ಬಿಜೆಪಿಯೊಳಗೆ ಲಿಂಗಾಯತರನ್ನು ಮುಗಿಸುತ್ತಿರುವವರು ಆರ್‌ಎಸ್‌ಎಸ್‌ನ ‘ವಿಘ್ನ ಸಂತೋಷಿ’ಗಳು: ಸಿದ್ದರಾಮಯ್ಯ

Date:

  • ಬಿಜೆಪಿಯೊಳಗೆ ಲಿಂಗಾಯತ ನಾಯಕರನ್ನು ಮುಗಿಸುವ ಸಂಚು
  • ನಿಜವಾದ ಶತ್ರುಗಳನ್ನು ಗುರುತಿಸಿ ಹೋರಾಡಲಿ ಎಂದು ಮನವಿ

ರಾಜ್ಯದಲ್ಲಿ ನೆಲೆಯೇ ಇಲ್ಲದಿದ್ದ ಬಿಜೆಪಿಯನ್ನು ಅಧಿಕಾರದ ಪೀಠದಲ್ಲಿ ತಂದು ಕುಳ್ಳಿರಿಸಿದ ಲಿಂಗಾಯತ ನಾಯಕ ಬಿ ಎಸ್ ಯಡಿಯೂರಪ್ಪನವರನ್ನು ಜೈಲಿಗೆ ಕಳಿಸಿದ್ದು ಆರ್‌ಎಸ್‌ಎಸ್‌ನ ‘ವಿಘ್ನ ಸಂತೋಷಿ’ಗಳೇ ಹೊರತು, ಕಾಂಗ್ರೆಸ್ ಅಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

- Advertisement -

ಲಿಂಗಾಯತ ಕುರಿತ ತಮ್ಮ ಹೇಳಿಕೆ ತಿರುಚಿರುವ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, “ರಾಜಕೀಯವಾಗಿ ತಮ್ಮನ್ನು ಮುಗಿಸಲು ಆರ್‌ಎಸ್‌ಎಸ್‌ನ ‘ವಿಘ್ನಸಂತೋಷಿ’ಗಳು ಮಾಡುತ್ತಿರುವ ಸಂಚನ್ನು ಅರಿಯದ ಬಿಜೆಪಿಯ ಲಿಂಗಾಯತ ನಾಯಕರು, ಕಾಂಗ್ರೆಸ್ ಲಿಂಗಾಯತ ವಿರೋಧಿ ಎಂಬ ಸುಳ್ಳು ಆರೋಪ ಮಾಡುತ್ತಾ ಕಾಲ ಕಳೆಯುತ್ತಿರುವುದು ವಿಷಾದನೀಯ” ಎಂದು ಟೀಕಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಜಗದೀಶ್ ಶೆಟ್ಟರ್‌ ಅವರ ರಾಜಕೀಯ ಜೀವನ ಮುಗಿಸುವ ಹುನ್ನಾರದ ರೂವಾರಿಗಳು ಕೂಡಾ ಇದೇ ‘ವಿಘ್ನ ಸಂತೋಷಿ’ ಗಳು. ಕಾಂಗ್ರೆಸ್ ಅಲ್ಲ. ಗೆಲ್ಲುವ ಅವಕಾಶವೇ ಇಲ್ಲದ ವರುಣಾ ಕ್ಷೇತ್ರದಲ್ಲಿ ಒಲ್ಲೆನೆಂದರೂ ಬಲತ್ಕಾರವಾಗಿ ವಿ ಸೋಮಣ್ಣ ಎಂಬ ಲಿಂಗಾಯತ ನಾಯಕನನ್ನು ಅಭ್ಯರ್ಥಿ ಮಾಡಿದ್ದು ಕೂಡಾ ಇದೇ ಆರ್‌ಎಸ್‌ಎಸ್‌ನ ‘ವಿಘ್ನ ಸಂತೋಷಿ’ಗಳು” ಎಂದು ಸಿದ್ದರಾಮಯ್ಯ ಕುಟುಕಿದ್ದಾರೆ.

‘ವಿಘ್ನ ಸಂತೋಷಿ’ಗಳ ಕೈವಾಡ

“ಲಕ್ಷ್ಮಣ ಸವದಿ, ಸೊಗಡು ಶಿವಣ್ಣ, ಸಂಜಯ್ ಪಾಟೀಲ್ ಮೊದಲಾದ ಲಿಂಗಾಯತ ನಾಯಕರಿಗೆ ಟಿಕೆಟ್ ನಿರಾಕರಿಸಿ ಅವರನ್ನು ರಾಜಕೀಯವಾಗಿ ಮುಗಿಸಲು ಪ್ರಯತ್ನಿಸಿದ್ದು ಕೂಡಾ ‘ವಿಘ್ನ ಸಂತೋಷಿ’ಗಳು. ಈಗ ಜಗದೀಶ್ ಶೆಟ್ಟರ್ ಅವರನ್ನು ಸೋಲಿಸುವ ಹೊಣೆಯನ್ನು ಕೂಡಾ ಯಡಿಯೂರಪ್ಪನವರ ಮೇಲೆ ಹೊರಿಸಲಾಗಿದೆ. ಇವರಲ್ಲಿ ಯಾರೂ ಸೋತರೂ ಒಬ್ಬ ಲಿಂಗಾಯತ ನಾಯಕರು ಸೋತ ಹಾಗೆ ಅಲ್ಲವೇ” ಎಂದು ಪ್ರಶ್ನಿಸಿದ್ದಾರೆ.

“ರಾಜ್ಯ ಬಿಜೆಪಿಯಲ್ಲಿರುವ ಲಿಂಗಾಯತ ಸಮುದಾಯದ ನಾಯಕರನ್ನು ನೋಡಿದಾಗ ‘ಹಾವಿನ ಹೆಡೆಯ ಮೇಲಿನ ಕಪ್ಪೆ ಹಾರುವ ನೊಣಕ್ಕೆ ಆಶಿಸಿದಂತೆ…’ ಎಂಬ ಬಸವಣ್ಣನವರ ವಚನ ನೆನಪಾಗುತ್ತಿದೆ. ಆದರೆ ಬಿಜೆಪಿಯಲ್ಲಿರುವ ಲಿಂಗಾಯತ ನಾಯಕರು ತಮ್ಮ ನಿಜವಾದ ಶತ್ರುಗಳು ಯಾರೆಂದು ಅರ್ಥಮಾಡಿಕೊಳ್ಳದೆ, ವೃಥಾ ಕಾಂಗ್ರೆಸ್ ನಾಯಕರ ಮೇಲೆ ಆರೋಪ ಮಾಡುವುದರಲ್ಲಿ ತಲ್ಲೀನರಾಗಿದ್ದಾರೆ. ಇದು ಕೂಡಾ ‘ವಿಘ್ನ ಸಂತೋಷಿ’ಗಳ ಹುನ್ನಾರವೇ ಆಗಿದೆ” ಎಂದು ಬಿ ಎಲ್‌ ಸಂತೋಷ್‌ಗೆ ಹೆಸರು ಪ್ರಸ್ತಾಪಿಸದೇ ಕಾಲೆಳೆದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಿಜೆಪಿ ಬಂಡಾಯ ನಾಯಕ ಕಾಂಗ್ರೆಸ್‌ ಸೇರ್ಪಡೆ; ವಿನಯ್‌ ಕುಲಕರ್ಣಿಗೆ ಆನೆ ಬಲ

ಲಿಂಗಾಯತ ನಾಯಕರ ತಲೆದಂಡ

“ಬದಲಾವಣೆಯ ಹೆಸರಲ್ಲಿ ಬಿಜೆಪಿಯೊಳಗಿನ ಆರ್‌ಎಸ್‌ಎಸ್‌ ‘ವಿಘ್ನ ಸಂತೋಷಿ’ಗಳು ಮಾಡುತ್ತಿರುವ ಈ ಎಲ್ಲ ಪ್ರಯೋಗಗಳು ಅಂತಿಮವಾಗಿ ಪಕ್ಷದೊಳಗಿನ ಹಿರಿಯ ಮತ್ತು ಪ್ರಭಾವಿ ಲಿಂಗಾಯತ ನಾಯಕರ ತಲೆದಂಡ ತೆಗೆದುಕೊಳ್ಳುವ ರಾಜಕೀಯ ಕುತಂತ್ರವೇ ಆಗಿದೆ ಎನ್ನುವುದನ್ನು ಬಿಜೆಪಿಯೊಳಗಿನ ಲಿಂಗಾಯತ ನಾಯಕರು ಮತ್ತು ಒಟ್ಟು ಲಿಂಗಾಯತ ಸಮುದಾಯ ಅರಿತುಕೊಳ್ಳಬೇಕಾಗಿದೆ” ಎಂದು ತಿಳಿಸಿದ್ದಾರೆ.

“ಈಗಲೂ ಕಾಲ ಮಿಂಚಿಲ್ಲ, ಬಿಜೆಪಿಯೊಳಗಿನ ಲಿಂಗಾಯತ ನಾಯಕರು ಕಲ್ಪಿತ ಶತ್ರುವಿನ ಮೇಲೆ ಆರೋಪ ಮಾಡುವುದನ್ನು ನಿಲ್ಲಿಸಿ ತಮ್ಮ ನಿಜವಾದ ಶತ್ರುಗಳನ್ನು ಗುರುತಿಸಿ ಹೋರಾಟ ಮಾಡಬೇಕು ಎಂದು ಮನವಿ ಮಾಡುತ್ತೇನೆ” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ವಿವಾದದ ನಡುವೆ ಒಡಿಶಾ ಮುಖ್ಯ ಚುನಾವಣಾಧಿಕಾರಿ ಸ್ವಯಂ ನಿವೃತ್ತಿಗೆ ಅರ್ಜಿ; ಆರ್ ಎಸ್ ಗೋಪಾಲನ್ ಹೇಳಿದ್ದೇನು?

ಒಡಿಶಾದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡ...

ಇಡಿ ಅಧಿಕಾರಿಗಳ ವಿರುದ್ಧ ಎಸ್‌ಸಿ/ಎಸ್‌ಟಿ ಪ್ರಕರಣ: ಪ್ರತಿಕ್ರಿಯಿಸಲು ವಿಳಂಬ ಮಾಡಿದ ಸಿಎಂ ಸೊರೇನ್‌ಗೆ ಜಾರ್ಖಂಡ್ ಹೈಕೋರ್ಟ್ ದಂಡ

ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳ ವಿರುದ್ಧ ದಾಖಲಾಗಿರುವ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ...

ದ್ವೇಷಭಾಷಣ ಆರೋಪ: TMC ಸಂಸದೆ ಮಹುವಾ ಮೊಯಿತ್ರಾಗೆ ಬಂಧನದಿಂದ ಮುಕ್ತಿ; ಕ್ಷೇತ್ರ ಭೇಟಿ ವೇಳೆ ಭದ್ರತೆ ನೀಡಲು ಹೈಕೋರ್ಟ್‌ ಸೂಚನೆ

ದ್ವೇಷಪೂರಿತ ಭಾಷಣ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಗಾಳದ ಟಿಎಂಸಿ...