ಶಿವಮೊಗ್ಗ | ಬೇಸಿಗೆಗೂ ಮುನ್ನ ಶರಾವತಿಯಲ್ಲಿ ವಿದ್ಯುತ್ ಉತ್ಪಾದನೆ ಸ್ಥಗಿತ ಸಾಧ್ಯತೆ

Date:

ಶರಾವತಿ ನದಿಗೆ ಅಡ್ಡಲಾಗಿ ಕಟ್ಟಲಾಗಿರುವ ಲಿಂಗನಮಕ್ಕಿ ಜಲಾಶಯದ ವಿದ್ಯುದಾಗಾರದಲ್ಲಿ ನೀರಿನ ಕೊರತೆ ಉಂಟಾಗಿದೆ. ಮಳೆ ಕೈ ಕೊಟ್ಟಿರುವ ಹಿನ್ನೆಲೆಯಲ್ಲಿ ಜಲಾಶಯದಲ್ಲಿ ನೀರಿನ ಮಟ್ಟ ದಿನೆದಿನೇ ಕ್ಷೀಣಿಸುತ್ತಿದೆ. ಬೇಸಿಗೆ ಬರುವಷ್ಟರಲ್ಲಿ ಜಲಾಶಯದ ಜಲವಿದ್ಯುತ್ ಉತ್ಪಾದನೆ ಹಂತಹಂತವಾಗಿ ಸ್ಥಗಿತಗೊಳ್ಳುವ ಸಾಧ್ಯತೆ ಇದೆ.

- Advertisement -

ರಾಜ್ಯದಲ್ಲಿ ಈಗಿನಿಂದಲೇ ಲೋಡ್ ಶೆಡ್ಡಿಂಗ್ ಜಾರಿಯಾಗಿದ್ದು ರೈತರು, ಜನರು ವಿದ್ಯುತ್ ವ್ಯತ್ಯಯದಿಂದ ಪರಿತಪಿಸುತ್ತಿದ್ದಾರೆ. ಜನರು ಬೇಸಿಗೆಯಲ್ಲಿ ಇನ್ನಷ್ಟು ಸಂಕಷ್ಟ ಎದುರಿಸುವ ಲಕ್ಷಣಗಳು ಗೋಚರಿಸುತ್ತಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಲಿಂಗಮನಕ್ಕಿ ಜಲಾಶಯದಲ್ಲಿ ವಿದ್ಯುತ್ ಉತ್ಪಾದನೆಗೆ ಇನ್ನು ಕೇವಲ 140ದಿನಕ್ಕೆ ಸಾಕಾಗುವಷ್ಟು ಮಾತ್ರ ನೀರಿದೆ. ಮಳೆ ಬಾರದೇ ಹೋದರೆ ಬೇಸಿಗೆಯ ಹೊತ್ತಿಗೆ ಜಲಾಶಯದ ನೀರು ಡೆಡ್ ಸ್ಟೋರೇಜ್ ತಲುಪಲಿದೆ.

ಸಾಕಷ್ಟು ಸಂದಿಗ್ಧ ಪರಿಸ್ಥಿತಿಯಲ್ಲಿ ಬೇಡಿಕೆ ತಕ್ಕಷ್ಟು ವಿದ್ಯುತ್ ಪೂರೈಸಿದ ಹೆಗ್ಗಳಿಕೆ ಶರಾವತಿ ಕೊಳ್ಳದ ವಿದ್ಯುದಾಗಾರಗಳಿಗಿದೆ. ಆದರೆ‌, ಈ ಬಾರಿ ಮಳೆ ಕೊರತೆಯಿಂದ ಲಿಂಗನಮಕ್ಕಿ ಜಲಾಶಯ ಶೇ. 50ರಷ್ಟು ಮಾತ್ರ ಭರ್ತಿಯಾಗಿದೆ. ಈ ಐದು ಜಲ ವಿದ್ಯುದಾಗಾರಗಳಿಂದ ರಾಜ್ಯದ ವಿದ್ಯುತ್ ಬೇಡಿಕೆಯ ಶೇ. 25ರಷ್ಟು ಪೂರೈಸಬಹುದು.

ಜಲಾಶಯದಲ್ಲಿ ಬುಧವಾರ (ಸೆ.25) 1,786.30ಅಡಿ ನೀರಿತ್ತು. ಒಳ ಹರಿವು 629 ಕ್ಯೂಸೆಕ್. ಹಾಲಿ ವಿದ್ಯುತ್​ಗೆ 2,691.75 ಕ್ಯೂಸೆಕ್ ನೀರನ್ನು ಬಳಸಲಾಗುತ್ತಿದೆ. ಹಾಲಿ ಜಲಾಶಯದಲ್ಲಿ 43.45% ನೀರಿದೆ. ಕಳೆದ ವರ್ಷ ಜಲಾಶಯದಲ್ಲಿ ಈ ವೇಳೆಗೆ 1,813.60ಅಡಿ ನೀರಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...