ಆರ್‌ಎಸ್‌ಎಸ್‌ನ ಕುತಂತ್ರಿಗಳು ನನ್ನ ಹೆಸರಲ್ಲಿ ನಕಲಿ ಪತ್ರ ಸೃಷ್ಟಿಸಿದ್ದಾರೆ: ಸಿದ್ದರಾಮಯ್ಯ

Date:

ಆರ್‌ಎಸ್‌ಎಸ್‌ನ ಕೆಲವು ಕುತಂತ್ರಿಗಳು ನನ್ನ ಹೆಸರಲ್ಲಿ ನಕಲಿ ಪತ್ರವನ್ನು ಸೃಷ್ಟಿಮಾಡಿ ನನಗೆ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಅವರ ನಡುವೆ ಭಿನ್ನಾಭಿಪ್ರಾಯಗಳನ್ನು ಉಂಟುಮಾಡಲು ಅಥವಾ ಭಿನ್ನಾಭಿಪ್ರಾಯಗಳು ಇವೆ ಎಂದು ಅಪಪ್ರಚಾರ ಮಾಡಲು ಹುನ್ನಾರ ಮಾಡಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

- Advertisement -

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಿದ್ದರಾಮಯ್ಯ ಹೆಸರಿನಲ್ಲಿ ಬರೆದಿರುವ ಪತ್ರವನ್ನು ತಮ್ಮದಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

“ನನ್ನ ಹೆಸರಿನಲ್ಲಿ ಎಐಸಿಸಿ ಅಧ್ಯಕ್ ಮಲ್ಲಿಕಾರ್ಜುನ ಖರ್ಗೆ ಅವರಿಗೆ ನಕಲಿ ಪತ್ರ ಬರೆಯಲಾಗಿದೆ. ಇದು ನಾನು ಬರೆದ ಪತ್ರ ಅಲ್ಲ. ಕೆಲವು ಕುತಂತ್ರಿಗಳು ನಕಲಿ ಪತ್ರವನ್ನು ಸೃಷ್ಟಿಮಾಡಿದ್ದಾರೆ. ನಾನು ಮತ್ತೊಮ್ಮೆ ಸ್ಪಷ್ಟಪಡಿಸಲಿಕ್ಕೆ ಬಯಸುತ್ತೇನೆ, ‘ಇದು ನಕಲಿ ಪತ್ರ, ನಾನು ಬರೆದ ಪತ್ರವಲ್ಲ’. ಇದನ್ನು ಆರ್.ಎಸ್.ಎಸ್ ನ ಕುತಂತ್ರಿಗಳು ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ. ಈ ಪತ್ರವನ್ನು ತಿರಸ್ಕರಿಸಬೇಕು” ಎಂದು ನಾಡಿನ ಜನತೆಗೆ ಮನವಿ ಮಾಡಿದ್ದಾರೆ.

ಈ ಬಗ್ಗೆ ಚುನಾವಣಾ ಆಯೋಗ ಮತ್ತು ಪೊಲೀಸರಿಗೆ ದೂರು ನೀಡುತ್ತೇನೆ. ಈ ನಕಲಿ ಪತ್ರದ ಹಿಂದೆ ಯಾರಿದ್ದಾರೆ ಎಂಬುದನ್ನು ಬಯಲಿಗೆಳೆಯಲು ಮತ್ತು ಅಂಥವರ ಮೇಲೆ ಕ್ರಮ ತೆಗೆದುಕೊಳ್ಳುವಂತೆ ದೂರು ಸಲ್ಲಿಸುತ್ತೇನೆ” ಎಂದು ತಿಳಿಸಿದ್ದಾರೆ.

2022ರಲ್ಲೂ ಇದೇ ಮಾದರಿಯ ನಕಲಿ ಪತ್ರವೊಂದನ್ನು ಸಿದ್ದರಾಮಯ್ಯ ಹೆಸರಲ್ಲಿ ಸೋನಿಯಾ ಗಾಂಧಿ ಅವರಿಗೆ ಬರೆಯಲಾಗಿತ್ತು. ಈಗ ಆ ಪತ್ರವನ್ನೇ ತಿದ್ದಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬರೆಯಲಾಗಿದೆ. ಈ ಹಿಂದೆ ಸಿದ್ದರಾಮಯ್ಯ ಈ ಬಗ್ಗೆ ದೂರು ನೀಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಝುಬಿನ್ ಗರ್ಗ್‌ಗೆ ನ್ಯಾಯಕ್ಕಾಗಿ ಆಗ್ರಹ: ನೂರಕ್ಕೂ ಹೆಚ್ಚು ಪ್ರತಿಭಟನಾಕಾರರು ಅಸ್ಸಾಂ ಪೊಲೀಸ್ ವಶಕ್ಕೆ

ಅಸ್ಸಾಂನ ಪ್ರಸಿದ್ಧ ಸಾಂಸ್ಕೃತಿಕ ಪ್ರತಿಭೆ, ಗಾಯಕ ಝುಬಿನ್ ಗರ್ಗ್ ಅವರ ಸಾವಿಗೆ...

ಯುಪಿ ಚುನಾವಣೆ | ಎಸ್‌ಪಿ ಜೊತೆ ಸೀಟು ಹಂಚಿಕೆಗೆ ಕಾಂಗ್ರೆಸ್ ಸಿದ್ಧತೆ; 125 ಸ್ಥಾನಗಳಿಗೆ ಪ್ರಿಯಾಂಕಾ ಪಡೆ ಬೇಡಿಕೆ!

ಉತ್ತರ ಪ್ರದೇಶದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ರಾಜಕೀಯ ಚಟುವಟಿಕೆಗಳು ಗರಿಗೆದರಿವೆ....

ಉತ್ತರ ಕನ್ನಡ: ಹಾಲಕ್ಕಿಗಳ ಹಾಡು-ಪಾಡು ಮತ್ತು ಮರೀಚಿಕೆಯಾದ ಮೀಸಲಾತಿ

ಹಾಲಕ್ಕಿಗಳಿಗೆ ಪರಿಶಿಷ್ಟ ಪಂಗಡ ಮೀಸಲಾತಿ ಮರೀಚಿಕೆ ಆಗುತ್ತಿದೆ. ಮೀಲಾತಿ ಕೊಡಿಸುವ ಬಣ್ಣ-ಬಣ್ಣದ...

ರಸ್ತೆ ತಡೆದು ಪೂಜಾ ಪೆಂಡಾಲ್ ಹಾಕುವಂತಿಲ್ಲ: ಒಡಿಶಾ ಹೈಕೋರ್ಟ್ ಆದೇಶ

ಸಾರ್ವಜನಿಕ ರಸ್ತೆಗಳಲ್ಲಿ ಹಬ್ಬದ ಪೂಜಾ ಪೆಂಡಾಲ್‌ಗಳ ನಿರ್ಮಾಣ ಮತ್ತು ರಸ್ತೆ ಬಂದ್...