ಕಳೆದ 4 ವರ್ಷದಲ್ಲಿ ತಮಗಾದ ಅನುಭವ ನೋಡಿ ಮತ ಚಲಾಯಿಸಿ: ಪ್ರಿಯಾಂಕಾ ಗಾಂಧಿ

Date:

  • ಕುಂದಗೋಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಶಿವಳ್ಳಿ ಪರ ಪ್ರಚಾರ
  • ʼರಾಜ್ಯದ ಭ್ರಷ್ಟ ಬಿಜೆಪಿ ಸರ್ಕಾರದ ದುರಾಡಳಿತದಿಂದ ಜನ ಬೇಸತ್ತಿದ್ದಾರೆʼ

ನಾನು ನಿಮ್ಮಲ್ಲಿ ಕಳಕಳಿಯ ವಿನಂತಿ ಮಾಡುವುದೇನೆಂದರೆ, ಕಳೆದ 4 ವರ್ಷಗಳಲ್ಲಿ ತಮಗೆ ಆದ ಅನುಭವ ನೋಡಿ ಮತ ಚಲಾಯಿಸಿ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಹೇಳಿದರು.

- Advertisement -

ಕುಂದಗೋಳ ವಿಧಾನಸಭಾ ಕ್ಷೇತ್ರದಲ್ಲಿ ಶನಿವಾರ ನಡೆದ ಕಾಂಗ್ರೆಸ್‌ ಪ್ರಚಾರ ವೇಳೆ ಮಾತನಾಡಿ, “ಕಳೆದ ಮೂರು ವರ್ಷಗಳಿಂದ ರಾಜ್ಯದ ಭ್ರಷ್ಟ ಬಿಜೆಪಿ ಸರ್ಕಾರದ ದುರಾಡಳಿತದಿಂದ ಜನ ಬೇಸತ್ತಿದ್ದಾರೆ. ಯುವಕರು ಕೆಲಸವಿಲ್ಲದೇ ಇದ್ದಾರೆ. ಇದಕ್ಕೆಲ್ಲಾ ಕಾರಣ ರಾಜ್ಯದ ಬಿಜೆಪಿ ಸರ್ಕಾರ” ಎಂದು ವಾಗ್ದಾಳಿ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿಕ್ಕು ತೋಚದೆ ತಬ್ಬಿಬ್ಬಾಗಿರುವ ಚುನಾವಣಾ ಆಯೋಗ: ದಿನೇ ದಿನೆ...

ಸೆಪ್ಟೆಂಬರ್ 23ರ 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯ ವರದಿಯ ನಂತರ ಆಯೋಗ ಹಲವು ಸ್ಪಷ್ಟನೆಗಳನ್ನು ನೀಡಿದ್ದರೂ, ಒಂದು ಮುಖ್ಯ ಪ್ರಶ್ನೆಗೆ ಇನ್ನೂ ಉತ್ತರವಿಲ್ಲ: ಕಾನೂನುಬದ್ಧವಾಗಿ ಮತದಾರರ ಪಟ್ಟಿಯಲ್ಲಿದ್ದ 16 ಲಕ್ಷಕ್ಕೂ ಹೆಚ್ಚು ಜನರ...

ಸ್ಟಿಂಗ್ ಆಪರೇಷನ್ | ಭ್ರಷ್ಟಾಚಾರ ಬಯಲಿಗೆಳೆಯುವ ಸಾಧನವಾಗಬೇಕೇ ವಿನಾ...

ಆಡಳಿತ ಪಕ್ಷವನ್ನು ಪ್ರಶ್ನಿಸುವುದು ಪ್ರಜಾಪ್ರಭುತ್ವದ ಮೂಲಭೂತ ಕರ್ತವ್ಯ. ಆದರೆ, ವಿರೋಧ ಪಕ್ಷಗಳಿಗೂ ತಮ್ಮ ಆರೋಪಗಳನ್ನು ಸಮರ್ಥಿಸುವ ಹೊಣೆಗಾರಿಕೆ ಇದೆ. ರಾಜಕೀಯ ಲಾಭಕ್ಕಾಗಿ ಗಂಭೀರ ಆರೋಪಗಳನ್ನು ಮುಂದಿಡುವುದು ಮತ್ತು ಅವುಗಳ ಸತ್ಯಾಸತ್ಯತೆಯನ್ನು ಪರಿಶೀಲಿಸುವ ಪ್ರಕ್ರಿಯೆಯನ್ನು...

ಬೇಡ್ತಿ ನದಿ ತಿರುವು ಯೋಜನೆಯೂ, ಬೊಮ್ಮಾಯಿ-ಕಾಗೇರಿ ಪೀಕಲಾಟವೂ

ಉತ್ತರ ಕನ್ನಡ ಜಿಲ್ಲೆಯ ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಇದ್ದಕ್ಕಿದ್ದಂತೆಯೇ ಬೇಡ್ತಿ-ವರದಾ ಮತ್ತು ಬೇಡ್ತಿ-ಧರ್ಮ-ವರದಾ ನದಿ ಜೋಡಣೆ ಎಂಬ ಅವಳಿ ಗುಮ್ಮಗಳು ಎದ್ದು ಕುಳಿತು ಬೆಚ್ಚಿ ಬೀಳಿಸಿವೆ. ಸ್ವರ್ಣವಲ್ಲೀ ಸ್ವಾಮಿ, ಎಂಪಿ ಕಾಗೇರಿ ಮತ್ತು...

“ಬೆಲೆ ಏರಿಕೆಯಿಂದ ತತ್ತರಿಸಿದ ನಮ್ಮ ಮಹಿಳೆಯರಿಗೆ, ಪ್ರತಿಮನೆಯ ಯಾಜಮಾನಿಗೆ ಗೃಹಲಕ್ಷ್ಮಿ ಯೋಜನೆ ಮೂಲಕ 2000 ರೂ. ಪ್ರತಿ ತಿಂಗಳು ಕೊಡಲು ಕಾಂಗ್ರೆಸ್ ತೀರ್ಮಾನಿಸಿದೆ. ಕಾಂಗ್ರೆಸ್ ಘೋಷಿಸಿರುವ ಯುವನಿಧಿ ಗ್ಯಾರಂಟಿ ನಿರುದ್ಯೋಗಿ ಯುವಕ, ಯುವತಿಯರಿಗೆ ಮಾಸಿಕ ನಿರುದ್ಯೋಗ ಭತ್ಯೆ ನೀಡಲಾಗುವುದು. ಡಿಪ್ಲೋಮಾ ಆದವರಿಗೆ 1500 ರೂ., ಪದವೀಧರರಿಗೆ 3000 ರೂ. ನಿರುದ್ಯೋಗ ಭತ್ಯೆ ಕಾರ್ಯಕ್ರಮ ಕಾಂಗ್ರೆಸ್ ಹಮ್ಮಿಕೊಂಡಿದೆ” ಎಂದರು.

“ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ತಕ್ಷಣವೇ ಅನ್ನಭಾಗ್ಯ, ಕ್ಷೀರಭಾಗ್ಯ ಯೋಜನೆಯ ಕಾರ್ಯಕ್ರಮಗಳನ್ನು ಮತ್ತೊಮ್ಮೆ ಅನುಷ್ಠಾನ ಮಾಡಲಿದ್ದೇವೆ. ರಾಜ್ಯದ ಸರ್ಕಾರಿ ಬಸ್ಸುಗಳಲ್ಲಿ ರಾಜ್ಯದ ಪ್ರತಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗುವುದು” ಎಂದು ಹೇಳಿದರು.

“ಕುಂದಗೋಳ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಕುಸುಮಾ ಶಿವಳ್ಳಿ ಅವರನ್ನು ಅತ್ಯಧಿಕ ಬಹುಮತದಿಂದ ಗೆಲ್ಲಿಸಿ. ತಾವು ಈ ಬಾರಿಯ ಮತದಾನವನ್ನು ಕರ್ನಾಟಕ ರಾಜ್ಯದ ಸಮಗ್ರ ಅಭಿವೃದ್ಧಿಗೆ ಮತ್ತು ಉತ್ತಮ ಭವಿಷ್ಯವನ್ನು ರೂಪಿಸುವ ಕಾಂಗ್ರೆಸ್ ಪಕ್ಷಕ್ಕೆ ಮತಹಾಕಿ” ಎಂದು ಪ್ರಿಯಾಂಕಾ ಗಾಂಧಿ ಮನವಿ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗ್ಯಾನೇಶ್‌ ಕುಮಾರ್ ಗಂಡಾಂತರ – ಪಾರಾಗುವರೇ ಮೋದಿ?

1975ರಲ್ಲಿ ಇಸ್ರೇಲ್‌ ಪ್ರವಾಸದಲ್ಲಿದ್ದ ಅಂದಿನ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಹೆನ್ರಿ ಕಿಸ್ಸಿಂಜರ್,...

ಗ್ಯಾನೇಶ್‌ ಅಪ್ರೂವರ್ ಆಗಿಬಿಡಿ; ಸುಪ್ರೀಂ ಕೋರ್ಟ್ ಅಂಗಳದಲ್ಲಿ ‘ಇಂಡಿಯಾ’ ಮೈತ್ರಿಕೂಟದ ಶಕ್ತಿ ಪ್ರದರ್ಶನ

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಮತ್ತು ಎಸ್‌ಐಆರ್‌...