ಶಿವಮೊಗ್ಗ | ಸಂಯುಕ್ತ ಮುಸ್ಲಿಂ ಒಕ್ಕೂಟದಿಂದ ಕಾಶ್ಮೀರದ ಭಯೋತ್ಪಾದಕ ದಾಳಿಗೆ ಖಂಡನೆ

Date:

ಏ 23 ಕಣಿವೆ ರಾಜ್ಯ ಜಮ್ಮು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ಪಹಲ್ಟಾಮ್‌ ಬೈಸರನ್ ವ್ಯಾಲಿಯಲ್ಲಿ ಮಂಗಳವಾರ ಮಧ್ಯಾಹ್ನ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯನ್ನು ತೀರ್ಥಹಳ್ಳಿ ತಾಲ್ಲೂಕು ಸಂಯುಕ್ತ ಮುಸ್ಲಿಂ ಒಕ್ಕೂಟ ತೀರ್ಥಹಳ್ಳಿಯ ಜಾಮೀಯಾ ಆಡಳಿತ ಮಂಡಳಿ ತೀವ್ರವಾಗಿ ಖಂಡಿಸುತ್ತದೆ.

- Advertisement -

ಮಸೀದಿ ಈ ದೇಶದ್ರೋಹಿ ಮನುಕುಲದ ವಿರೋಧಿಗಳಾದ ಯಾವುದೇ ವ್ಯಕ್ತಿ/ ಸಂಘಟನೆ ನಡೆಸಿದ ಈ ಪೈಶಾಚಿಕ ಹೇಯ ಕೃತ್ಯ ನಿಜಕ್ಕೂ ಕಣ್ಣೀರು ತರಿಸುತ್ತದೆ. ಈ ದೇಶದ್ರೋಹಿ ಸಮಾಜಘಾತುಕರು ಪ್ರವಾಸಿಗಳನ್ನು ನಿರ್ಧಾಕ್ಷಿಣ್ಯವಾಗಿ ಗುಂಡಿಕ್ಕಿ ಕೊಂದಿರುವುದು ಇಡೀ ದೇಶವೇ ಬೆಚ್ಚಿಬಿದ್ದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...
1001518956

ಭೂಸ್ವರ್ಗವೆಂದೇ ಖ್ಯಾತಿ ಪಡೆದಿರುವ ಕಣವೆ ರಾಜ್ಯದಲ್ಲಿ ಭಯೋತ್ಪಾದಕರು ಕೇವಲ ಒಂದು ಧರ್ಮೀಯರನ್ನು ಗುರಿಯಾಗಿಸಿಕೊಂಡು ಹತ್ಯೆ ಎಸಗಿರುವುದು ದೇಶದ ದುರಂತವೇ ಸರಿ. ಇದನ್ನು ದೇಶದ ಎಲ್ಲಾ ಸಮುದಾಯದ ಪ್ರತಿಯೊಬ್ಬ ಪ್ರಜೆಯೂ ಖಂಡಿಸಬೇಕಾದ ಕೃತ್ಯ.28 ಜನ ಪ್ರವಾಸಿಗರನ್ನು ಬಲಿ ತೆಗೆದುಕೊಂಡ ಈ ಕೃತ್ಯದಲ್ಲಿ ಪ್ರಾಣ ಕಳೆದುಕೊಂಡ ಮೂಲತ: ತೀರ್ಥಹಳ್ಳಿಯವರಾದ ಶಿವಮೊಗ್ಗದ ಮಂಜುನಾಥ್‌ರಾವ್, ಬೆಂಗಳೂರಿನ ಭರತ್‌ ಭೂಷಣ್ ಹಾಗೂ ಎಲ್ಲಾ ಮೃತರ ಆತ್ಮಕ್ಕೆ ಚಿರಶಾಂತಿ ಲಭಿಸಲಿ, ಮೃತರ ಮೃತರ ಕುಟುಂಬಗಳಿಗೆ ದು:ಖವನ್ನು ಸೈರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇವೆ.ದೇಶದಲ್ಲಿ ದಿನೇ ದಿನೇ ಹೆಚ್ಚಾಗುತ್ತಿರುವ ಭಯೋತ್ಪಾದನೆ ಮತ್ತು ದೇಶದ್ರೋಹಿ ಚಟುವಟಿಕೆಗಳಲ್ಲಿ ನಿರತರಾಗಿರುವ ವ್ಯಕ್ತಿ ಮತ್ತು ಸಂಘಟನೆಗಳನ್ನು ಸಂಪೂರ್ಣ ಮಟ್ಟ ಹಾಕುವ ಅಗತ್ಯವಿದೆ.

ದೇಶದ ಎಲ್ಲಾ ಸಮುದಾಯದ ಪ್ರಜೆಗಳು ಇಂತಹ ಭಯೋತ್ಪಾದನೆ ಮಟ್ಟ ಹಾಕುವಲ್ಲಿ ಸಂಘಟಿತರಾಗುವ ಅವಶ್ಯಕತೆಯೂ ಇದೆ. ಈ ಪೈಶಾಚಿಕ ಕೃತ್ಯ ನಡೆಸಿದ ಯಾರೇ ಆಗಿರಲಿ, ಸರ್ಕಾರ ಅವರಿಗೆ ತಕ್ಕ ಶಿಕ್ಷೆಯನ್ನು ವಿಧಿಸಬೇಕೆಂದು ಈ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಅಗ್ರಹಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ | ಯುವತಿ ಆತ್ಮಹತ್ಯೆಗೆ ಶರಣು

ಸಾಗರ ತಾಲೂಕಿನ ಆನಂದಪುರ ಸಮೀಪದ ಎಡೆಹಳ್ಳಿ ಗ್ರಾಮದಲ್ಲಿ ಯುವತಿ ನೇಣು ಬಿಗಿದುಕೊಂಡು...

ಹೊಳೆಹೊನ್ನೂರು | ಗಣಪತಿ ವಿಸರ್ಜಿಸಲು ಹೋದ ಬಾಲಕ ನೀರುಪಾಲು

ಹೊಳೆಹೊನ್ನೂರು ಭದ್ರಾ ಚಾನಲ್​ನಲ್ಲಿ ದುರ್ಘಟನೆಯೊಂದು ಸಂಭವಿಸಿದೆ. ಗಣಪತಿ ವಿಸರ್ಜನೆ ಸಂದರ್ಭದಲ್ಲಿ ಚಾನಲ್​ನಲ್ಲಿ...

ಭದ್ರಾವತಿ | ಪೊಲೀಸ್‌ ಠಾಣೆ ಕಾರ್ಯವೈಖರಿ ತಿಳಿಸಲು ವಿದ್ಯಾರ್ಥಿಗಳಿಗೆ ʼತೆರೆದ ಮನೆʼ ಕಾರ್ಯಕ್ರಮ

ಭದ್ರಾವತಿಯ ಭದ್ರಾ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪೊಲೀಸ್ ಠಾಣೆಯ ಕಾರ್ಯವೈಖರಿಯ ಬಗ್ಗೆ ಅರಿವು...

ಈಗ ಸ್ವತಂತ್ರ, ನ್ಯಾಯೋಚಿತ ಚುನಾವಣೆ ನಡೆಯುತ್ತಿಲ್ಲ: ಶಿವಸುಂದರ್‌ ಆತಂಕ

"ಚುನಾವಣಾತ್ಮಕ ಸರ್ವಾಧಿಕಾರಿ ದೇಶವಾಗಿ ಭಾರತ ಹೊಮ್ಮಿದೆ, ಚುನಾವಣೆ ನಡೆಯುತ್ತಿರುವ ಕಾರಣಕ್ಕೆ ಇದನ್ನು...