‘ಒಬಿಸಿ’ಗಳು!

ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನದ ಮೂಲ ರಚನೆಯನ್ನು ಬದಲಾಯಿಸುವುದಿಲ್ಲ. ಮೀಸಲಾತಿಯನ್ನು...

ಭಯಗೊಂಡಿರುವ ಪ್ರಧಾನಿ ವೇದಿಕೆಯಲ್ಲೇ ಕಣ್ಣೀರು ಹಾಕಬಹುದು: ರಾಹುಲ್ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ನಡೆಸಿರುವ ವಾಗ್ದಾಳಿಗೆ ತಿರುಗೇಟು ನೀಡಿರುವ...

ಉಡುಪಿ | ನಾನು ಮತ ಹಾಕಿರುವ ಅಭ್ಯರ್ಥಿ ನೂರಕ್ಕೆ ನೂರರಷ್ಟು ಗೆಲ್ಲುತ್ತಾರೆ: ನಟ ರಕ್ಷಿತ್ ಶೆಟ್ಟಿ

ಲೋಕಸಭಾ ಚುನಾವಣೆ ಹಿನ್ನೆಲೆ, ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ರಾಜಕಾರಣಿಗಳು,...