ಬಾಂಬೆ ಬಾಯ್ಸ್‌ಗೆ ಹಿನ್ನಡೆ; ಹಲವು ಸಚಿವರಿಗೂ ಸೋಲಿನ ಭೀತಿ

Date:

ಕಾಂಗ್ರೆಸ್ ಹಾಗೂ ಜೆಡಿಎಸ್ ಸರ್ಕಾರದ ಪತನಕ್ಕೆ ಕಾರಣರಾಗಿದ್ದ ಬಾಂಬೆ ಬಾಯ್ಸ್‌ಗೆ ಸೋಲಿನ ಭೀತಿ ಸುತ್ತಿಕೊಂಡಿದೆ. ಹಲವರು ಅವರ ಕ್ಷೇತ್ರಗಳಲ್ಲಿ ಹಿನ್ನಡೆ ಸಾಧಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಡಾ.ಕೆ.ಸುಧಾಕರ್ ಕಾಂಗ್ರೆಸ್‌ನ ಪ್ರದೀಪ್ ಈಶ್ವರ್ ಅಯ್ಯರ್ ವಿರುದ್ಧ ಹಿನ್ನಡೆ ಸಾಧಿಸಿದ್ದಾರೆ.

ಹಿರೇಕೆರೂರಿನಲ್ಲಿ ಬಿ ಸಿ ಪಾಟೀಲ್ ಹಿನ್ನಡೆ ಸಾಧಿಸಿದ್ದರೆ, ಗೋಕಾಕ್ ಕ್ಷೇತ್ರದಲ್ಲಿ ರಮೇಶ್ ಜಾರಕಿಹೊಳಿ ಹಿನ್ನಡೆ ಸಾಧಿಸಿದ್ದಾರೆ. ಇನ್ನು ಹೊಸಕೋಟೆಯಲ್ಲಿ ಬಿಜೆಪಿಯ ಎಂಟಿಬಿ ನಾಗರಾಜ್‌ಗೆ ಹಿನ್ನಡೆ ಸಾಧಿಸಿದ್ದಾರೆ. ಕೊಳ್ಳೇಗಾಲ ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಎನ್ ಮಹೇಶ್ ಕೂಡ ಹಿನ್ನಡೆ ಸಾಧಿಸಿದ್ದಾರೆ. 2018ರಲ್ಲಿ ಎನ್ ಮಹೇಶ್ ಬಿಎಸ್‌ಪಿಯಿಂದ ಗೆದ್ದಿದ್ದ ಏಕೈಕ ಶಾಸಕರಾಗಿದ್ದರು. ನಂತರ ಅವರು ಬಿಜೆಪಿ ಸೇರಿದ್ದರು.

ಕಾಂಗ್ರೆಸ್ ಹಾಗೂ ಜೆಡಿಎಸ್‌ನಿಂದ ಬಿಜೆಪಿಗೆ ಹಾರಿದ್ದ 16 ಮಂದಿ ಶಾಸಕರು ನಂತರ ಬಿಜೆಪಿ ಸರ್ಕಾರ ಬರಲು ಕಾರಣರಾಗಿದ್ದರು. ಅವರ ಪೈಕಿ ಸದ್ಯ ಹಲವರು ಹಿನ್ನಡೆ ಸಾಧಿಸಿದ್ದು, ಸೋಲಿನ ಆತಂಕದಲ್ಲಿದ್ದಾರೆ. ಆದರೆ, ಇನ್ನೂ ಹಲವು ಹಂತಗಳು ಬಾಕಿಯಿದ್ದು, ಮುಂದಿನ ಹಂತಗಳಲ್ಲಿ ತಮ್ಮ ಮತ ಗಳಿಕೆ ಹೆಚ್ಚಾಗಬಹುದು ಎನ್ನುವ ವಿಶ್ವಾಸದಲ್ಲಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇದಲ್ಲದೇ ಚುಣಾವಣಾ ಕಣದಲ್ಲಿರುವ ಎಂಟು ಸಚಿವರು ಹಿನ್ನಡೆ ಸಾಧಿಸಿದ್ದಾರೆ. ವರುಣಾ ಹಾಗೂ ಚಾಮರಾಜನಗರ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿರುವ ಸಚಿವ ಸೋಮಣ್ಣ, ಹಾಲಪ್ಪ ಆಚಾರ್, ರಾಮುಲು ಸೇರಿದಂತೆ ಹಲವು ಸಚಿವರು ಸದ್ಯಕ್ಕೆ ಸ್ಥಿತಿಯಲ್ಲಿ ಹಿನ್ನಡೆ ಸಾಧಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಾಮರಾಜನಗರ | ಮತದಾನ ಬಹಿಷ್ಕಾರ; ಮನವೊಲಿಸಲು ಹೋದ ಅಧಿಕಾರಿಗಳ ಮೇಲೆ ಹಲ್ಲೆ

ರಾಜ್ಯ 14 ಕ್ಷೇತ್ರಗಳಲ್ಲಿ ಶಾಂತಿಯುತವಾಗಿ ಮತದಾನ ನಡೆಯುತ್ತಿದ್ದು, ಕೆಲವೆಡೆ ಮತದಾನ ಬಹಿಷ್ಕಾರ...

ಮೋದಿಯವರ ‘ಚಾರ್‌ ಸವ್ ಪಾರ್’ ಘೋಷಣೆ ಹಿಂದಿನ ಉದ್ದೇಶವೇನು? ಅರಿತಿದ್ದಾರೆಯೇ ‘ಒಬಿಸಿ’ಗಳು!

ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನದ ಮೂಲ ರಚನೆಯನ್ನು ಬದಲಾಯಿಸುವುದಿಲ್ಲ. ಮೀಸಲಾತಿಯನ್ನು...

ಭಯಗೊಂಡಿರುವ ಪ್ರಧಾನಿ ವೇದಿಕೆಯಲ್ಲೇ ಕಣ್ಣೀರು ಹಾಕಬಹುದು: ರಾಹುಲ್ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ನಡೆಸಿರುವ ವಾಗ್ದಾಳಿಗೆ ತಿರುಗೇಟು ನೀಡಿರುವ...

ಉಡುಪಿ | ನಾನು ಮತ ಹಾಕಿರುವ ಅಭ್ಯರ್ಥಿ ನೂರಕ್ಕೆ ನೂರರಷ್ಟು ಗೆಲ್ಲುತ್ತಾರೆ: ನಟ ರಕ್ಷಿತ್ ಶೆಟ್ಟಿ

ಲೋಕಸಭಾ ಚುನಾವಣೆ ಹಿನ್ನೆಲೆ, ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ರಾಜಕಾರಣಿಗಳು,...