ರೈತ ಯುವಕರನ್ನು ಮದುವೆಯಾದರೆ ₹2 ಲಕ್ಷ ಪ್ರೋತ್ಸಾಹ ಧನ; ಜೆಡಿಎಸ್ ಪ್ರಣಾಳಿಕೆ ಬಿಡುಗಡೆ

Date:

Advertisements
  • ಪ್ರತಿ ಕೃಷಿ ಕಾರ್ಮಿಕ ಕುಟುಂಬಕ್ಕೆ ಮಾಸಿಕ ₹2000 ಸಹಾಯಧನ
  • ಪ್ರತಿ ಆಟೋ ಚಾಲಕನಿಗೆ ಪ್ರತಿ ತಿಂಗಳು ₹2 ಸಾವಿರ ಮಾಸಾಶನ

ರಾಜ್ಯ ವಿಧಾನಸಭಾ ಚುನಾವಣೆಯ ಮತದಾನಕ್ಕೆ ಕೇವಲ 13 ದಿನ ಮಾತ್ರ ಬಾಕಿ ಉಳಿದಿದ್ದು, ಚುನಾವಣಾ ತಯಾರಿಯಲ್ಲಿರುವ ಜೆಡಿಎಸ್‌ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದೆ.

ಜೆಡಿಎಸ್‌ ರಾಜ್ಯದ ಮತದಾರರಿಗೆ ಅನೇಕ ಭರವಸೆಗಳನ್ನು ನೀಡಿದ್ದು, ರೈತ ಯುವಕರನ್ನು ಮದುವೆಯಾಗುವ ಯುವತಿಯರಿಗೆ ₹2 ಲಕ್ಷ ನೀಡುವುದಾಗಿ ಹೇಳಿದೆ. ಬಿಜೆಪಿ ಸರ್ಕಾರ ರದ್ದು ಮಾಡಿರುವ ಮುಸ್ಲಿಮರ ಶೇ.4ರಷ್ಟು ಮೀಸಲಾತಿಯನ್ನು ಮತ್ತೆ ಜಾರಿ ಮಾಡುವುದಾಗಿ ಜೆಡಿಎಸ್‌ ತನ್ನ ಪ್ರಣಾಳಿಕೆಯಲ್ಲಿ ತಿಳಿಸಿದೆ.

ಜೆಡಿಎಸ್ ಒಟ್ಟು 9 ವಿಭಾಗಗಳಲ್ಲಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಪಂಚರತ್ನ ಯೋಜನೆ, ಸಾಮಾಜಿಕ ಭದ್ರತೆಗಳು, ಕೈಗಾರಿಕಾ ಅಭಿವೃದ್ಧಿ, ಸಾರಿಗೆ ಮತ್ತು ಪ್ರವಾಸೋದ್ಯಮ, ಜಲಧಾರೆ, ರಸ್ತೆ ಅಭಿವೃದ್ಧಿ- ಸಂಪರ್ಕ ಸೇತುವೆಗಳು, ಇಂಧನ ವಲಯ, ಆಡಳಿತ ಸುಧಾರಣೆ, ಕೃಷಿ ಮತ್ತು ಹೈನುಗಾರಿಕೆಯ ವಿಭಾಗದಲ್ಲಿ ಬಿಡುಗಡೆ ಮಾಡಲಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? ಅಂತೂ-ಇಂತೂ ಪಿಯುಸಿ ‘ಪಾಸು’ ಮಾಡಿದ ಮಾಜಿ ಶಾಸಕರು

ಜೆಡಿಎಸ್‌ ಪ್ರಣಾಳಿಕೆಯ ಪ್ರಮುಖ ಅಂಶಗಳು

  • ಗರ್ಭಿಣಿ ತಾಯಂದಿರಿಗೆ 6 ತಿಂಗಳ ಕಾಲ ₹6,000 ಭತ್ಯೆ
  • ಸ್ತ್ರೀಶಕ್ತಿ ಸ್ವಸಹಾಯ ಸಂಘಗಳ ಸಾಲಮನ್ನಾ
  • ರೈತ ಯುವಕರನ್ನು ಮದುವೆ ಆಗುವ ಯುವತಿಯರಿಗೆ ₹2 ಲಕ್ಷ ಪ್ರೋತ್ಸಾಹ ಧನ
  • ವಿಧವಾ ವೇತನ ₹900 ರಿಂದ ₹2,500 ಹೆಚ್ಚಳ
  • ವರ್ಷಕ್ಕೆ 5 ಅಡುಗೆ ಅನಿಲ ಸಿಲಿಂಡರ್ ಉಚಿತ
  • ಹಿರಿಯ ನಾಗರಿಕರ ಮಾಸಾಶನವನ್ನು ₹1,200 ದಿಂದ ₹5000 ಗಳಿಗೆ ಏರಿಕೆ
  • ಕನಿಷ್ಠ 15 ವರ್ಷ ಸೇವೆ ಸಲ್ಲಿಸಿ ನಿವೃತ್ತರಾದ ಕಾರ್ಯಕರ್ತೆಯರಿಗೆ ಪಿಂಚಣಿ
  • ಬಿತ್ತನೆ ಬೀಜ, ರಸಗೊಬ್ಬರ ಖರೀದಿಗೆ ಪ್ರತಿ ಎಕರೆಗೆ ₹10,000 ಸಹಾಯ ಧನ
  • ಪ್ರತಿ ಕೃಷಿ ಕಾರ್ಮಿಕ ಕುಟುಂಬಕ್ಕೆ ಮಾಸಿಕ ₹2000 ಸಹಾಯಧನ
  • ಪ್ರತಿ ಆಟೋ ಚಾಲಕನಿಗೆ ಪ್ರತಿ ತಿಂಗಳು ₹2 ಸಾವಿರ ಮಾಸಾಶನ
  • ನೋಂದಾಯಿತ ಖಾಸಗಿ ಸೆಕ್ಯೂರಿಟಿ ಗಾರ್ಡ್‌ಗಳಿಗೆ ಮಾಸಿಕ ₹2 ಸಾವಿರ ಸಹಾಯಧನ
  • ಅಂಗನವಾಡಿ ಕಾರ್ಯಕರ್ತೆಯರಿಗೆ, ಸಹಾಯಕರಿಗೆ ಮತ್ತು ಮಿನಿ ಅಂಗನವಾಡಿ ಕಾರ್ಯಕರ್ತೆಯರಿಗೆ ₹5000ವರೆಗೆ ಹೆಚ್ಚಿನ ವೇತನ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X