ಹು-ಧಾ ಪಾಲಿಕೆ ಸದಸ್ಯ, ರೌಡಿಶೀಟರ್ ಚೇತನ್ ಹಿರೇಕೆರೂರು ಬಂಧನ; ಕುಟುಂಬಸ್ಥರನ್ನು ಭೇಟಿಯಾದ ಜಗದೀಶ್ ಶೆಟ್ಟರ್

Date:

  • ಜಗದೀಶ್‌ ಶೆಟ್ಟರ್‌ ನಾಮಪತ್ರ ಸಲ್ಲಿಸುವ ವೇಳೆ ಚೇತನ್ ಹಿರೇಕೆರೂರು ಬಂಧನ
  • ಹುಬ್ಬಳ್ಳಿ-ಧಾರವಾಡ ಪಾಲಿಕೆಯ ಪಕ್ಷೇತರ ಸದಸ್ಯನಾಗಿರುವ ಚೇತನ್ ಹಿರೇಕೆರೂರು

ಗೂಂಡಾ ಕಾಯ್ದೆಯಡಿ ಬಂಧಿತನಾಗಿರುವ ಹುಬ್ಬಳ್ಳಿ-ಧಾರವಾಡ ಪಾಲಿಕೆಯ ಪಕ್ಷೇತರ ಸದಸ್ಯ ಮತ್ತು ರೌಡಿಶೀಟರ್ ಚೇತನ್ ಹಿರೇಕೆರೂರು ಮನೆಗೆ ಜಗದೀಶ್ ಶೆಟ್ಟರ್ ಭೇಟಿ ನೀಡಿದರು.

ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿರುವ ಜಗದೀಶ್ ಶೆಟ್ಟರ್ ಅವರು, ಹುಬ್ಬಳ್ಳಿ-ಧಾರವಾಡ ಕೇಂದ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಗುರುವಾರ ನಾಮಪತ್ರ ಸಲ್ಲಿಸುವ ಮುನ್ನ ನಡೆದ ರ‍್ಯಾಲಿಯಲ್ಲಿ ಚೇತನ್ ಹಿರೇಕೆರೂರು ಭಾಗಿಯಾಗಿದ್ದರು.

ರ‍್ಯಾಲಿ ವೇಳೆ ಹುಬ್ಬಳ್ಳಿ-ಧಾರವಾಡ ಪಾಲಿಕೆಯ ಪಕ್ಷೇತರ ಸದಸ್ಯ ಚೇತನ್ ಹಿರೇಕೆರೂರು ಅವರನ್ನು ಗೂಂಡಾ ಕಾಯ್ದೆಯಡಿ ಹುಬ್ಬಳ್ಳಿಯ ಗೋಕುಲ್‌ ರೋಡ್‌ ಠಾಣೆ ಪೊಲೀಸರು ಗುರುವಾರ ಬಂಧಿಸಿ, ಈಗ ಬೆಳಗಾವಿಯ ಹಿಂಡಲಗಾ ಜೈಲಿಗೆ ಕಳುಹಿಸಿದ್ದಾರೆ. ಆತನ ವಿರುದ್ಧ ವಿವಿಧ ಪೊಲೀಸ್‌ ಠಾಣೆಗಳಲ್ಲಿ ಹಲವಾರು ರೌಡಿ ಹಿನ್ನೆಲೆಯ ಪ್ರಕರಣಗಳು ದಾಖಲಾಗಿವೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಚುನಾವಣೆ 2023 | ನಾಗ್ಪುರ್‌ ಪಡೆಯಿಂದ ಶೆಟ್ಟರ್‌ ಮೇಲೆ ಗೂಢಾಚಾರಿಕೆ

ಚೇತನ್ ಹಿರೇಕೆರೂರು ಬಂಧನದ ನಂತರ ಕೋಟೆಲಿಂಗೇಶ್ವರ ನಗರದಲ್ಲಿರುವ ಚೇತನ್ ಮನೆಗೆ ಶುಕ್ರವಾರ ಜಗದೀಶ್‌ ಶೆಟ್ಟರ್‌ ಬೇಟಿ ನೀಡಿ, ಆತನ ಕುಟುಂಬಸ್ಥರೊಂದಿಗೆ ಕೆಲ ಕಾಲ ಮಾತುಕತೆ ನಡೆಸಿದರು.

ಜಗದೀಶ್ ಶೆಟ್ಟರ್ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ಇಂತಹ ವಿದ್ಯಮಾನ ನಡೆದಿರುವುದು ದ್ವೇಷ ರಾಜಕಾರಣವೇ ಎಂಬ ಅನುಮಾನಕ್ಕೆ ಕಾರಣವಾಗಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ ಪೆನ್‌ಡ್ರೈವ್ | ಪ್ರಜ್ವಲ್ ರೇವಣ್ಣ ತಪ್ಪಿಸಿಕೊಂಡಿದ್ದರೆ ನನಗೆ ಸಂಬಂಧವಿಲ್ಲ: ಎಚ್‌.ಡಿ ಕುಮಾರಸ್ವಾಮಿ

ಹಾಸನದ ಅಶ್ಲೀಲ ವಿಡಿಯೋಗಳ (ಪೆನ್‌ಡ್ರೈವ್‌) ಪ್ರಕರಣದ ಬಗ್ಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ....

ಪ್ರಜ್ವಲ್ ಪ್ರಕರಣ | ಉಪ್ಪು ತಿಂದವನು ನೀರು ಕುಡಿಯಲೇಬೇಕು: ಎಚ್ ಡಿ ಕುಮಾರಸ್ವಾಮಿ

ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ವೈರಲ್ ಪ್ರಕರಣ...

ಖಾಸಗಿ ಸಂಪತ್ತಿನ ಬಗ್ಗೆ ರಾಹುಲ್ ಮಾತನಾಡಿಲ್ಲ; ಬಿಜೆಪಿ ಗೊಂದಲ ಸೃಷ್ಟಿಸುತ್ತಿದೆ: ಸಿಎಂ ರೇವಂತ್ ರೆಡ್ಡಿ

ತೆಲಂಗಾಣದಲ್ಲಿ ಕಾಂಗ್ರೆಸ್‌ ಭರ್ಜರಿ ಗೆಲುವು ಸಾಧಿಸಿ, ಅಧಿಕಾರ ಹಿಡಿದ ಕೆಲ ತಿಂಗಳುಗಳಲ್ಲೇ...