ಬಿಜೆಪಿಗೆ ರಾಜೀನಾಮೆ ನೀಡಲು ಮುಂದಾದ ಸಂಗಣ್ಣ ಕರಡಿ

Date:

  • ಟಿಕೆಟ್ ವಿಚಾರವಾಗಿ ಬಂಡಾಯ ಸಾರಿದ ಸಂಗಣ್ಣ ಕರಡಿ
  • ಬೆಂಬಲಿಗರ ಸಭೆ ಬಳಿಕ ನಿರ್ಧಾರ ಪ್ರಕಟಿಸಲಿರುವ ಸಂಸದ

ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲೇ ಬಿಜೆಪಿಯಲ್ಲಿ ಬಂಡಾಯ ಸಾರುವ ನಾಯಕರ ಸಂಖ್ಯೆ ಹೆಚ್ಚಾಗುತ್ತಿದೆ. ಜಗದೀಶ್ ಶೆಟ್ಟರ್ ರಾಜೀನಾಮೆ ಬೆನ್ನಲ್ಲೇ ಮತ್ತೊಬ್ಬ ನಾಯಕ ಬಿಜೆಪಿಗೆ ‘ಗುಡ್‌ ಬೈ’ ಹೇಳಲು ಮುಂದಾಗಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾದ ಹಿನ್ನೆಲೆ ರಾಜ್ಯ ಬಿಜೆಪಿ ಬಂಡಾಯ ಬಿಸಿ ಎದುರಿಸುತ್ತಿದೆ. ಕೊಪ್ಪಳ ವಿಧಾನಸಭಾ ಕ್ಷೇತ್ರದ ಟಿಕೆಟ್ ವಿಚಾರವಾಗಿ ಹಾಲಿ ಸಂಸದ ಸಂಗಣ್ಣ ಕರಡಿ ಅವರು ಪಕ್ಷದ ವಿರುದ್ಧ ಬಂಡಾಯ ಸಾರಿ, ಬೆಂಬಲಿಗರ ಸಭೆ ಕರೆದಿದ್ದಾರೆ.

ಸಂಗಣ್ಣ ಕರಡಿ ಅವರು ಕೊಪ್ಪಳ ಕ್ಷೇತ್ರದ ಟಿಕೆಟ್​ ಕೇಳಿದ್ದು, ವರಿಷ್ಠರು ಸಂಸದರಿಗೆ ಟಿಕೆಟ್ ಇಲ್ಲ ಎಂದು ಹೇಳಿದ್ದಾರೆ. ಕೊನೆಗೆ ತಮ್ಮ ಪುತ್ರ ಗವಿಸಿದ್ದಪ್ಪ ಕರಡಿಗೆ ಟಿಕೆಟ್ ನೀಡಿ ಎಂದಿದ್ದು, ಪುತ್ರನಿಗು ಕೂಡಾ ಟಿಕೆಟ್ ನೀಡಲು ವರಿಷ್ಠರು ನಿರಾಕರಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಹಿನ್ನೆಲೆ ಬಿಜೆಪಿಗೆ ರಾಜೀನಾಮೆ ಸಲ್ಲಿಸಲು ಮುಂದಾಗಿರುವ ಸಂಗಣ್ಣ ಕರಡಿ ಅವರು ಬೆಂಬಲಿಗರ ಸಭೆ ಬಳಿಕ ತಮ್ಮ ನಿರ್ಧಾರ ಪ್ರಕಟಿಸಲಿದ್ದಾರೆ.

ಈ ಸುದ್ದಿ ಓದಿದ್ದೀರಾ? ಜೈ ಭಾರತ ಸತ್ಯಾಗ್ರಹ ಯಾತ್ರೆಗೆ ಸಜ್ಜಾದ ಕೋಲಾರ; ಪ್ರಜಾಪ್ರಭುತ್ವದ ಉಳಿವಿಗೆ ರಾಹುಲ್ ಪ್ರಚಾರ

ಈ ಕುರಿತು ಮಾತನಾಡಿದ ಅವರು, “ನನಗೆ ಟಿಕೆಟ್ ಕೊಡುವುದಾಗಿ ಈ ಮೊದಲು ರಾಜ್ಯ ನಾಯಕರು ಭರವಸೆ ನೀಡಿದ್ದರು. ಬಿ ಎಸ್ ಯಡಿಯೂರಪ್ಪ ಅವರು ಸಹ ನನ್ನ ಹೆಸರನ್ನು ಶಿಫಾರಸು ಮಾಡಿದ್ದರು. ಪಕ್ಷದ ಆಂತರಿಕ ಸಮೀಕ್ಷೆಯ ವರದಿ ನನ್ನ ಪರವಾಗಿಯೇ ಬಂದಿದೆ. ಆದ್ದರಿಂದ ನನಗೇ ಟಿಕೆಟ್‌ ಕೊಡಬೇಕು” ಎಂದು ಪಟ್ಟು ಹಿಡಿದಿದ್ದಾರೆ.

ಆದರೆ, ಬಿಜೆಪಿ ಹೈಕಮಾಂಡ್‌ ಕೊಪ್ಪಳ ಕ್ಷೇತ್ರಕ್ಕೆ ಅಭ್ಯರ್ಥಿ ಹೆಸರು ಘೋಷಣೆ ಮಾಡುವುದನ್ನು ತಡೆ ಹಿಡಿದಿದೆ. ತಮಗೆ ಟಿಕೆಟ್ ಸಿಗದ ಸುಳಿವು ದೊರಕಿರುವ ಸಂಗಣ್ಣ ಕರಡಿ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ. ನಂತರ ಲೋಕಸಭೆ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ.

ಸಂಗಣ್ಣ ಕರಡಿ ಅವರು ಮೊದಲ ಬಾರಿಗೆ 1994ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಬಳಿಕ 2008ರಲ್ಲಿ ಜೆಡಿಯುನಿಂದ, 2011ರ ಉಪಚುನಾವಣೆಯಲ್ಲಿ ಬಿಜೆಪಿಯಿಂದ, 2004 ಮತ್ತು 2013ರಲ್ಲಿ ಬಿಜೆಪಿಯಿಂದ ಕಣಕ್ಕಿಳಿದು ಸೋತಿದ್ದರು. 2014 ಮತ್ತು 2019ರಲ್ಲಿ ಸಂಸದರಾಗಿ ಆಯ್ಕೆಯಾದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪೆನ್‌ಡ್ರೈವ್ ಕಾಮಕೃತ್ಯ | ಹಾಸನಕ್ಕೆ ಸೀಮಿತವಾ? ರಾಜ್ಯ ಮತದಾರರ ಕರ್ತವ್ಯವೇನು?

ರಾಯಕೀಯ ಯುವ ನಾಯಕನೊಬ್ಬರ ಕಾಮಕೃತ್ಯಗಳ ಪೆನ್‌ಡ್ರೈನ್‌ ಹಾಸನ ಜಿಲ್ಲೆಯಲ್ಲಿ ಅಂತಕ ಸೃಷ್ಟಿಸಿದೆ....

ಮುಸ್ಲಿಂ ಮೀಸಲಾತಿ | ಪ್ರಧಾನಿ ಮೋದಿ ಸುಳ್ಳು ಹೇಳುತ್ತಿದ್ದಾರೆ: ರವಿವರ್ಮ ಕುಮಾರ್

ಮುಸ್ಲಿಂರನ್ನು ಹಿಂದುಳಿದ ಪಟ್ಟಿಗೆ ಸೇರಿಸಿದ್ದಾರೆ ಅಂತ ಹೇಳಲಾಗುತ್ತಿದೆ. ಹಿಂದುಳಿದ ಮೀಸಲಾತಿ ಮುಸ್ಲಿಂರಿಗೆ...

ಮಸ್ಲಿಮರನ್ನು ಒಬಿಸಿಗೆ ಸೇರಿಸಿದ್ದು ನಾಲ್ವಡಿ ಕೃಷ್ಣರಾಜ ಒಡೆಯರ್‌: ಮೋದಿಗೆ ದ್ವಾರಕಾನಾಥ್ ಇತಿಹಾಸ ಪಾಠ

"ಒಬಿಸಿಗಳನ್ನು ಮುಸ್ಲಿಮರ ವಿರುದ್ಧ ಎತ್ತಿಕಟ್ಟುವ ಸಂಚನ್ನು ಮೋದಿ ರೂಪಿಸಿದ್ದಾರೆ, ಮಂಡಲ್‌ ಆಯೋಗ...

ಹಾಸನದ ‘ಪೆನ್‌ಡ್ರೈವ್’ ನಮಗೂ ತಲುಪಿದೆ; ಎಸ್ಐಟಿ ರಚಿಸಲು ಸಿಎಂಗೆ ಮನವಿ: ಮಹಿಳಾ ಆಯೋಗ

ರಾಜ್ಯದ ರಾಜಕೀಯ ವಲಯದಲ್ಲಿ ಭಾರೀ ಸುದ್ದಿ ಮಾಡುತ್ತಿರುವ ಹಾಸನದ ಪೆನ್‌ಡ್ರೈವ್‌ ಬಗ್ಗೆ...