ಮತ ಚಲಾಯಿಸಿ ಗಮನ ಸೆಳೆದ ಸ್ಯಾಂಡಲ್‌ವುಡ್‌ ತಾರೆಯರು

Date:

Advertisements

ಸಾಮಾನ್ಯರಂತೆ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ದರ್ಶನ್‌

ಭ್ರಷ್ಟಾಚಾರಿಗಳ ವಿರುದ್ಧ ಮತ ಚಲಾಯಿಸಿದ್ದೇನೆ ಎಂದ ಪ್ರಕಾಶ್‌ ರಾಜ್‌

ರಾಜ್ಯ ವಿಧಾನಸಭಾ ಚುನಾವಣೆಗೆ ಬುಧವಾರ ಬೆಳಗ್ಗೆಯಿಂದಲೇ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಹಿರಿಯ ನಟ ಶಿವರಾಜ್‌ ಕುಮಾರ್‌, ದರ್ಶನ್‌, ಗಣೇಶ್‌ ಸೇರಿದಂತೆ ಸ್ಯಾಂಡಲ್‌ವುಡ್‌ನ ಹಲವು ತಾರೆಯರು ತಮ್ಮ ಮತಗಟ್ಟೆಗಳಿಗೆ ತೆರಳಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.

Advertisements

ಬೆಂಗಳೂರಿನ ರಾಚೇನಹಳ್ಳಿಯಲ್ಲಿರುವ ಮತಗಟ್ಟೆಗೆ ಪತ್ನಿ ಗೀತಾ ಅವರೊಂದಿಗೆ ತೆರಳಿ ಶಿವರಾಜ್‌ ಕುಮಾರ್‌ ಮತ ಚಲಾಯಿಸಿದ್ದಾರೆ. ಮತದಾನದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿರುವ ಅವರು, “ಅತಿ ಹೆಚ್ಚು ಸಂಖ್ಯೆಯಲ್ಲಿ ಮತದಾನ ಮಾಡಿ, ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡಿ” ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಸ್ಯಾಂಡಲ್‌ವುಡ್‌ನ ಸ್ಟಾರ್‌ ನಟ ದರ್ಶನ್‌ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ಮತಗಟ್ಟೆಗೆ ತೆರಳಿ ಮತದಾನ ಮಾಡಿದ್ದಾರೆ. ಸಾಮಾನ್ಯರಂತೆ ಅವರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಗೋಲ್ಡನ್‌ ಸ್ಟಾರ್‌ ಗಣೇಶ್‌ ಕೂಡ ಇಂದು ಬೆಳಗ್ಗೆಯೇ ಮತದಾನ ಮಾಡಿದ್ದು, ಟ್ವಿಟರ್‌ ಖಾತೆಯಲ್ಲಿ ತಾವು ಮತ ಚಲಾಯಿಸಿರುವ ಗುರುತಿಗಾಗಿ ಫೋಟೋ ಹಂಚಿಕೊಂಡು, “ನಮ್ಮ ಒಂದು ಕ್ಷಣದ ನಿರ್ಧಾರ ನಾಡಿನ ಭವಿಷ್ಯವನ್ನೇ ಬದಲಿಸಬಲ್ಲದು. ವಿವೇಚನೆಯಿಂದ ಮತ ಹಾಕೋಣ. ನಾನು ಮತ ಹಾಕಿ ಬಂದೆ. ನೀವು?” ಎಂದು ತಮ್ಮ ಅಭಿಮಾನಿಗಳಿಗೆ ಮತ ಚಲಾವಣೆಗೆ ಕರೆ ನೀಡಿದ್ದಾರೆ.

ಬಹುಭಾಷಾ ನಟ ಪ್ರಕಾಶ್‌ ರಾಜ್‌ ಕೂಡ ಬೆಂಗಳೂರಿಗೆ ಆಗಮಿಸಿ ಶಾಂತಿನಗರದ ಮತಗಟ್ಟೆಯಲ್ಲಿ ಸಾಮಾನ್ಯರ ಜೊತೆಗೆ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ್ದಾರೆ. ಮತದಾನದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, “ನಾವು ಕೋಮುವಾದಿ ರಾಜಕಾರಣದ ವಿರುದ್ಧ ಮತ ಚಲಾಯಿಸಬೇಕಿದೆ. ಇಂತಹ ಚುನಾವಣೆಯ ಸಂದರ್ಭದಲ್ಲೇ ಜನ ತಮ್ಮ ನಿರ್ಧಾರವನ್ನು ಪ್ರಕಟಿಸುವ ಹಕ್ಕನ್ನು ಹೊಂದಿರುತ್ತಾರೆ. ಯಾವ ರೀತಿಯ ನಿರ್ಧಾರ ಕೈಗೊಳ್ಳಬೇಕು ಎಂಬುದು ಮತದಾರರಿಗೆ ಚೆನ್ನಾಗಿ ಗೊತ್ತಿರುತ್ತದೆ. ಕರ್ನಾಟಕ ಸರ್ವ ಜನಾಂಗದ ಶಾಂತಿಯ ತೋಟವಾಗಿ ಇರಬೇಕಿದೆ. ನಾವು ಸೌಹಾರ್ದತೆ‌ಯನ್ನು ಉಳಿಸಿಕೊಳ್ಳಬೇಕಿದೆ. ಕರ್ನಾಟಕದಿಂದ ಕೋಮುವಾದವನ್ನು ಕಿತ್ತೆಸೆಯಬೇಕಿದೆ” ಎಂದಿದ್ದಾರೆ.

ಖ್ಯಾತ ನಿರ್ದೇಶಕ ಮಂಸೋರೆ ಕೂಡ ತಮ್ಮ ಹುಟ್ಟೂರಿಗೆ ತೆರಳಿ ಮತ ಚಲಾಯಿಸಿದ್ದು, ಮತಗಟ್ಟೆಯ ಎದುರು ನಿಂತು ಮತದಾನದ ಗುರುತಿನ ಫೋಟೋವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

ʼಕಾಂತಾರʼ ಖ್ಯಾತಿಯ ನಟಿ ಸಪ್ತಮಿ ಗೌಡ ಕೂಡ ಮತ ಚಲಾವಣೆ ಮಾಡಿದ್ದು, “ನಿಮ್ಮ ಮತ, ನಿಮ್ಮ ಹಕ್ಕು. ನೀವು ಮತ ಚಲಾಯಿಸಿ” ಎಂದು ಅಭಿಮಾನಿಗಳಿಗೆ ಕರೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟ ,ನಿರ್ದೇಶಕ ಮುರಳಿ ಮೋಹನ್ ನಿಧನ; ಓಂ, ಶ್‌ ಸೇರಿ ಹಲವು ಚಿತ್ರಗಳಿಗೆ ಸಂಭಾಷಣೆ

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಮುರಳಿ ಮೋಹನ್ ಅವರು ನಿಧನರಾಗಿದ್ದಾರೆ. ಹಲವು...

ನಾವು ಬಾಯಿ ಮುಚ್ಚಿಕೊಂಡಿದ್ದರೆ ಮತದಾನದ ಹಕ್ಕು ಕಸಿದುಕೊಳ್ಳುವ ದಿನ ದೂರವಿಲ್ಲ: ನಟ ಕಿಶೋರ್ ಕುಮಾರ್

ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಮತಗಳ್ಳತನದ ಬಗ್ಗೆ ಲೋಕಸಭೆಯ ವಿಪಕ್ಷ...

ಹಣ ಪಡೆದು ವಂಚನೆ ಆರೋಪ: ನಟ ಧ್ರುವ ಸರ್ಜಾ ವಿರುದ್ಧ ಮಹಾರಾಷ್ಟ್ರದಲ್ಲಿ ಎಫ್‌ಐಆರ್‌ ದಾಖಲು

ಖ್ಯಾತ ನಿರ್ದೇಶಕ ಮತ್ತು ನಿರ್ಮಾಪಕ ರಾಘವೇಂದ್ರ ಹೆಗಡೆ ಅವರಿಗೆ ಕೋಟ್ಯಂತರ ರೂಪಾಯಿ...

Download Eedina App Android / iOS

X